ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿರುದ್ದ ಇಲ್ಲ. ಎಲ್ಲರೂ ಕೂಡ ಅವರ ಅಭಿಮಾನಿಗಳೇ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಿಎಂ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಏಕೆ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅವರನ್ನು ಸಹಿಸಿಕೊಳ್ಳಕ್ಕೆ ಆಗುವುದಿಲ್ಲ ಎಂದರೆ ಅವರು ದಾಖಲೆಯ ಬಜೆಟ್ ಮಂಡನೆ ಮಾಡಲು ಸಾಧ್ಯವೇ?. ಸಿಎಂ ಆಗಿ ದೇವರಾಜ ಅರಸು ದಾಖಲೆ ಮುರಿದಿದ್ದಾರೆ. ಒಳ್ಳೆಯ ಆಡಳಿತ ನೀಡುತ್ತಿದ್ದಾರೆ’ ಎಂದು ನುಡಿದರು.
ಇದನ್ನು ಓದಿದ್ದೀರಾ? ಆಸ್ಟ್ರೇಲಿಯಾ ನೆಲದಲ್ಲಿ ಭಾರತೀಯ ವನಿತೆಯರ ಐತಿಹಾಸಿಕ ಸಾಧನೆ: 10 ವರ್ಷಗಳ ಬಳಿಕ ಟಿ20 ಸರಣಿ ಕೈವಶ
ಈ ಹಿಂದಿನ ಕಾಂಗ್ರೆಸ್ ಅವಧಿಯಲ್ಲಿ ಹಲವು ಭಾಗ್ಯಗಳನ್ನು ನೀಡಿದ್ದರು. ಇದೀಗ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಯೋಜನೆ ರೂಪಿಸಿ, ಅನುಷ್ಟಾನಗೊಳಿಸಿದ್ದಾರೆ. ಹೀಗಿರುವಾಗ ನಮ್ಮ ಪಕ್ಷದ ಎಲ್ಲರೂ ಅವರ ಜೊತೆಗೆ ಇದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬದ್ದತೆಗೆ ಎದುರಾಳಿಗಳು ಯಾರು ಎಂದರೆ, ಅದು ಬಿಜೆಪಿ, ಆರೆಸ್ಸೆಸ್‍ನವರು. ಅವರೇ ಬಹಿರಂಗವಾಗಿ ಇದನ್ನು ಹೇಳಿದ್ದಾರೆ. ಬುದ್ದ, ಬಸವ, ಅಂಬೇಡ್ಕರ್ ತತ್ವ ಪಾಲಿಸಿಕೊಂಡು ಬಂದವರು ಸಿದ್ದರಾಮಯ್ಯನವರು. ಆ ವಿಚಾರಕ್ಕೆ ವಿರೋಧ ಮಾಡಿದವರೇ ಬಿಜೆಪಿ, ಆರೆಸ್ಸೆಸ್‍ನವರು ಎಂದು ಅವರು ಟೀಕಿಸಿದರು.





