ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಆರೋಪಿಯ ಮಾಹಿತಿ ನೀಡಿದವರಿಗೆ ₹10 ಲಕ್ಷ ನಗದು ಬಹುಮಾನ: ಎನ್‌ಐಎ

Date:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್‌ ಬಗ್ಗೆ ಮಾಹಿತಿ ನೀಡಿದವರಿಗೆ ₹10 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ.

ಹಾಗೆಯೇ, ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಟ್ವೀಟ್‌ ಮೂಲಕ ತಿಳಿಸಿದೆ.
ಬಾಂಬರ್‌ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೇ, 080-29510900 ಅಥವಾ 8904241100ಗೆ ಕರೆ ಮಾಡಿ ಇಲ್ಲವೇ, info.blr.nia@gov.inಗೆ ಮೇಲ್ ಮಾಡಲು ತಿಳಿಸಿದೆ.

ಅಥವಾ ಖುದ್ದಾಗಿ ತೆರಳುವುದಾದರೇ, ಎನ್‌ಐಎ 3ನೇ ಮಹಡಿ, ಬಿಎಸ್‌ಎನ್‌ಎಲ್‌ ಟೆಲಿಫೋನ್ ಎಕ್ಸ್‌ಚೇಂಜ್‌, 80 ಫೀಟ್‌ ರೋಡ್ ಎಚ್‌ಎಎಲ್‌ 2ನೇ ಸ್ಟೇಜ್, ಇಂದಿರಾಗನಗರ ಬೆಂಗಳೂರು ಈ ಸ್ಥಳಕ್ಕೆ ಬರಲು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಘಟನೆ? 

ಮಾರ್ಚ್‌ 1ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ವೈಟ್ ಫೀಲ್ಡ್‌ನ ಕುಂದಲಹಳ್ಳಿ ಬಳಿಯ ಪ್ರಸಿದ್ಧ ಹೋಟೆಲ್‌ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಘಟನೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ ನಾನಾ ತನಿಖಾ ತಂಡಗಳು ಬಾಂಬರ್ ಪತ್ತೆಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈಗ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೊಲೀಸರಿಗೆ ಸಿಸಿಟಿವಿ ದೃಶ್ಯಾವಳಿಗಳು ಲಭಿಸಿದ್ದು, ಓರ್ವ ಶಂಕಿತ ಮುಖಕ್ಕೆ ಮಾಸ್ಕ್, ಕಣ್ಣಿಗೆ ಕೂಲಿಂಗ್ ಗ್ಲಾಸ್, ವೈಟ್​ ಕ್ಯಾಪ್​ ಧರಿಸಿ, ಕಪ್ಪು ಬಣ್ಣದ ಬ್ಯಾಗ್ ಹೆಗಲಿಗೆ ಹಾಕಿಕೊಂಡು ರಾಮೇಶ್ವರಂ ಕೆಫೆಗೆ ಬಂದಿದ್ದಾನೆ. ಕೆಫೆಯಲ್ಲಿ ಟೋಕನ್ ತೆಗೆದುಕೊಂಡು ರವೆ ಇಡ್ಲಿ ತಿಂದು ತಾನು ತಂದಿದ್ದ ಬ್ಯಾಗ್‌ ಅನ್ನು ಕೆಫೆಯ ಬೇಸಿನ್ ಬಳಿ ಇಟ್ಟು ಹೋಗುತ್ತಾ ವಾಚ್​ನಲ್ಲಿ ಟೈಂ ನೋಡಿ ಹೋಗಿದ್ದಾನೆ. ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಆತ ಹೋದ ಸುಮಾರು ಒಂದು ಗಂಟೆಯ ಬಳಿಕ ಬಾಂಬ್​ ಸ್ಫೋಟವಾಗಿದೆ. ಇದೆಲ್ಲ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ತಲೆ ಮೇಲೆ ಕ್ಯಾಪ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್​​​ ಇಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ‘ಟೆರಸ್ಟ್ರಿಯಲ್ ವರ್ಸಸ್’ ಸಿನಿಮಾ: ‘ಹಿಂದೂರಾಷ್ಟ್ರ ಕಟ್ಟುತ್ತೇವೆ’ ಎನ್ನುವವರಿಗೂ ಇಲ್ಲಿದೆ ಪಾಠ

ಸದ್ಯ ಈ ವ್ಯಕ್ತಿಯನ್ನು ಹುಡುಕಿ ಕೊಟ್ಟವರಿಗೆ ₹10ಲಕ್ಷ ನಗದು ಹಣ ನೀಡುವುದಾಗಿ ಎನ್‌ಐಎ ಘೋಷಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...