ಬೆಂಗಳೂರು | ಎಂಟು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆಯ ಇ-ಮೇಲ್

Date:

ಬೆಂಗಳೂರಿನ ಎಂಟು ಶಾಲೆಗಳ ಇ-ಮೇಲ್‌ಗಳಿಗೆ ಬಾಂಬ್‌ ಸ್ಪೋಟಿಸುವ ಬೆದರಿಕೆಯ ಸಂದೇಶಗಳು ಮಂಗಳವಾರ ಬಂದಿದ್ದವು. ಶಾಲೆಗಳ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಕಾರ್ಯ ಸನ್ನದ್ಧರಾದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಸಂದೇಶವು ಹುಸಿ ಬೆದರಿಕೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಶಾಲೆಗಳಿಂದ ಬಂದ ಕರೆಗಳನ್ನು ಅನುಸರಿಸಿ, ಪೊಲೀಸರು ಶಾಲಾ ಕ್ಯಾಂಪಸ್‌ಗಳಿಗೆ ಬಾಂಬ್‌ ಪತ್ತೆದಳ, ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ಧಾವಿಸಿ, ವ್ಯಾಪಕ ಶೋಧ ನಡೆಸಿದರು. ಆದರೆ, ಸ್ಫೋಟದ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಸಂದೇಶವೆಂದು ಗೊತ್ತಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಸ್ಕಾಟಿಷ್ ಶಾಲೆ, ಭವನ್ ಬೆಂಗಳೂರು ಪ್ರೆಸ್ ಸ್ಕೂಲ್, ಚಿತ್ರಕೂಟ ಶಾಲೆ, ದೀಕ್ಷಾ ಹೈಸ್ಕೂಲ್, ಎಡಿಫೈ ಸ್ಕೂಲ್, ಗಂಗೋತ್ರಿ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್, ಗಿರಿಧನ್ವ ಶಾಲೆ ಮತ್ತು ಜೈನ್ ಹೆರಿಟೇಜ್ ಶಾಲೆಗಳಿಗೆ ಸೋಮವಾರ ಮಧ್ಯರಾತ್ರಿ ಇಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಇರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಮಂಗಳವಾರ ಬೆಳಗ್ಗೆ ಇಮೇಲ್ ನೋಡಿದ ಶಾಲಾ ಸಿಬ್ಬಂದಿ ಕೂಡಲೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ರಾತ್ರಿ ಇ–ಮೇಲ್‌ನಲ್ಲಿ ಕಿಡಿಗೇಡಿಗಳು ಬೆದರಿಕೆಯ ಸಂದೇಶ ಕಳುಹಿಸಿದ್ದರು. ಮಂಗಳವಾರ ಬೆಳಿಗ್ಗೆ 7.30 ಸುಮಾರಿಗೆ ಶಾಲಾ ಸಿಬ್ಬಂದಿ ಇ–ಮೇಲ್‌ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ತಿಳಿದಿದೆ.

ನಾನು ನಿಮ್ಮ ಕಟ್ಟಡದ ಒಳಗೆ ಸ್ಫೋಟಕ ಸಾಧನಗಳನ್ನು ಇರಿಸಿದ್ದೇನೆ. ಮುಂದಿನ ಗಂಟೆಗಳಲ್ಲಿ ಅವು ಸ್ಫೋಟಗೊಳ್ಳುತ್ತವೆ ಎಂದು ಇ–ಮೇಲ್‌ನಲ್ಲಿ ಬರೆಯಲಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ರೈಲು ನಿಲ್ದಾಣಗಳಿಂದ 22 ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್‌

ಭಾನುವಾರ ಆಸ್ಪತ್ರೆಗಳಿಗೆ ಕಳುಹಿಸಲಾದ ಮಾಹಿತಿಯನ್ನು ಅದು ಹೊಂದಿತ್ತು. Beeble.com ಡೊಮೇನ್‌ನಿಂದ ಕಳುಹಿಸಲಾದ ಇಮೇಲ್‌ಗಳು “ಕೋರ್ಟ್” ಎಂಬ ಗುಂಪಿನಿಂದ ಬಂದಿವೆ ಎನ್ನಲಾಗಿದೆ.

“ಈಗ ಬೇಸಿಗೆ ರಜೆಗಾಗಿ ಶಾಲೆಗಳನ್ನು ಮುಚ್ಚಲಾಗಿದೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿರಲಿಲ್ಲ. ಸಿಬ್ಬಂದಿ ಮಾತ್ರ ಇದ್ದರು. ನಾವು ಎಲ್ಲ ರೀತಿಯ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ಅನುಸರಿಸಿದ್ದೇವೆ. ಯಾವುದೇ ಭಯವಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಮೇಲ್ ಕಳುಹಿಸುವವರು ವರ್ಚುವಲ್ ಖಾಸಗಿ ನೆಟ್‌ವರ್ಕ್‌ಗಳನ್ನು ಬಳಸಿದ್ದರಿಂದ ಏಪ್ರಿಲ್ 2022 ಮತ್ತು ಡಿಸೆಂಬರ್ 2023 ರಲ್ಲಿ ಇದೇ ರೀತಿಯ ಸುಳ್ಳು ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಸ್ವೀಕರಿಸಿದ ಶಾಲೆಗಳ ಹಿಂದಿನ ಪ್ರಕರಣಗಳ ತನಿಖೆಗಳು ಸ್ಥಗಿತಗೊಂಡಿವೆ.

ಈ ಹಿಂದೆಯೂ ನಗರದ ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಇ–ಮೇಲ್‌ಗಳು ಬಂದಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...