ರೈತರ ಪ್ರತಿಭಟನೆಗೆ ಫಲ: ಕೆಎಂಎಫ್‌ನಿಂದ ಬೆಂಬಲ ಬೆಲೆಗೆ ಮೆಕ್ಕೆಜೋಳ ಖರೀದಿ

Date:

ಮೆಕ್ಕೆಜೋಳದ ಬೆಲೆ ಇಳಿಕೆಯಿಂದಾಗಿ ರೈತರು ತೀವ್ರ ನಷ್ಟಕ್ಕೆ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ಕೊಂಚ ಉತ್ತಮ ದರವನ್ನು ಒದಗಿಸಿ ನೇರವಾಗಿ ರೈತರಿಂದ ಮೆಕ್ಕೆಜೋಳವನ್ನು ಖರೀದಿ ಮಾಡಲು ಮುಂದಾಗಿದೆ. ಈ ಕುರಿತು ಈಗಾಗಲೇ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.

ಮೆಕ್ಕೆಜೋಳದ ದರ ಕುಸಿದ ಹಿನ್ನೆಲೆಯಲ್ಲಿ ರೈತರಿಗೆ ದೊಡ್ಡ ಮಟ್ಟದಲ್ಲಿ ನಷ್ಟವಾಗಿದ್ದು, ದಾವಣೆಗೆರೆ, ಚಿಕ್ಕಬಳ್ಳಾಪು, ಹಾಸನ ಸೇರಿದಂತೆ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದ ರೈತರು ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಈ ನಿಟ್ಟಿನಲ್ಲಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿ ಮಾಡಲು ಕೆಎಂಎಪ್‌ನಿಂದ ಖರೀದಿ ಕೇಂದ್ರವನ್ನು ಆರಂಭಿಸಲು ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ(KMF)ಯ ವ್ಯಾಪ್ತಿಯಲ್ಲಿ ಬರುವ ಒಟ್ಟು 5 ಪಶು ಆಹಾರ ಉತ್ಪಾದನಾ ಘಟಕಕ್ಕೆ ಅವಶ್ಯವಿರುವ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಖರೀದಿ ಮಾಡಲು ಪ್ರಸ್ತುತ 50,000 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ವಿವಿಧ ಭಾಗಗಳಲ್ಲಿ ಇಂದಿನಿಂದ ಖರೀದಿ ಕೇಂದ್ರವನ್ನು ತೆರೆಯಲು ಸಕಲ ಸಿದ್ದತೆಯನ್ನು ಮಾಡಿಕೊಳ್ಳುವಂತೆ ಆದೇಶವನ್ನು ಹೊರಡಿಸಲಾಗಿತ್ತು.

ಕೆಎಂಎಫ್‌ ಸಂಸ್ಥೆಯು ರೈತರಿಂದ ಮೆಕ್ಕೆಜೋಳವನ್ನು ಖರೀದಿ ಮಾಡಲು 01 ಡಿಸೆಂಬರ್ 2025 ರಿಂದ ರೈತರ ನೋಂದಣೆಯನ್ನು ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದ್ದು, ರೈತರು ಅಗತ್ಯ ವಿವರ ಮತ್ತು ದಾಖಲಾತಿಗಳ ಸಹಿತ ತಮ್ಮ ಹತ್ತಿರದ ಖರೀದಿ ಕೇಂದ್ರವನ್ನು ಭೇಟಿ ಮಾಡಿ ನೋಂದಣಿಯನ್ನು ಮಾಡಿಕೊಳ್ಳಬೇಕು.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಗೆ ಮೆಕ್ಕೆಜೋಳ ಮಾರಾಟ ಮಾಡಲು ಇಚ್ಛಿಸುವ ರೈತರು ಮೊದಲಿಗೆ ಕೃಷಿ ಇಲಾಖೆಯಿಂದ ನೀಡಿರುವ FID ನಂಬರ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮೆಕ್ಕೆಜೋಳದ ಸ್ಯಾಂಪಲ್ ಸಹಿತ ನಿಮ್ಮ ಹತ್ತಿರದ ಹಾಲು ಉತ್ಪಾದಕರ ಸಂಘ ಅಥವಾ ಕೆಎಂಎಫ್‌ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಭೇಟಿ ಮಾಡಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ಸಂಖ್ಯೆಗೆ SMS ಮೂಲಕ ಯಾವ ದಿನಾಂಕದಂದು ಮೆಕ್ಕೆಜೋಳವನ್ನು ಖರೀದಿ ಕೇಂದ್ರಕ್ಕೆ ತರಬೇಕು ಎನ್ನುವ ಮಾಹಿತಿ ಬರುತ್ತದೆ. ಆ ದಿನದಂದು ಮೆಕ್ಕೆಜೋಳವನ್ನು ತೆಗೆದುಕೊಂಡು ಹೋಗಿ ಮಾರಾಟ ಮಾಡಬೇಕು.

ಕೆಎಂಎಫ್‌ ಮಂಡಳಿಯಿಂದ ಪ್ರತಿ ಕ್ವಿಂಟಾಲ್‌ಗೆ ₹2,400 ರಂತೆ(ಮೂಲ ಬೆಲೆ, ಪ್ರತಿ ಕ್ವಿಂಟಲ್‌ಗೆ ಎರಡು ಗೋಣಿಚೀಲದ ಮೊತ್ತ, ಸಾಗಾಣಿಕೆ ವೆಚ್ಚ ಸೇರಿದಂತೆ) ಕೆಎಂಎಫ್‌ ಮಂಡಳಿ ವ್ಯಾಪ್ತಿಯಲ್ಲಿರುವ ಒಟ್ಟು 5 ಪಶು ಆಹಾರ ಘಟಕಕ್ಕೆ ಅವಶ್ಯಕತೆಗೆ ಅನುಗುಣವಾಗಿ ರೈತರಿಂದ ನೇರವಾಗಿ ಯಾವುದೇ ಮಧ್ಯವರ್ತಿಗೆ ಅವಕಾಶ ನೀಡದೆ ಮೆಕ್ಕೆಜೋಳ ಖರೀದಿಗೆ ಮುಂದಾಗಿದೆ.

ಬೆಂಬಲ ಬೆಲೆ ಆದೇಶ

ಮೆಕ್ಕೆಜೋಳದ ತೇವಾಂಶವು 14 ಡಿಗ್ರಿ ಇರುವಂತೆ ನೋಡಿಕೊಳ್ಳಬೇಕು. ಕೆಎಂಎಫ್‌ ಮಂಡಳಿಯು ಒಬ್ಬ ರೈತರಿಂದ ಗರಿಷ್ಠ 25 ಟನ್ ಮೆಕ್ಕೆಜೋಳವನ್ನು ಖರೀದಿ ಮಾಡಲಾಗುತ್ತದೆ. ಮೆಕ್ಕೆಜೋಳವನ್ನು KMF ಖರೀದಿ ಕೇಂದ್ರಗಳಿಗೆ ಮಾರಾಟ ಮಾಡಲು ಆಸಕ್ತಿ ಹೊಂದಿರುವ ರೈತರು SMS ಮೂಲಕ ತಮಗೆ ನಿಗದಿಪಡಿಸಿದ ದಿನದಂದು ಮಾತ್ರ ಮೆಕ್ಕೆಜೋಳವನ್ನು ತೆಗೆದುಕೊಂಡು ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿದ್ದೀರಾ? ಅಕಾಲಿಕ ಮಳೆಗೆ ಮುಳುಗಿತು ಬೆಳೆ: ಬಾಡಿತು ರೈತರ ಬದುಕು, ನೆರವು ನೀಡುವುದೇ ಸರ್ಕಾರ?

ರೈತರು ಒಮ್ಮೆ ಖರೀದಿ ಕೇಂದ್ರದ ಮೂಲಕ KMF ಮಂಡಳಿಗೆ ಮೆಕ್ಕೆಜೋಳವನ್ನು ಮಾರಾಟ ಮಾಡಿದ ಬಳಿಕ ಖರೀದಿ ಕೇಂದ್ರದಲ್ಲಿ ನೀವು ಎಷ್ಟು ಕ್ವಿಂಟಲ್ ಮೆಕ್ಕೆಜೋಳ ಮಾರಾಟ ಮಾಡಿರುವಿರಿ? ಎಷ್ಟು ಹಣವನ್ನು KMF ನಿಮಗೆ ಪಾವತಿ ಮಾಡಬೇಕು? ಪಾವತಿ ಮಾಡುವ ದಿನಾಂಕದ ಮಾಹಿತಿಯ ಸ್ವೀಕೃತಿ ನೀಡಲಾಗುತ್ತದೆ. 15-20 ದಿನದ ಒಳಗಾಗಿ ನಿಮ್ಮ ಬ್ಯಾಂಕ್ ಖಾತೆಗೆ ಮೆಕ್ಕೆಜೋಳದ ಮಾರಾಟದ ಹಣ DBT(Direct Benefit Transfer) ಮೂಲಕ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...