ಕಲಬುರಗಿ | ಬ್ಯಾಂಕ್‌ ಸಾಲದ ನೋಟಿಸ್‌ಗೆ ಹೆದರಿ ಪೆಟ್ರೊಲ್ ಸುರಿದುಕೊಂಡು ರೈತ ಆತ್ಮಹತ್ಯೆ

Date:

ಸಾಲ ತೀರಿಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಮನೆಗೆ ಕಳುಹಿಸಿದ ನೋಟಿಸ್‌ಗೆ ಹೆದರಿದ ರೈತರೊಬ್ಬರು ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೊತಂಗಲ‌ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ಗ್ರಾಮದ ಪಾಂಡಪ್ಪ ತಿಪ್ಪಣ್ಣ (45) ಆತ್ಮಹತ್ಯೆ ಮಾಡಿಕೊಂಡ ರೈತ. ಪಾಂಡಪ್ಪ ಮೂರು ಎಕರೆ ಜಮೀನು ಹೊಂದಿದ್ದು, ತಾಲೂಕಿನ ನಿಡಗುಂದಾ ಶಾಖೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ) ನಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಎರಡು ಬಾರಿ ನೋಟಿಸ್ ನೀಡಿದ್ದರು.

ಬ್ಯಾಂಕ್‌ ಅಧಿಕಾರಿಗಳ ನೋಟಿಸ್‌ಗೆ ಹೆದುರಿ ಎರಡು ಎತ್ತುಗಳನ್ನು ಮಾರಾಟ ಮಾಡಿ ಸಾಲ ತೀರಿಸಲು ಮುಂದಾಗಿದ್ದರು. ಆದರೆ, ಪತ್ನಿ ವಿರೋಧಿಸಿದ್ದರು. ಇದರಿಂದ ದಾರಿ ಕಾಣದೆ ಕಂಗಲಾದ ರೈತ ಪಾಂಡಪ್ಪ ಪೆಟ್ರೊಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈ ಸುಟ್ಟುಕೊಂಡು ತೀವ್ರವಾಗಿ ಗಾಯಗೊಂಡ ಅವರನ್ನು ನಿಡಗುಂದಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಸೇಡಂ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ತೆರಳುವ ವೇಳೆ ಸೆ.26ರಂದು ಸಂಜೆ ಕೊನೆಯುಸಿರೆಳೆದಿದ್ದಾರೆʼ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪಾರ್ಟಿ ವೇಳೆ ಯುವಕನ ವೇಳೆ ಗುಂಡಿನ ದಾಳಿ

ಈ ಕುರಿತು ಸುಲೇಪೇಟ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...