ಬೆಂಗಳೂರು ಮಳೆಗೆ ಮೊದಲ ಬಲಿ; ಮರ ಬಿದ್ದು ಮಗು ಸಾವು

Date:

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ (ಮಾ.22) ಸಂಜೆ ಸುರಿದ ಭಾರಿ ಮಳೆಗೆ ಮೊದಲ ಬಲಿಯಾಗಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ರಕ್ಷಾ ಎಂಬ ಮೂರು ವರ್ಷದ ಹೆಣ್ಣು ಸಾವನ್ನಪ್ಪಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ನಡೆದಿದೆ.

ಕಮ್ಮನಹಳ್ಳಿ ಬಳಿಯ ಕುಳ್ಳಪ್ಪ ಸರ್ಕಲ್ ನಿವಾಸಿಗಳಾದ ಶಕ್ತಿ ಮತ್ತು ಸತ್ಯ ದಂಪತಿಯ 3ವರ್ಷದ ಮಗು ರಕ್ಷಾ ಮೃತಪಟ್ಟ ಮಗು.

ರಕ್ಷಾ ತನ್ನ ತಂದೆ ಸತ್ಯ ಜೊತೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಾಳಿ ಮಳೆ ಜೋರಾದ ಪರಿಣಾಮ ಬೈಕ್ ಮುಂಭಾಗದಲ್ಲಿ ಕುಳಿತ್ತಿದ್ದ ರಕ್ಷಾ ತಲೆ ಮೇಲೆಯೇ ಮರದ ತುಂಡು ಬಿದ್ದಿದೆ. ತೀವ್ರ ರಕ್ತಸ್ರಾವವಾಗಿದ್ದ ಮಗುವನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಬಳಿಕ ಬೌರಿಂಗ್‌ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯ ಬಳಿ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಡಿದೆ. ಇನ್ನು ಆಸ್ಪತ್ರೆಗೆ ಬಿಬಿಎಂಪಿ ಪೂರ್ವವಲಯದ ಜಂಟಿ ಆಯುಕ್ತೆ ಸರೋಜಾದೇವಿ, ಬಿಬಿಎಂಪಿ ಅರಣ್ಯ ಘಟಕದ ಮುಖ್ಯಸ್ಥ ಸ್ವಾಮಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಘಟನೆ ಸಂಬಂಧ ಪುಲಕೇಶಿ ನಗರ ಠಾಣೆಯಲ್ಲಿ ಯುಡಿಆರ್​ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

ಈ ಬಗ್ಗೆ ಮೃತ ರಕ್ಷಾಳ ಮಾವ ವಿಜಯ್ ಪ್ರತಿಕ್ರಿಯಿಸಿ, “ರಾತ್ರಿ 8.30 ರ ಸುಮಾರಿಗೆ ಮರ ಬಿದ್ದ ವಿಷಯ ತಿಳಿತು. ಆಸ್ಪತ್ರೆಯಲ್ಲಿ ಎಷ್ಟೇ ಪ್ರಯತ್ನಪಟ್ಟರೂ ಮಗು ಉಳಿಯಲಿಲ್ಲ. ತಲೆಗೆ ಏಟು ಬಿದ್ದಿದ್ದರಿಂದ ಮಗು ರಕ್ತಸ್ರಾವ ಆಗಿ ಮೃತಪಟ್ಟಿದೆ. ಮಗು ತಂದೆಗೂ ಬೆನ್ನುಮೂಳೆ ಮುರಿದಿದೆ ಅಂತಿದ್ದಾರೆ. ಬಿಬಿಎಂಪಿಯವರು ಮರಗಳನ್ನ ತೆರವು ಮಾಡಬೇಕು. ಮಳೆ ಬಂದಾಗ ಪದೇ ಪದೇ ಇಂತ ಘಟನೆಗಳು ನಡೆಯುತ್ತಲೇ ಇವೆ. ರಾತ್ರಿ ಬಂದು ಪರಿಹಾರ ಕೊಡುತ್ತೇವೆ ಎಂದಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...