ಬಾಡಿಗೆದಾರರಿಗೂ ಉಚಿತ ವಿದ್ಯುತ್‌ ಪೂರೈಕೆ: ಸಿಎಂ ಸಿದ್ದರಾಮಯ್ಯ

Date:

  • ದೇವರಾಜ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ಪಷ್ಟನೆ
  • ಗೃಹ ಬಳಕೆಗೆ 200 ಯುನಿಟ್‌ ಉಚಿತ ವಿದ್ಯುತ್‌ ಪೂರೈಕೆ: ಸಿಎಂ

ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್‌ ಪೂರೈಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ವಿಧಾನಸೌಧದ ಆವರಣದಲ್ಲಿರುವ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಬಾಡಿಗೆ ಮನೆಯಲ್ಲಿ ವಾಸಿಸುವವರು ಬಹುತೇಕ ಬಡವರಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲಾಗುವುದು. ವಾಣಿಜ್ಯ ಉದ್ದೇಶ ಹೊರತು ಪಡಿಸಿ, ಗೃಹಬಳಕೆಗೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಗೆ ನೈತಿಕ ಹಕ್ಕಿಲ್ಲ

“ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ? 10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದರು. ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲಿ ಹುಡುಕುವ ಕೆಲಸ ಮಾಡುತ್ತಾರೆ” ಎಂದರು.

ಬಿಜೆಪಿ ಜನವಿರೋಧಿ ಪಕ್ಷ

“ಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ತಂದು ಹೊರಟರು. ನಮಗೆ ಈಗ ಪಾಠ ಹೇಳಿಕೊಡಲು ಬರುತ್ತಾರೆ. 2018 ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ” ಎಂದು ಪ್ರಶ್ನಿಸಿದರು.

“ನಮ ಸರ್ಕಾರ 15 ದಿನಗಳೊಳಗೆ ಎಲ್ಲ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇಂದಿರಾ ಕ್ಯಾಂಟೀನ್ ನಿಲ್ಲಿಸಿ, ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ ಸೈಕಲ್ ಕೊಡುವುದನ್ನು ಬಿಜೆಪಿ ನಿಲ್ಲಿಸಿದರು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...