ಅರಣ್ಯ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವರ ಆದೇಶ

Date:

ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸಚಿವರು ಸೂಚನೆ ನೀಡಿದ್ದಾರೆ.

ಚಿತ್ರೀಕರಣದಿಂದ ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸಬೇಕು ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಶುಲ್ಕ ಪಡೆದು ಅನುಮತಿಸಲಾಗುತ್ತಿದೆ. ಪ್ರಸ್ತುತ ಅರಣ್ಯ ಪ್ರದೇಶದ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡುತ್ತಿರುವುದು ಸರಿಯಷ್ಟೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದಾಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಚುರಗೊಂಡಿರುವುದನ್ನು ಗಮನಿಸಲಾಗಿದೆ’ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

‘ಅರಣ್ಯ ಪ್ರದೇಶಗಳಲ್ಲಿ ವಿವಿಧ ಬಗೆಯ ಚಿತ್ರೀಕರಣಕ್ಕೆ ಸ್ಥಳೀಯ ಮಟ್ಟದ ಅಧಿಕಾರಿಗಳು ಅನುಮತಿಯನ್ನು ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿಯು ಹೊರ ಜಗತ್ತಿಗೆ ದೊರೆಯುವ ಸಂಭವವಿರುತ್ತದೆ. ಅರಣ್ಯ ಮತ್ತು ವನ್ಯಜೀವಿಗಳ ಸೂಕ್ಷ್ಮತೆಯ ಅರಿವಿಲ್ಲದೆ ಪರಿಸರ ಹಾಗೂ ಜೀವ ವೈವಿಧ್ಯಕ್ಕೆ ದಕ್ಕೆ ಉಂಟಾಗುವ ಸಂಭವವಿರುತ್ತದೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

‘ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ, ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಬೇಕು’ ಎಂದು ಸರ್ಕಾರ ಆದೇಶದಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...