ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಆ ಪೈಕಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ ಅಧ್ಯಕ್ಷರಾಗಿರುವ ಭೂಕಾಂತ್ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್ ಪಾಳಯದಿಂದ ಭಾರೀ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ನಾಯಕನಿಗೆ ಕಾಂಗ್ರೆಸ್ ಸರ್ಕಾರದಿಂದ ಈ ಸ್ಥಾನ ಮಾನ ನೀಡಿರೋದು ಎಷ್ಟು ಸರಿ ಎಂಬ ವಿರೋಧ ಕೇಳಿಬಂದ ಬೆನ್ನಲ್ಲೇ ಭೂಕಾಂತ್ಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನವನ್ನು ಸರ್ಕಾರ ಹಿಂಪಡೆದಿದೆ
ಭೂಕಾಂತ್ ಅವರ ಪತ್ನಿ ಕೂಡ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ಹೀಗಿರುವಾಗ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ ಉಪದೇಶ ನೀಡಬಲ್ಲರು ಪಾಪ?
ಇಲ್ಲಿಯವರೆಗೂ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗಷ್ಟೇ ದೊರೆಯುತ್ತಿದ್ದ ಈ ಸ್ಥಾನಮಾನವನ್ನು ಎಲ್ಲ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೂ ಅನ್ವಯಿಸುವಂತೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಸರಿ. ಆದರೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡನಿಗೆ ಈ ಸ್ಥಾನಮಾನ ನೀಡಿದ್ದು ಯಾಕೆ ಎಂದು ಪ್ರಶ್ನಿಸಲಾಗಿತ್ತು.





