ಬೆಂಗಳೂರು | ಕೆಲಸ ಸಿಗದಿದ್ದಕ್ಕೆ ಪಿಜಿ ಮೇಲಿಂದ ಬಿದ್ದು ಪದವೀಧರ ಆತ್ಮಹತ್ಯೆ

Date:

ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ಯುವಕನೊಬ್ಬ ಕೆಲಸ ಸಿಗದಿದ್ದಕ್ಕೆ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡವೊಂದರ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ ಸಮೀಪದ ಅಂಬೇಡ್ಕರ್ ನಗರದಲ್ಲಿ ನಡೆದಿದೆ.

ಅರುಣ್‌ಕುಮಾರ್ ಪಾಟೀಲ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಲಬುರಗಿ ಮೂಲದ ಈತ ಎಂಜಿನಿಯರಿಂಗ್ ಪದವೀಧರ. ಕಂಪನಿಗಳಲ್ಲಿ ಕೆಲಸ ಮಾಡಬೇಕೆಂದು ಕಲಬುರಗಿಯಿಂದ ಕೆಲಸ ಹುಡುಕಿಕೊಂಡು ಮೇ 8ರಂದು ಬೆಂಗಳೂರಿಗೆ ಬಂದಿದ್ದರು. ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಉಳಿದುಕೊಂಡಿದ್ದರು ಎಂದು ವೈಟ್‌ಫೀಲ್ಡ್ ಠಾಣೆ ಪೊಲೀಸರು ಹೇಳಿದರು.

“ಗುರುವಾರ ಬೆಳಿಗ್ಗೆ 10.30 ಗಂಟೆ ಸುಮಾರಿಗೆ ತಾನು ನೆಲೆಸಿದ್ದ ಪಿಜಿಯ ಐದನೇ ಮಹಡಿಗೆ ಹೋಗಿದ್ದ ಅರುಣ್‌ಕುಮಾರ್ ಅಲ್ಲಿಂದಲೇ ಕೆಳಗಡೆ ಜಿಗಿದಿದ್ದಾರೆ. ಜೋರು ಶಬ್ದ ಕೇಳಿದ ಸ್ಥಳೀಯರು, ಕಟ್ಟಡ ಬಳಿ ಸೇರಿದ್ದಾರೆ. ತೀವ್ರ ಗಾಯವಾಗಿ ಅರುಣ್‌ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗುರುವಾರ ಸುರಿದ ಧಾರಾಕಾರ ಮಳೆ: ಮತ್ತೆ ಹಳೆ ಸಮಸ್ಯೆಗಳಿಗೆ ಮರಳಿದ ಬೆಂಗಳೂರು

“ಅರುಣ್‌ಕುಮಾರ್ ಮೊಬೈಲ್, ಬ್ಯಾಗ್ ಹಾಗೂ ಇತರೆ ಎಲ್ಲ ವಸ್ತುಗಳು ಕೊಠಡಿಯಲ್ಲಿದ್ದವು. ಆತ್ಮಹತ್ಯೆ ಸಂಬಂಧ ಪೇಯಿಂಗ್ ಗೆಸ್ಟ್ ಕಟ್ಟಡ ಮಾಲೀಕರು ಹಾಗೂ ಇತರರಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದರು.

ಅರುಣಕುಮಾರ್‌ಗೆ ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ. ಇದರಿಂದ ಮನನೊಂದಿದ್ದ ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತನ ಪೋಷಕರಿಗೆ ಪೊಲೀಸರು ವಿಷಯ ತಿಳಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...