ಗೃಹಜ್ಯೋತಿ ಯೋಜನೆಗೆ ಉತ್ತಮ ಸ್ಪಂದನೆ: ಒಂದು ಕೋಟಿಗೂ ಅಧಿಕ ಅರ್ಜಿ ಸಲ್ಲಿಕೆ

Date:

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಜೂ. 18 ರಿಂದ ಈವರೆಗೆ ಒಂದು ಕೋಟಿಗೂ ಅಧಿಕ ಕುಟುಂಬಗಳು ಅರ್ಜಿ ಸಲ್ಲಿಸಿ ನೋಂದಾವಣೆ ಮಾಡಿಕೊಂಡಿವೆ.

ಅತ್ಯಂತ ವೇಗದಲ್ಲಿ ಗೃಹಜ್ಯೋತಿ ಯೋಜನೆ ರಾಜ್ಯದ ಜನರಿಗೆ ತಲುಪುತ್ತಿದ್ದು, ದಿನದಿಂದ ‌ದಿನಕ್ಕೆ ಅರ್ಜಿದಾರರ‌ ಸಂಖ್ಯೆ ‌ಏರಿಕೆ‌ಯಾಗುತ್ತಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಆರಂಭವಾಗಿ 17 ದಿನಗಳಲ್ಲಿ ಒಂದು ಕೋಟಿ ಜನ ನೋಂದಣಿ ಮಾಡಿದ್ದಾರೆ. ಒಟ್ಟು 1,00,20,163 ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಯಾವ ಯಾವ ಎಸ್ಕಾಂಗಳಲ್ಲಿ ಎಷ್ಟು ಅರ್ಜಿ ಸಲ್ಲಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಸ್ಕಾಂ ವ್ಯಾಪ್ತಿಯಲ್ಲಿ 41,14,567 ಅರ್ಜಿ
ಚೆಸ್ಕಾಂ ವ್ಯಾಪ್ತಿಯಲ್ಲಿ 15,35,045 ಅರ್ಜಿ
ಜೆಸ್ಕಾಂ ವ್ಯಾಪ್ತಿಯಲ್ಲಿ 10,54,359 ಅರ್ಜಿ
ಹೆಸ್ಕಾಂ ವ್ಯಾಪ್ತಿಯಲ್ಲಿ 21,09,473 ಅರ್ಜಿ
ಮೆಸ್ಕಾಂ ವ್ಯಾಪ್ತಿಯಲ್ಲಿ 11,56,294 ಅರ್ಜಿ
ಎಚ್‌ಆರ್‌ಇಸಿಎಸ್‌ 50,425 ಸಾವಿರ ಅರ್ಜಿ
ಒಟ್ಟು ರಾಜ್ಯಾದ್ಯಂತ 1,00,20,163 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ.

ತಿಂಗಳ ಅಂತ್ಯದ ವೇಳೆಗೆ 1.50 ಕೋಟಿ ಅರ್ಜಿ ನೋಂದಣಿ ಆಗುವ ಸಾಧ್ಯತೆ ಇದೆ. ಇಂಧನ ಇಲಾಖೆ ಈಗಾಗಲೇ ಅರ್ಜಿ ಸಲ್ಲಿಕೆಗೆ ವೈಬ್​​​​ಸೈಟ್​​ ಸರಳೀಕರಣ ‌ಮಾಡಿದೆ. ಗೃಹಜ್ಯೋತಿ ಯೋಜನೆ ಜುಲೈ 1 ರಿಂದ ಅನ್ವಯವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಜು. 25 ಆಗಿದೆ. ಜು. 25 ರ ನಂತರ ಅರ್ಜಿ ಸಲ್ಲಿಸಿದರೆ ಆಗಸ್ಟ್​ ತಿಂಗಳ ಉಚಿತ ವಿದ್ಯುತ್ ಸೆಪ್ಟೆಂಬರ್ ತಿಂಗಳಿಗೆ ಸಿಗಲಿದೆ.

ಈ ಸುದ್ದಿ ಓದಿದ್ದೀರಾ? ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ

ಬೆಲೆಯೇರಿಕೆ ಸಂಕಷ್ಟದಲ್ಲಿರುವ ಜನರ ಬದುಕಲ್ಲಿ ನೆಮ್ಮದಿಯ ಬೆಳಕು ಮೂಡಲಿ

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, “ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಗಳು ಯಶಸ್ವಿಯಾಗಿ ಅರ್ಜಿ ಸಲ್ಲಿಸಿವೆ. ಕನಿಷ್ಠ ನಿಬಂಧನೆಗಳು ಮತ್ತು ಸರಳ ಅರ್ಜಿ ಪ್ರಕ್ರಿಯೆಯ ಮೂಲಕ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯನ್ನು ತಲುಪಿಸಬೇಕೆಂಬುದು ನಮ್ಮ ಉದ್ದೇಶ. ಯೋಜನೆಯ ವ್ಯಾಪ್ತಿಗೆ ಒಳಪಡುವವರು ತಪ್ಪದೇ ಅರ್ಜಿ ಸಲ್ಲಿಸಿ, ಇತರರಿಗೂ ಅರ್ಜಿ ಸಲ್ಲಿಸಲು ನೆರವಾಗಿ. ಬೆಲೆಯೇರಿಕೆಯಿಂದ ಸಂಕಷ್ಟದಲ್ಲಿರುವ ಜನರ ಬದುಕಲ್ಲಿ ನೆಮ್ಮದಿಯ ಬೆಳಕು ಮೂಡಲಿ”

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...