ಮಹಿಷ ಚಿತ್ರಕ್ಕೆ ಸಿಎಂ ಫೋಟೊ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ; ಎಫ್‌ಐಆರ್‌

Date:

ಮೈಸೂರಿನ ಮೂಲನಿವಾಸಿ ದೊರೆ ಎಂದೇ ಖ್ಯಾತವಾಗಿರುವ ಮಹಿಷಾಸುರನ ಪ್ರತಿಮೆಯ ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಫೋಟೋ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ’ಸೀನಾ ಹಿಂದೂಸ್ಥಾನ’ ಫೇಸ್‌ಬುಕ್‌ ಫೇಜ್‌ ಅಡ್ಮಿನ್ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ವಿಭಾಗದ ಸೂರ್ಯ ಮುಕುಂದರಾಜ್ ಅವರು ನೀಡಿದ ದೂರನ್ನು ಆಧರಿಸಿ, ‘ಸೀನಾ ಹಿಂದೂಸ್ತಾನಿ’ ಪೇಜ್ ನಿರ್ವಹಣೆ ಮಾಡುತ್ತಿರುವವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

‘ಮಹಿಷಾಸುರ ಉತ್ಸವ ಆಚರಣೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿತ್ತು. ಜತೆಗೆ ಮಹಿಷಾಸುರ ಪ್ರತಿಮೆಗೆ ಮುಖ್ಯಮಂತ್ರಿ ಅವರ ಚಿತ್ರವನ್ನು ಮಾರ್ಫಿಂಗ್ ಮಾಡಿ ಸೇರಿಸಲಾಗಿತ್ತು. ಈ ಮೂಲಕ ಮಹಿಷಾಸುರ ಪ್ರತಿಮೆಯನ್ನು ವಿರೂಪಗೊಳಿಸಿ, ಜನರ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿದ್ದಾರೆ’ ಎಂದು ದೂರು ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ದಸರಾ ಹಬ್ಬದ ಸಂದರ್ಭದಲ್ಲಿಯೇ ಈ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿದೆ. ಈ ಮೂಲಕ ಸಮಾಜದ ಶಾಂತಿಗೆ ಧಕ್ಕೆ ತರಲು ಆರೋಪಿಗಳು ಯತ್ನಿಸಿದ್ದಾರೆ. ಪೇಜ್‌ನ ಅಡ್ಮಿನ್ ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ. ಈ ಸಂಬಂಧ ಫೇಸ್‌ಬುಕ್ ಕಂಪನಿಯವರಿಗೂ ಇ-ಮೇಲ್ ಕಳುಹಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಷ ದಸರಾವು ಸಾಂಸ್ಕೃತಿಕ ಪ್ರತಿರೋಧವಾಗಿ ಹೊಮ್ಮಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಮಹಿಷಾಸುರ ದೊರೆಯನ್ನು ಆರಾಧಿಸಲಾಗಿದೆ. ಮೈಸೂರಿನಲ್ಲಿ ಮಹಿಷ ದಸರಾ ಆಚರಿಸದಂತೆ ಸಂಸದ ಪ್ರತಾಪ ಸಿಂಹ ಬೆದರಿಕೆ ಒಡ್ಡಿದ ಬಳಿಕ ಬಿಜೆಪಿಯ ಸ್ಥಳೀಯ ಮುಖಂಡರೇ ಸಂಸದರ ನಿಲುವನ್ನು ವಿರೋಧಿಸಿದ್ದರು.

ಅಕ್ಟೋಬರ್‌ 13ರಂದು ಮೈಸೂರಿನ ಪುರಭವನದ ಅಂಗಳದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ಮಹಿಷ ದಸರಾ ಆಚರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...