ಹಾಸನ | ಶಾಲೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌; ಓರ್ವ ಸಾವು

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌, ಬ್ರೇಕ್ ಫೇಲಾಗಿ ಚಾಲಕನ ನಿಯಂತ್ರಣ ತಪ್ಪಿ ಶಾಲೆಯ ಕಾಂಪೌಂಡ್ಮತ್ತು ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಬಳಿಯಲ್ಲಿ ನಡೆದಿದೆ.

ಅಲ್ಲದೆ, ಬಸ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದ ಅಮೃತ್ರಾಜ್ (34) ಮೃತ ವ್ಯಕ್ತಿ.

ಅಪಘಾತಕ್ಕೀಡಾದ ಕೆಎಸ್‌ಆರ್‌ಟಿಸಿ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತುಸಕಲೇಶಪುರದ ಬಾಗೆ ಗ್ರಾಮಕ್ಕೆ ತಲುಪುತ್ತಿದ್ದಂತೆ ಬಸ್ ಆ್ಯಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ಮನೆಗೆ ಡಿಕ್ಕಿಹೊಡೆದು, ಜೆಎಸ್ಎಸ್ ಶಾಲೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೇಳೆ ಬಸ್‌ನ ಕಿಟಕಿ ಸೀಟ್‌ನಲ್ಲಿ ಕುಳಿತಿದ್ದ ಪ್ರಯಾಣಿಕ ಅಮೃತರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮೀನಿನಲ್ಲಿದ್ದ ಮನೆಗೂ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮತ್ತೊಂದು ವಿದ್ಯಾಸಂಸ್ಥೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ!

ಬಸ್‌ ಶಾಲಾ ಕೌಂಪಡ್‌ಗೂ ಢಿಕ್ಕಿ ಹೊಡೆದಿದ್ದು, ಶಾಲೆಯ ಕಟ್ಟಡಕ್ಕೆ ಹಾನಿಯಾಗಿದೆ. ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ.

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...