ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೂನ್ 28ರಂದು ಬೆಳಗಿನ ಜಾವ 4ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಟ್ವೀಟ್ ಮಾಡಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಅಪಘಾತಕ್ಕೆ ಸಂಭವನೀಯ ಕಾರಣಗಳನ್ನು ತಿಳಿಸಿದ ಅವರು, “ತಪ್ಪಾದ ಸ್ಥಳದಲ್ಲಿ ಲಾರಿಯನ್ನು ಪಾರ್ಕಿಂಗ್ ಮಾಡಿರಬಹುದು, ತಪ್ಪಾಗಿ ಓವರ್‌ಟೇಕಿಂಗ್ ಮಾಡಿರಬಹುದು. ಅತಿಯಾದ ವೇಗ ಅಥವಾ ಚಾಲಕ ಆಯಾಸಗೊಂಡಿದ್ದರಿಂದ ಅಪಘಾತ ಸಂಭವಿಸಿರಬಹುದು” ಎಂದು ಅಂದಾಜಿಸಿದ್ದಾರೆ.
ಅಲ್ಲದೆ, ಅಪಘಾತ ಸ್ಥಳಕ್ಕೆ ಭೇಟಿ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಜಾಗರೂಕತೆಯಿಂದ ವಾಹನ ಚಲಾಯಿಸಿ, ಜೀವ ರಕ್ಷಿಸಿ ಎಂದು ಬರೆದುಕೊಂಡಿದ್ದಾರೆ.
Ghastly accident on Bengaluru- Pune Highway near Haveri at 4 am today,Killing 13 persons who were on pilgrimage. Sad
Probable causes-
Wrongly parked Lorry
Wrong overtaking
Over speeding
Fatigue of driverVisiting the accident spot today
“Drive safely to save lives” pic.twitter.com/GX9ypaCxAR
— alok kumar (@alokkumar6994) June 28, 2024
ಭೀಕರ ಅಪಘಾತ
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ.
ಮೃತರನ್ನು ಸುಭದ್ರಾ ಬಾಯಿ (65), ಪರಶುರಾಮ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (40), ಅರ್ಪಿತಾ (18), ಪುಣ್ಯ (50), ಮಂಜುಳಾ ಬಾಯಿ (62), ಆದರ್ಶ (23), ಮಾನಸ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. ಇನ್ನೂ ಅರ್ಪಿತಾ, ಅರುಣಾ, ಅನ್ನಪೂರ್ಣ ಎನ್ನುವ ಮೂವರು ಗಾಯಾಳುಗಳ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ನಿವಾಸಿಗಳಾಗಿದ್ದ ನಾಗೇಶ್ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಟಿಟಿ ವಾಹನ ಖರೀದಿ ಮಾಡಿದ್ದರು. ಹಾಗಾಗಿ, ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ನಾಗೇಶ್, ವಿಶಾಲಾಕ್ಷಿ ಮತ್ತು ಪುತ್ರ ಆದರ್ಶ್ ಸೇರಿಂದತೆ 17 ಜನರು ಜೂ.24ರಂದು ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಹೊರಟಿದ್ದಾರೆ.
ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ ತಲುಪಿ, ಅಲ್ಲಿ ವಾಹನ ಪೂಜೆ ಮಾಡಿಸಿದ್ದಾರೆ. ನಂತರ ತುಳಜಾಭವಾನಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಾವೇರಿ | ಭೀಕರ ಅಪಘಾತ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿ, ಅಲ್ಲಿಂದ ಬೆಳಗಾವಿ ಜಿಲ್ಲೆ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ತೆರಳುವಾಗ ನಸುಕಿನ ಜಾವ 4 ಗಂಟೆಗೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ನಾಗೇಶ್, ವಿಶಾಲಾಕ್ಷಿ ಮತ್ತು ಆದರ್ಶ ಸೇರಿದಂತೆ 13 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಹೆಚ್ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.




