ಎಚ್‌ ಡಿ ಕುಮಾರಸ್ವಾಮಿ ಮೂಗಿನಿಂದ ಸುರಿದ ರಕ್ತ; ಆಸ್ಪತ್ರೆಗೆ ದೌಡು

Date:

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಭಾನುವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಸಭೆ ಆಯೋಜನೆಯಾಗಿತ್ತು. ಸಭೆ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಹೇಳಿಕೆ ನೀಡುತ್ತಿದ್ದರು.

ಆಗ ಮೊದಲಿಗೆ ಮೂಗು ಒರೆಸಿಕೊಂಡ ಕುಮಾರಸ್ವಾಮಿ, ಮತ್ತೆ ಒರೆಸಿಕೊಳ್ಳುವ ವೇಳೆ ರಕ್ತ ಸೋರಿಕೆಯಾಗಲಾರಂಭಿಸಿದೆ. ಪತ್ರಿಕಾಗೋಷ್ಠಿ ವೇಳೆ ಪಕ್ಕದಲ್ಲೇ ಅವರ ಪುತ್ರ, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನಿಂತಿದ್ದರು. “ಯಾಕೆ ಏನಾಯ್ತು?” ಎಂದು ನಿಖಿಲ್‌ ಕೇಳಿದಾಗ ಮೂಗು ಒರೆಸಿಕೊಳ್ಳುತ್ತಲೇ, ಓಕೆ ಎಂದು ಕುಮಾರಸ್ವಾಮಿ ಕೈಯಲ್ಲಿ ಸನ್ನೆ ಮಾಡಿ ಮಾತು ಮುಂದುವರಿಸಿದರು. ಆದರೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆಯಲ್ಲಿ ನಿಖಿಲ್‌ ಅವರು ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

ಎಚ್‌ ಡಿ ಕುಮಾರಸ್ವಾಮಿ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಸುತ್ತಮುತ್ತ ನೆರೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...