ಭಾರೀ ಮಳೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಯಚೂರು, ಯಾದಗಿರಿ, ಗುಲ್ಬರ್ಗ, ಬೀದರ್ ಹೊರತುಪಡಿಸಿ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಷ್ಟೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಆರು ದಿನಗಳವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಇದನ್ನು ಓದಿದ್ದೀರಾ? ಹಾಸನ | ಗುಡುಗು ಸಹಿತ ಮಳೆ; ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. ನಾಳೆ (ಏಪ್ರಿಲ್ 13) ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಇಂದು (ಏಪ್ರಿಲ್ 12) ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಬೆಂಗಳೂರು ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...