ವಾಯುಭಾರ ಕುಸಿತ | ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ವಾಯುಭಾರ ಕುಸಿತದಿಂದಾಗಿ ಸೋಮವಾರ ಮುಂಜಾನೆಯಿಂದಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಇಂದಿನಿಂದ ಮೇ 22ರವರೆಗೂ ಅಲ್ಲಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಮೇ 21ರ ಸುಮಾರಿಗೆ ಕರ್ನಾಟಕ ಕರಾವಳಿಯ ಪೂರ್ವ- ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಮೇಲ್ಮುಖ ವಾಯು ಚಂಡಮಾರುತವು ರೂಪುಗೊಳ್ಳುವ ಸಾಧ್ಯತೆಯಿದೆ. ಇದರಿಂದಾಗಿ ಮೇ 22ರ ಸುಮಾರಿಗೆ ಅದೇ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳು ಸಾಧ್ಯತೆಯಿದೆ. ನಂತರ ಅದು ಉತ್ತರಕ್ಕೆ ಚಲಿಸುವ ಮತ್ತು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮಳೆ ಅಬ್ಬರ; ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿತ್ತು. ಸೋಮವಾರ ಮುಂಜಾನೆಯೇ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ರಾಮನಗರ ಮೊದಲಾದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸೋಮವಾರ ಬೆಳಿಗ್ಗೆಯೇ ಮಳೆ ಶುರುವಾಗಿದೆ.

ಬೆಂಗಳೂರಿನಲ್ಲಿ ಮಳೆ ಅವಾಂತರ

ಬೆಂಗಳೂರಿನಲ್ಲಿ ರಾಜಾಜಿನಗರ, ಜಯನಗರ, ವಿಜಯನಗರ, ಜೆಪಿ ನಗರ, ಆರ್ ಆರ್ ನಗರ, ನಾಗರಬಾವಿ, ಪೀಣ್ಯ, ಹೆಬ್ಬಾಳ, ಮಲ್ಲೇಶ್ವರಂ,ಮೆಜೆಸ್ಟಿಕ್, ಯಶವಂತಪುರ ಕಡೆಗಳಲ್ಲಿ ಭಾರೀ ಗಾಳಿ ಮಳೆಯಾಗಿದೆ. ಅಲ್ಲಲ್ಲಿ ರಸ್ತೆಗಳು ಜಲಾವೃತವಾಗಿದೆ.

ಇನ್ನು ನಿನ್ನೆ ಸಂಜೆ ಸುರಿದ ಮಳೆಗೆ ಎಂಜಿ ರಸ್ತೆ, ವಿಧಾನಸೌಧ, ಶಾಂತಿನಗರ, ಕೆಆರ್ ಮಾರುಕಟ್ಟೆಯಲ್ಲಿ ರಸ್ತೆಗಳಲ್ಲಿ ಸಂಚಾರಕ್ಕೆ ಅಡೆತಡೆಯಾಗಿದೆ. ಅನಿಲ್‌ಕುಂಬ್ಳೆ ವೃತ್ತ, ಕೆಆರ್ ಮಾರುಕಟ್ಟೆ ಮೇಲ್ಸೇತುವೆ ಕೆಳಭಾಗದಲ್ಲಿ ನೀರು ತುಂಬಿದೆ. ಇಪ್ಪತ್ತು ಅಧಿಕ ಮರಗಳು, ಅಲ್ಲಲ್ಲಿ ಕೊಂಬೆಗಳು ಧರಶಾಹಿಯಾಗಿದೆ.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮಳೆ ಅಬ್ಬರ: 23 ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಆರ್ಭಟ

ಇಂದು, ನಾಳೆಯ ಹವಾಮಾನ ವರದಿ

ಇಂದು ಮತ್ತು ನಾಳೆ(ಮೇ 18, 19) ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆ, ಕೆಲವೆಡೆ ಹಗುರದಿಂದ ಸಾಧಾರಣ ಗುಡುಗು ಸಹಿತ, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...