ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ(ಜುಲೈ) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಧಿಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.
ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹವಾಮಾನ ಇಲಾಖೆ
ನಾಳೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರಿಯಿಂದ ಅತ್ಯಧಿಕ ಮಳೆಯಾಗಲಿದೆ. ಜೊತೆಗೆ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಇನ್ನು ಕರ್ನಾಟದ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ. ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು.#ksndmc #ಮುಂಗಾರುಮಳೆ #ಸುರಕ್ಷಿತವಾಗಿರಿ #ಎಚ್ಚರಿಕೆವಹಿಸಿ pic.twitter.com/c4Yehm0jEQ
— Karnataka State Natural Disaster Monitoring Centre (@KarnatakaSNDMC) July 27, 2025
ಇನ್ನುಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಜುಲೈ 27ರಿಂದ 28ರವರೆಗೆ ಕರಾವಳಿಯಲ್ಲಿ ಗಂಟೆಗೆ 45-55ರಿಂದ 65 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. 29ರಿಂದ 31ರವರೆಗೆ ಕರಾವಳಿಯಲ್ಲಿ ಗಂಟೆಗೆ 40-50ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆಯು ಸೂಚಿಸಿದೆ.





