ಜೂ.13 ರವರೆಗೆ ರಾಜ್ಯದಲ್ಲಿ ಭಾರೀ ಮಳೆ; 12 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

Date:

ಮುಂಗಾರು ಮಳೆ ಚುರುಕಾಗಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಮಳೆ ಜೂನ್‌ 13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಜತೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

ಜೋರು ಮಳೆ ಹಿನ್ನೆಲೆ, ಉಡುಪಿ ಸೇರಿದಂತೆ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್‌’ ಘೋಷಣೆ ಮಾಡಿದೆ. ಹಾಗೆಯೇ, ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಸೇರಿದಂತೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ(40-50kmph) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಗೋಹತ್ಯೆ ನಿಷೇಧ ಕಾಯ್ದೆ ಎಂಬ ‘ಅನರ್ಥ’ಕಾರಿ ಪ್ರಹಸನ

ಚಂಡಮಾರುತದ ಹವಾಮಾನವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ 65 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...