ಸಿಎಂ ಸ್ಥಾನಕ್ಕೆ ಪಟ್ಟು | ಡಿಕೆಶಿ-ಸಿದ್ದರಾಮಯ್ಯಗೆ ದೆಹಲಿಗೆ ಬರಲು ಹೈಕಮಾಂಡ್‌ ಬುಲಾವ್‌

Date:

ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ದೆಹಲಿಗೆ ಬರುವಂತೆ ಬುಲಾವ್‌ ನೀಡಿದೆ.

ಸಿದ್ದರಾಮಯ್ಯ ಅವರು ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಆದರೆ, ಡಿ ಕೆ ಶಿವಕುಮಾರ್‌ ಅವರು ದೆಹಲಿಗೆ ಹೋಗುವ ವಿಚಾರ ಇನ್ನೂ ಸ್ಪಷ್ಟವಾಗಿಲ್ಲ.

ಭಾನುವಾರ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ʼಮುಖ್ಯಮಂತ್ರಿ ಮತ್ತು ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಅಧಿಕಾರ ಎಐಸಿಸಿ ಅಧ್ಯಕ್ಷರಿಗೆ ವಹಿಸಲಾಗಿದೆʼ ಎಂಬ ನಿರ್ಧಾರಕ್ಕೆ ಬರಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಹೈಕಮಾಂಡ್‌ ಕರ್ನಾಟಕದ ಶಾಸಕಾಂಗ ಪಕ್ಷದ ನಾಯಕ ಆಯ್ಕೆಗೆ ವೀಕ್ಷಕರಾಗಿ ಸುಶೀಲ್‌ಕುಮಾ‌ ಶಿಂಧೆ (ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರ), ಜಿತೇಂದ್ರ ಸಿಂಗ್ (ಎಐಸಿಸಿ ಪ್ರಧಾನ ಕಾರ್ಯದರ್ಶಿ) ಹಾಗೂ ದೀಪಕ್ ಬಬಾರಿಯಾ (ಮಾಜಿ ಎಐಸಿಸಿ ಪ್ರಧಾನ ಕಾರ್ಯದರ್ಶಿ) ಅವರನ್ನು ನಿಯೋಜಿಸಿದ್ದರು.

ಈ ಮೂವರ ವೀಕ್ಷರ ತಂಡ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ್ದು, ಸೋಮವಾರ ಹೈಕಮಾಂಡ್‌ ಮುಂದೆ ಇಡಲಿದೆ. ಡಿ ಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರ ಕರೆಯಿಸಿಕೊಳ್ಳುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ.

ಡಿ ಕೆ ಶಿವಕುಮಾರ್‌ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ಸಂಭ್ರಮಕ್ಕೆ ಮುಖ್ಯಮಂತ್ರಿ ಸ್ಥಾನದ ಉಡುಗೊರೆಯನ್ನು ಹೈಕಮಾಂಡ್‌ ನೀಡಲಿದೆ ಎನ್ನುವುದು ಅವರ ಒಳ ಇಂಗಿತ. ಆದರೆ, ಸಿದ್ದರಾಮಯ್ಯ ಪರವಾಗಿ 107 ಶಾಸಕರು ಬಹುಮತ ವ್ಯಕ್ತಪಡಿಸಿದ್ದು, ಅಂತಿಮವಾಗಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದು ಕಾಂಗ್ರೆಸ್‌ನ ಬಹುಪಾಲು ಶಾಸಕರ ನಿರೀಕ್ಷೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...