ಪೊಲೀಸರ ಗೂಂಡಾ ವರ್ತನೆ; ಇಲಾಖೆಯ ಮೇಲೆ ನಿಯಂತ್ರಣ ಕಳೆದುಕೊಂಡ ಗೃಹ ಸಚಿವರು: ವಿಜಯೇಂದ್ರ ಕಿಡಿ

Date:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿರಂಕುಶ ಪ್ರಭುತ್ವ ಮೆರೆಯುತ್ತಿದೆ. ಅಮಾಯಕರು, ರೈತ ಹೋರಾಟಗಾರರು ಹಾಗೂ ರಾಷ್ಟ್ರ ಭಕ್ತ ಕಾರ್ಯಕರ್ತರ ಮೇಲೆ ನಡೆಯುತ್ತಿದ್ದ ಪೋಲಿಸ್ ದರ್ಪ, ದೌರ್ಜನ್ಯ ಇದೀಗ ವಕೀಲರತ್ತವೂ ತಿರುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಚಿಕ್ಕಮಗಳೂರಿನಲ್ಲಿ ಯುವ ವಕೀಲ ಪ್ರೀತಂ ಅವರ ಮೇಲೆ ನಡೆದಿರುವ ಪೊಲೀಸರ ಅಮಾನುಷ ಹಲ್ಲೆ ಅತ್ಯಂತ ಖಂಡನೀಯ” ಎಂದು ಹೇಳಿದ್ದಾರೆ.

“ಪೊಲೀಸರ ಎಲ್ಲೆ ಮೀರಿದ ಗೂಂಡಾ ವರ್ತನೆ ಗಮನಿಸಿದರೆ ಗೃಹ ಸಚಿವರು ಇಲಾಖೆಯ ಮೇಲೆ ನಿಯಂತ್ರಣ ಕಳೆದುಕೊಂಡಿರುವಂತೆ ಕಾಣುತ್ತಿದೆ. ವಕೀಲರ ಮೇಲೆ ನಡೆದಿರುವ ಹಲ್ಲೆ ಪ್ರಕರಣವೂ ಸೇರಿದಂತೆ ರಾಜ್ಯದ ಇತರೆಡೆಗಳಲ್ಲಿ ನಡೆದಿರುವ ಪೊಲೀಸ್ ದೌರ್ಜನ್ಯಗಳ ಕುರಿತು ಸರ್ಕಾರ ಈ ಕೂಡಲೇ ಗಂಭೀರ ಕ್ರಮ ತೆಗೆದುಕೊಂಡು ಪೊಲೀಸ್ ದಬ್ಬಾಳಿಕೆಗೆ ಅಂಕುಶ ಹಾಕದಿದ್ದರೆ ಬಿಜೆಪಿ ಕೈ ಕಟ್ಟಿ ಕೂರದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಠಾಣೆಯಲ್ಲಿ ಕೂಡಿಹಾಕಿ ಯುವ ವಕೀಲನಿಗೆ ಥಳಿತ; ಪಿಎಸ್‌ಐ ಸೇರಿ 6 ಮಂದಿ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...