ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಗೌರವ ಧನ 15,000 ರೂ.ಗೆ ಹೆಚ್ಚಿಸಬೇಕು : ಎಂ.ಉಮಾದೇವಿ

Date:

“ರಾಜ್ಯದ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು 15,000 ರೂ.ಗಳಿಗೆ ಹೆಚ್ಚಿಸಬೇಕು” ಎಂದು ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಎಂ.ಉಮಾದೇವಿ ಆಗ್ರಹಿಸಿದರು.

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ “ಅಂಗನವಾಡಿ ನೌಕರರ ರಾಜ್ಯ ಮಟ್ಟದ ಪ್ರತಿಭಟನೆ”ಯಲ್ಲಿ ಅವರು ಮಾತನಾಡಿದರು.

“ಕಳೆದ ಐದು ದಶಕಗಳಿಂದ ಹಳ್ಳಿಗಳಲ್ಲಿ ಬಡಜನರ ನಡುವೆ ಶ್ರದ್ಧೆಯಿಂದ ಅಂಗನವಾಡಿ ನೌಕರರು ದುಡಿಯುತ್ತಾ ಬಂದಿದ್ದಾರೆ. ಚುನಾವಣೆಯಲ್ಲಿ ನೀಡಿದ ಭರವಸೆಯಂತೆ 15,000 ರೂ ಗೌರವಧನವನ್ನು ಹೆಚ್ಚಿಸಬೇಕು ಹಾಗೂ ನಿವೃತ್ತಿ ಪರಿಹಾರವನ್ನು 2 ಲಕ್ಷ ರೂ.ವರೆಗೆ ನೀಡಬೇಕು” ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಿನನಿತ್ಯದ ಬೆಲೆ ಏರಿಕೆಯಿಂದ ಅತ್ಯಲ್ಪ ಗೌರವಧನ ಕುಟುಂಬ ನಿರ್ವಹಣೆಗೆ ಸಾಕಾಗುತ್ತಿಲ್ಲ. ಆದ್ದರಿಂದ ಅವರ ಕುಟುಂಬಗಳು ತೀವ್ರ ಸಂಕಷ್ಟವನ್ನು ಎದುರಿಸುತ್ತಿವೆ. ರಾಜ್ಯ ಸರ್ಕಾರವು ಅಂಗನವಾಡಿ ನೌಕರರನ್ನು ಸಿ ಮತ್ತು ಡಿ ದರ್ಜೆಯ ನೌಕರರೆಂದು ಪರಿಗಣಿಸಬೇಕು. ಸರ್ಕಾರಿ ನೌಕರರ ಸರಿಸಮಾನವಾಗಿ ವೇತನ ನೀಡಬೇಕು.” ಎಂದು ಆಗ್ರಹ ಮಾಡಿದರು.

ಅಂಗನವಾಡಿ ಕಾರ್ಯಕರ್ತೆ ನಿರ್ಮಲಾ ಅವರು ʼಈದಿನʼ ಜೊತೆ ಮಾತನಾಡಿ, “ಸರ್ಕಾರ ಈಗ ಕೊಡುತ್ತಿರುವ ಗೌರವ ಧನದಲ್ಲಿ ಜೀವನ ನಿರ್ವಹಣೆ ತುಂಬಾ ಕಷ್ಟವಾಗುತ್ತಿದೆ. ಈ ವರ್ಷದ ಬಜೆಟ್‌ನಲ್ಲಾದರೂ ಗೌರವ ಧನವನ್ನು ಹೆಚ್ಚಿಸಿದರೆ, ಬೀದಿಗೆ ಬಂದು ಪ್ರತಿಭಟನೆ ಮಾಡುವುದನ್ನು ನಿಲ್ಲಿಸುತ್ತೇವೆ. ಚುನಾವಣೆಯ ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ನೌಕರರ ಗೌರವ ಧನ ಹೆಚ್ಚಿಸುವ ಆರನೇ ಗ್ಯಾರಂಟಿಯನ್ನು ಈ ಬಾರಿ ಆದರೂ ಜಾರಿಗೆ ತನ್ನಿ” ಎಂದು ಮನವಿ ಮಾಡಿದರು.

ಅಂಗನವಾಡಿ 25

ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಅಂಗನವಾಡಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. “ಈ ವರ್ಷದ ಬಜೆಟ್‌ನಲ್ಲಿ ಗೌರವಧನವನ್ನು ಹೆಚ್ಚಿಸಿ” ಎಂಬುದು ಎಲ್ಲರ ಒಕ್ಕೊರಲ ಧ್ವನಿಯಾಗಿತ್ತು.

ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಕೆ.ಸೋಮಶೇಖರ್‌ ಯಾದಗಿರಿ ಅವರು ʼಗೌರವ ಧನ 15,000 ರೂ ಹೆಚ್ಚಿಸುವ ಜೊತೆಗೆ 15 ಪ್ರಮುಖ ಬೇಡಿಕೆಗಳನ್ನುʼ ಮಂಡಿಸಿದರು.

ಬೇಡಿಕೆಗಳು

  1. ಚುನಾವಣಾ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವ ಧನವನ್ನು ರೂ.15,000 ಕ್ಕೆ ಹೆಚ್ಚಿಸಬೇಕು ಮತ್ತು ನಿವೃತ್ತಿ ಪರಿಹಾರ ರೂ.2 ಲಕ್ಷ ನೀಡಬೇಕು.
  2. ಸುಪ್ರೀಂಕೋರ್ಟ್ ಆದೇಶದಂತೆ ಅಂಗನವಾಡಿ ನೌಕರರಿಗೆ ಗ್ರಾಚೂಟಿ (ಉಪ ಧನ) ಹಣ ನಿವೃತ್ತಿಯಾದ ಎಲ್ಲಾ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಬೇಕು. ಈಗಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು.
  3. ಸರ್ಕಾರದ ಸಿ ಮತ್ತು ಡಿ ಗ್ರೂಪ್ ನೌಕರರೆಂದು ಪರಿಗಣಿಸಬೇಕು ಎನ್ನುವ ಅಂಗನವಾಡಿ ನೌಕರರ ಬಹುದಿನಗಳ ಬೇಡಿಕೆಯನ್ನು ಎತ್ತಿ ಹಿಡಿದಿರುವ ಗುಜರಾತ್ ಹೈಕೋರ್ಟ್‌ನ ಆದೇಶದಂತೆ, ಅಂಗನವಾಡಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು.
  4. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ವೈದ್ಯಕೀಯ ವೆಚ್ಚಗಳ ಮರುಪಾವತಿ ಸಹಾಯ ಧನವನ್ನು ಕನಿಷ್ಠ ರೂ.2 ಲಕ್ಷ ಗಳಿಗೆ ಹೆಚ್ಚಿಸಬೇಕು. ಫಲಾನುಭವಿಗಳಿಗೆ ಸುಲಭವಾಗಿ ಪಾವತಿಸಲು ಸೂಕ್ತ ಕ್ರಮ ವಹಿಸಬೇಕು.
  5. ಈಗಾಗಲೇ ನಿವೃತ್ತಿಯಾದ ನೌಕರರಿಗೆ ರೂ. 50,000 ಮತ್ತು ರೂ 30,000 ನಿವೃತ್ತಿ ಪರಿಹಾರ ಹಣ ಹಲವರಿಗೆ ಸಿಗುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸಿ ಸರಳವಾಗಿ ನಿವೃತ್ತಿ ಪರಿಹಾರ ಸಿಗುವಂತೆ ಸೂಕ್ತ ಕ್ರಮವಹಿಸಬೇಕು ಮತ್ತು ನೌಕರರನ್ನು ಸರ್ಕಾರದ ಪಿಂಚಣಿ ಯೋಜನೆಗೆ ಒಳಪಡಿಸಬೇಕು.
  6. ಸೇವಾ ಹಿರಿತನವನ್ನು ಆಧರಿಸಿ 50% ಮತ್ತು ಮೆರಿಟ್ ಆಧರಿಸಿ 50% ಮೇಲಿನ ಹುದ್ದೆಗೆ ಮುಂಬಡ್ತಿಗೆ ಆದೇಶ ಮಾಡಬೇಕು.
  7. ಐಸಿಡಿಎಸ್‌ ಕೆಲಸಗಳನ್ನು ಹೊರತುಪಡಿಸಿ, ಇತರ ಇಲಾಖೆಗಳ ಹೆಚ್ಚುವರಿ ಕೆಲಸಗಳನ್ನು ನೀಡಬಾರದು ಎನ್ನುವ ಇಲಾಖೆಯ ಆದೇಶವನ್ನು ಎಲ್ಲಾ ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ವಹಿಸಬೇಕು ಮತ್ತು ಬಿಎಲ್ಓ ಕೆಲಸ ಸಹಿತ ಇತರೆ ಹೆಚ್ಚುವರಿ ಕೆಲಸಗಳಿಂದ ಕೂಡಲೇ ಬಿಡುಗಡೆ ಮಾಡಬೇಕು.
  8. ಪ್ರತಿ ತಿಂಗಳು 5ನೇ ತಾರಿಖಿನ ಒಳಗಾಗಿ, ಮಾಸಿಕ ವೇತನ (ಗೌರವ ಧನ) ಪಾವತಿ ಮಾಡಬೇಕು.
  9. ಮಾತೃ ವಂದನಾ, ಬಾಗ್ಯಲಕ್ಷ್ಮೀ ಕೆಲಸಗಳಿಗೆ ಹೆಚ್ಚುವರಿ ಗೌರವ ಧನವನ್ನು ನಿಡಬೇಕು.
  10. ಬೆಲೆ ಏರಿಕೆಯ ಇಂದಿನ ದರದಲ್ಲಿ ಅಂಗನವಾಡಿ ಕೇಂದ್ರಗಳ ವಾಡಿಗೆ ವರ, ಮೊಟ್ಟೆ ದರ, ಸಾದಿಲ್ವಾರು, ಫ್ರೆತ್ರಿ ಫಂಡ್ ಅನುದಾನ ಇತ್ಯಾದಿ ದರಗಳನ್ನು ಹೆಚ್ಚಿಸಬೇಕು.
  11. ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕ ಇಂಟರ್ನೆಟ್ ಸಂಪರ್ಕ ಸಹಿತ ಉತ್ತಮ ಗುಣಮಟ್ಟದ ಮೊಬೈಲ್ ಸೆಟ್ ಗಳು, ರುದ್ದ ಕುಡಿಯುವ ನೀರು, ಶೌಚಾಲಯ ಸಹಿತ ಸಮರ್ಪಕವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.
  12. ಅಂಗನವಾಡಿ ಕೇಂದ್ರಗಳಿಗೆ ಪ್ರತಿ ವರ್ಷಕ್ಕೆ ನಿಗದಿಪಡಿಸಿದ ಸಂಖ್ಯೆಯ ಸಿಲೆಂಡ‌ರ್ ಗಳನ್ನು ಕೆಲವು ಜಿಲ್ಲೆಗಳಲ್ಲಿ ನೀಡುತ್ತಿಲ್ಲ. ನಿಗದಿಪಡಿಸಿದ ಸಂಖ್ಯೆಯ ಸಿಲಿಂಡ‌ರ್ ನೀಡಲು ಕ್ರಮ ಕೈಗೊಳ್ಳಬೇಕು.
  13. ಅಂಗನವಾಡಿ ಕೇಂದ್ರಗಳಿಗೆ ಇನ್ ಚಾರ್ಜ್ ಕಾರ್ಯಕರ್ತೆಯರಿಗೆ ನೀಡುವ ಗೌರವ ಧನವನ್ನು ಹೆಚ್ಚಿಸಬೇಕು.
  14. ಅಂಗನವಾಡಿ ಕೇಂದ್ರಗಳಲ್ಲಿ ಹಲವಾರು ವರ್ಷಗಳಿಂದ ಖಾಲಿ ಇರುವ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಬೇಕು.
  15. ಅಂಗನವಾಡಿ ಮಕ್ಕಳಿಗೆ ನೀಡುತ್ತಿರುವ ಪೌಷ್ಟಿಕ ಆಹಾರದ ಗ್ರಾಂ ಗಳ ಪ್ರಮಾಣ ಕಡಿಮೆ ಇದ್ದು, ಎಲ್ಲಾ ಪದಾರ್ಥಗಳ ಪ್ರಮಾಣಗಳನ್ನು ಹೆಚ್ಚಿಸಬೇಕು.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...