ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಬೆಳಗಾವಿಗೆ ಸಿಕ್ಕಿದ್ದೆಷ್ಟು?

Date:

ದೇವರಾಜ ಅರಸು ಅವರು ರೂಪಿಸಿಕೊಟ್ಟ ಸಾಮಾಜಿಕ ನ್ಯಾಯ ಆಧಾರಿತ ಆಡಳಿತದ ಪರಂಪರೆಯನ್ನ ಮುಂದುವರೆಸುತ್ತ, ಅವರಿಗಿಂತಲೂ ಹೆಚ್ಚು ಅವಧಿಗೆ ರಾಜ್ಯವನ್ನು ಮುನ್ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವು ಜನಕಲ್ಯಾಣ, ಆಡಳಿತಾತ್ಮಕ ಸಮತೋಲನ ಹಾಗೂ ಪ್ರಾದೇಶಿಕ ಸಮಾನತೆಗೆ ಸ್ಪಷ್ಟ ಆದ್ಯತೆ ನೀಡಿದೆ. ಈ ದೃಷ್ಟಿಕೋನದಲ್ಲಿ ವಿಶೇಷವಾಗಿ ಬೆಳಗಾವಿ ಜಿಲ್ಲೆಗೆ ಆಡಳಿತಾತ್ಮಕ ಮಹತ್ವ ನೀಡುವುದರ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗಳ ಮೂಲಕ ರೈತ ಕೇಂದ್ರಿತ ನೀತಿಗಳನ್ನು ಜಾರಿಗೊಳಿಸಿದ್ದಾರೆ.

ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ (2013-2018) ಬೆಳಗಾವಿ ಜಿಲ್ಲೆಗೆ ಸಿಕ್ಕ ಕೊಡುಗೆಗಳು:

ಬೆಳಗಾವಿ ನಾಮಕರಣ: ಬೆಳಗಾವಿಗೆ ಈ ಮೊದಲು ಬೆಳಗಾಂವ್ ಎಂದು ಕರೆಯಲಾಗುತ್ತಿತ್ತು. ಕರ್ನಾಟಕ ಏಕೀಕರಣಗೊಂಡು 50 ವರ್ಷಗಳು ಪೊರೈಸಿದ ಸಂಭ್ರಮದಲ್ಲಿ ಕನ್ನಡದ ಅಸ್ತಿತ್ವವನ್ನು ಎತ್ತಿಹಿಡಿಯಲು ರಾಜ್ಯದ 12 ನಗರಗಳ ಹೆಸರುಗಳನ್ನು ಬದಲಾಯಿಸಲಾಯಿತು. ಬೆಳಗಾವಿಯ ಸುವರ್ಣಸೌಧದಲ್ಲಿಯೇ ಪ್ರತಿವರ್ಷ ಚಳಿಗಾಲದ ಅಧಿವೇಶನವನ್ನು ನಡೆಸುವ ಸಂಪ್ರದಾಯವನ್ನು ಅವರು ತಮ್ಮ ಮೊದಲ ಅವಧಿಯಲ್ಲಿ ಕಡ್ಡಾಯಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೀರಭದ್ರೇಶ್ವರ ಏತ ನೀರಾವರಿ ಯೋಜನೆ: 2016ರ ಜನವರಿಯಲ್ಲಿ ರಾಮದುರ್ಗ ತಾಲೂಕಿನಲ್ಲಿ ಸುಮಾರು ₹544 ಕೋಟಿ ವೆಚ್ಚದ ವೀರಭದ್ರೇಶ್ವರ ಏತ ನೀರಾವರಿ ಯೋಜನೆಗೆ ಅಡಿಗಲ್ಲು ಹಾಕಲಾಯಿತು ಇದು ಘಟಪ್ರಭಾ ನದಿಯಿಂದ ನೀರನ್ನು ಎತ್ತಿ ರಾಮದುರ್ಗ ಮತ್ತು ಬಾಗಲಕೋಟೆಯ ಮುಧೋಳ ತಾಲೂಕಿನ ಸುಮಾರು 17,377ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುವ ಗುರಿ ಹೊಂದಿದೆ.

WhatsApp Image 2026 01 16 at 5.12.28 PM 1
ವೀರಭದ್ರೇಶ್ವರ ಯೋಜನಾ ಕಾಮಗಾರಿ

ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆ: ಕಾಗವಾಡ ತಾಲೂಕಿನ ಈ ಪ್ರಮುಖ ಯೋಜನೆಯನ್ನು 2017ರಲ್ಲಿ ಪ್ರಾರಂಭಿಸಲಾಗಿದೆ. ಈ ಯೋಜನೆಯು ಕೃಷ್ಣಾ ನದಿಯಿಂದ ನೀರನ್ನು ಎತ್ತಿ ಬರಪೀಡಿತ ಪ್ರದೇಶದ ಸಾವಿರಾರು ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶ ಹೊಂದಿದೆ.

ಕಳಸಾ ಬಂಡೂರಿ ಯೋಜನೆ: ಮಹದಾಯಿ ನದಿಯಿಂದ ನೀರು ಹಂಚಿಕೆಗಾಗಿ ಹೋರಾಟ ಹಾಗೂ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುವ ಮೂಲಕ ಸಿದ್ದರಾಮಯ್ಯ ಈ ಯೋಜನೆಗೆ ಕಾನೂನಾತ್ಮಕ ಮತ್ತು ಆರ್ಥಿಕ ಬೆಂಬಲ ನೀಡಿದರು.

ತುಪ್ಪರಿಹಳ್ಳ ಯೋಜನೆ: ಇದು ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ರೈತರ ದಶಕಗಳ ಕನಸಿನ ಯೋಜನೆಯಾಗಿದ್ದು, ಜಿಲ್ಲೆಯ ಪ್ರವಾಹ ನಿಯಂತ್ರಣ ಮತ್ತು ಮತ್ತು ನೀರಾವರಿಗಾಗಿ ಈ ಯೋಜನೆಗೆ ಚಾಲನೆ ನೀಡಲಾಯಿತು.

ಕೆರೆ ತುಂಬಿಸುವ ಯೋಜನೆ: ಅಥಣಿ ಮತ್ತು ಸವದತ್ತಿ ಭಾಗದ ನೂರಾರು ಕೆರೆಗಳನ್ನು ನದಿ ಮೂಲಗಳಿಂದ ತುಂಬಿಸುವ ಯೋಜನೆಗಳಿಗೆ ಈ ಅವಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಯಿತು.

ನಾಲಾ ನೀರಾವರಿ ಕಾಮಗಾರಿಗೆ ಅನುದಾನ: ಬಳ್ಳಾರಿ ನಾಲಾ ನೀರಾವರಿ ಯೋಜನೆ ಕಾಮಗಾರಿ ವೇಗವರ್ಧನೆಗೆ ವಿಶೇಷ ಅನುದಾನ ಬಿಡುಗಡೆಮಾಡಲಾಯಿತು. ಮಾರ್ಕಂಡೇಯ ನದಿಯ ಮುಖ್ಯ ಉಪನದಿಯಾದ ಬಳ್ಳಾರಿ ನಾಲದ ಮೇಲೆ ಅಣೆಕಟ್ಟು ನಿರ್ಮಾಣ ಮಾಡಿ ಬೆಳಗಾವಿ, ಗೋಕಾಕ್, ಸವದತ್ತಿ, ಮತ್ತು ಬೈಲಹೊಂಗಲ ತಾಲೂಕಿನಲ್ಲಿ 8200 ಹೆಕ್ಟೇರ್ ಭೂಮಿಗೆ ನೀರಾವರಿ ಒದಗಿಸುವ ಯೋಜನೆ.

ಸಾಲಾಪುರ ಬಸವೇಶ್ವರ ಏತ ನೀರಾವರಿ ಯೊಜನೆ: 536 ಕೋಟಿ ವೆಚ್ಚದಲ್ಲಿ ಶಾಸಕ ಅಶೋಕ ಪಟ್ಟಣ ಅವರ ಪ್ರಯತ್ನದ ಫಲವಾಗಿ ಈ ಯೋಜನೆ ಪ್ರಾರಂಭಿಸಲಾಗಿದೆ. ಇದು ಸಾಲಾಪುರ ಗ್ರಾಮದ ಭೂಮಿಗೆ ನೀರು ಒದಗಿಸುವ ಯೋಜನೆಯಾಗಿದೆ.

ಬೆಳಗಾವಿ ಸ್ಮಾರ್ಟ್ ಸಿಟಿ: ಬೆಳಗಾವಿಯನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಸೇರಿಸಲಾಗಿದೆ. ಇದಕ್ಕಾಗಿ ರಾಜ್ಯದ ಪಾಲಿನ ಅನುದಾನವನ್ನು ಕಾಲಮಿತಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಬೆಳಗಾವಿ ನಗರವನ್ನು ಸುಧಾರಿಸಲು, ನಾಗರಿಕರ ಜೀವನ ಗುಣಮಟ್ಟವನ್ನು ಹೆಚ್ಚಿಸಲು, ಸುಸ್ಥಿರ ಅಭಿವೃದ್ಧಿ ಮತ್ತು ಸಮಗ್ರ ಅಭಿವೃದ್ಧಿ ಸಾಧಿಸಲು ಯೋಜಿಸಲಾಗಿದೆ. ನಾಗರಿಕ ಕೇಂದ್ರಿತ ಇ-ಆಡಳಿತ ಪರಿಹಾರಗಳು, ಉತ್ತಮ ಮೂಲಸೌಕರ್ಯ (ನೀರು, ನೈರ್ಮಲ್ಯ, ಸಾರಿಗೆ, ಇತ್ಯಾದಿ), ಮತ್ತು ತಂತ್ರಜ್ಞಾನದ ಬಳಕೆಯ ಮೂಲಕ ನಗರವನ್ನು ಇನ್ನಷ್ಟು ಸ್ಮಾರ್ಟ್ ಆಗಿ, ಕಾರ್ಯನಿರ್ವಹಿಸಲು ಸುಲಭವಾಗುವಂತೆ ಮಾಡಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ.

ಸಂಕೇಶ್ವರ-ನರಗುಂದ ರಸ್ತೆ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ಬೆಳಗಾವಿ ಜಿಲ್ಲೆಯ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ, ಸಂಕೇಶ್ವರ-ಗೋಕಾಕ-ನರಗುಂದ ಪ್ರಮುಖ ರಸ್ತೆಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಈ ರಸ್ತೆ ಉತ್ತರ ಕರ್ನಾಟಕದ ವಾಣಿಜ್ಯ ಹಾಗೂ ಕೃಷಿ ಸಂಚಾರಕ್ಕೆ ಪ್ರಮುಖವಾಗಿದ್ದು, ಅಭಿವೃದ್ಧಿಯಿಂದ ಆರ್ಥಿಕ ಚಟುವಟಿಕೆಗಳಿಗೆ ವೇಗ ಸಿಗಲಿದೆ ಎಂಬ ನಿರೀಕ್ಷೆ ಇದೆ.

ಕಿತ್ತೂರು ರಾಣಿ ಚೆನ್ನಮ್ಮ ಅವರ ಸ್ಮರಣಾರ್ಥ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಐತಿಹಾಸಿಕ ತಾಣಗಳ ಜೀರ್ಣೋದ್ಧಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಪರಂಪರೆಯ ಮುಂದುವರಿಕೆಯಾಗಿ, 2017ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವವನ್ನು ಸರ್ಕಾರದಿಂದ ಮೊದಲ ಬಾರಿಗೆ ಅದ್ದೂರಿಯಾಗಿ ಆಚರಿಸಲು ಚಾಲನೆ ನೀಡಲಾಗಿತ್ತು.‌ ಇದೇ ರೀತಿಯಲ್ಲಿ, ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ 2 ಕೋಟಿ ರೂಪಾಯಿ ವೆಚ್ಚದ ಸಂಕೀರ್ಣವನ್ನು ಲೋಕಾರ್ಪಣೆ ಮಾಡಲಾಗಿದೆ. ಇದು ದೇವದಾಸಿಯರು ಹಾಗೂ ಸ್ವಸಹಾಯ ಸಂಘಗಳ ಮಹಿಳೆಯರ ಸಬಲೀಕರಣಕ್ಕೆ ನೆರವಾಗುವ ಉದ್ದೇಶ ಹೊಂದಿದೆ.

2ನೇ ಅವಧಿಯಲ್ಲಿ (2023ರಿಂದ) ಬೆಳಗಾವಿ ಪಡೆದ ವಿಶೇಷ ಯೋಜನೆಗಳು..

  • ನಗರ ಮಟ್ಟದಲ್ಲಿ, ಬೆಳಗಾವಿಯ ಗಾಂಧಿನಗರದ ಸಂಗಮ್ ಹೋಟೆಲ್‌ನಿಂದ ಬೋಗಾರವೇಸ್ ವರೆಗೆ ಸುಮಾರು 200 ಕೋಟಿ ರೂಪಾಯಿ ವೆಚ್ಚದ 4.5 ಕಿಲೋಮೀಟರ್ ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. ಇದು ನಗರ ಸಂಚಾರದ ಒತ್ತಡ ಕಡಿಮೆ ಮಾಡುವ ಮಹತ್ವದ ಯೋಜನೆ ಎಂದು ಪರಿಗಣಿಸಲಾಗಿದೆ.
  • ಜಿಲ್ಲಾ ಆಡಳಿತದ ಕಾರ್ಯಕ್ಷಮತೆ ಹೆಚ್ಚಿಸುವ ಉದ್ದೇಶದಿಂದ, ಸುಮಾರು 55 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಜೊತೆಗೆ, ಮಾಧ್ಯಮ ಪ್ರತಿನಿಧಿಗಳಿಗಾಗಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಪತ್ರಿಕಾ ಭವನ ಆರಂಭಿಸಲಾಗಿದ್ದು, ಇದು ಆಡಳಿತ–ಮಾಧ್ಯಮ ಸಂವಹನಕ್ಕೆ ಸಹಕಾರಿಯಾಗಲಿದೆ.
  • ಇದೇ ಅವಧಿಯಲ್ಲಿ, ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗಾಗಿ 16.51 ಕೋಟಿ ರೂಪಾಯಿ ವೆಚ್ಚದ 77 ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಈ ಯೋಜನೆಗಳು ಮೂಲಭೂತ ಸೌಲಭ್ಯಗಳ ಸುಧಾರಣೆಗೆ ಕೇಂದ್ರೀಕೃತವಾಗಿವೆ.
  • ಕೃಷಿ ಕ್ಷೇತ್ರದಲ್ಲಿ ದೀರ್ಘಾವಧಿಯ ಸ್ಥಿರತೆಯನ್ನು ಸಾಧಿಸುವ ಉದ್ದೇಶದಿಂದ, ಬೆಳಗಾವಿ ಸೇರಿದಂತೆ ಐದು ಜಿಲ್ಲೆಗಳಲ್ಲಿ 3000 ಹೆಕ್ಟೇರ್ ಪ್ರದೇಶದಲ್ಲಿ ವೈಜ್ಞಾನಿಕ ಮಣ್ಣಿನ ನಿರ್ವಹಣೆಗೆ ನೂತನ ಯೋಜನೆಗೆ ಚಾಲನೆ ನೀಡಲಾಗಿದೆ. ಇದರಿಂದ ಬೆಳೆ ಉತ್ಪಾದಕತೆ ಹೆಚ್ಚಿಸುವ ನಿರೀಕ್ಷೆ ಇದೆ.
  • ಇದಲ್ಲದೆ, ಬೆಳಗಾವಿ ವಿಭಾಗದಲ್ಲಿ ಸುಮಾರು 40 ಕೋಟಿ ರೂಪಾಯಿ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ವಿತರಿಸಲಾಗಿದೆ, ಇದು ಯಾಂತ್ರೀಕರಣದ ಮೂಲಕ ಕೃಷಿ ವೆಚ್ಚ ಕಡಿಮೆ ಮಾಡಿ ಆದಾಯ ಹೆಚ್ಚಿಸಲು ನೆರವಾಗಲಿದೆ.
  • 2025–26ರ ಬಜೆಟ್‌ನಲ್ಲಿ ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ಕಾಲೇಜು ಮತ್ತು ನೂತನ ಕೃಷಿ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಇದು ಜಿಲ್ಲೆಯ ಯುವಜನತೆಗೆ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಯಲ್ಲಿ ಹೊಸ ಅವಕಾಶಗಳನ್ನು ಕಲ್ಪಿಸಲಿದೆ.
  • ಉದ್ಯೋಗ ಸೃಷ್ಟಿ ಮತ್ತು ಕೈಗಾರಿಕಾ ವಿಸ್ತರಣೆಗೆ ಒತ್ತು ನೀಡುವ ನಿಟ್ಟಿನಲ್ಲಿ, ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪಿಸುವ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಈ ಯೋಜನೆ ಪೂರ್ಣಗೊಂಡರೆ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚುವ ನಿರೀಕ್ಷೆ ಇದೆ.
  • ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ 22 ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್‌ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಯನ್ನು ಜೂನ್‌ ಅಂತ್ಯದೊಳಗೆ ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲು ಸೂಚಿಸಲಾಗಿದೆ.
  • ರಾಮದುರ್ಗ, ಮುಧೋಳ ಹಾಗೂ ಬಾದಾಮಿ ತಾಲೂಕುಗಳ ಒಟ್ಟು 22 ಬರಪೀಡಿತ ಗ್ರಾಮಗಳಿಗೆ ನೀರು ಪೂರೈಸುವ ಸಾಲಾಪುರ ಏತ ನೀರಾವರಿ ಯೋಜನೆ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಇದನ್ನು ಪೂರ್ಣಗೊಳಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ.
  • ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಒಟ್ಟು 34 ಬರಪೀಡಿತ ಗ್ರಾಮಗಳಿಗೆ ನೀರು ಒದಗಿಸುವ ವೀರಭದ್ರೇಶ್ವರ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮಕ್ಕೆ ಸೂಚಿಸಲಾಗಿದೆ.
  • ರಾಜ್ಯದಲ್ಲಿ ಮೊದಲ ಬಾರಿಗೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವದ ರಾಜ್ಯೋತ್ಸವ ಆಚರಣೆಗಾಗಿ ರಾಜ್ಯ ಸರ್ಕಾರವು ₹50 ಲಕ್ಷ ಅನುದಾನ ಬಿಡುಗಡೆ ಮಾಡುವ ಮೂಲಕ ಈ ಭಾಗದ ಕನ್ನಡಿಗರ ಭಾವನೆಗೆ ಸಿದ್ದರಾಮಯ್ಯ ಸರ್ಕಾರ ಸ್ಪಂದಿಸಿರುವದು ಹೆಮ್ಮೆಯ ವಿಷಯವಾಗಿದೆ ಎಂದು ಬೆಳಗಾವಿ ನಗರದ ರವಿ ಪಾಟೀಲ ಹೇಳಿದರು.

ಬೆಳಗಾವಿ ಜಿಲ್ಲೆಯಲ್ಲಿನ ನೀರಾವರಿ ಯೋಜನೆಗಳ ಕುರಿತು ಈ ದಿನ.ಕಾಮ್ ಜತೆ ರಾಮದುರ್ಗ ತಾಲೂಕಿನ ರೈತ ಸಂಘಟನೆಯ ಮಲ್ಲಿಕಾರ್ಜುನ ರಾಮದುರ್ಗ ಮಾತನಾಡಿ, “ಸಿದ್ದರಾಮಯ್ಯನವರು ಮೊದಲ ಅವಧಿಯಲ್ಲಿ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳಿಂದ ರಾಮದುರ್ಗ ತಾಲೂಕಿನ 60 ಹಳ್ಳಿಗಳ ರೈತರ ಭೂಮಿಗೆ ನೀರು ಸಿಗಲಿದೆ, ಆದರೆ ಆ ಯೋಜನೆಗಳು ಪೂರ್ಣಗೊಂಡಿಲ್ಲ, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಹಾಗೂ ಯೋಜನೆಗಾಗಿ ಭೂಮಿ ನೀಡಿದ ಸುಮಾರು 90% ರಷ್ಟು ರೈತರಿಗೆ ಪರಿಹಾರ ನೀಡಿಲ್ಲ. ಕೂಡಲೇ ಅವರಿಗೆ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಸೋಮನಾಥ ಮಂದಿರ ಮರುನಿರ್ಮಾಣವನ್ನು ವಿರೋಧಿಸಿದ್ದರೇ ನೆಹರೂ? ಆ ಕಾಲಮಾನ ಯಾವುದು?

ದೇವರಾಜ ಅರಸು ಅವರು ರೂಪಿಸಿದ ಸಾಮಾಜಿಕ ನ್ಯಾಯದ ಆಡಳಿತ ಪರಂಪರೆಯನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಮುಂದುವರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೀರಾವರಿ, ಮೂಲಸೌಕರ್ಯ, ರಸ್ತೆ, ಕೃಷಿ, ಶಿಕ್ಷಣ ಮತ್ತು ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿ ಕೈಗೊಂಡ ಕ್ರಮಗಳ ಮೂಲಕ ಬೆಳಗಾವಿ ಜಿಲ್ಲೆಗೆ ಸ್ಪಷ್ಟವಾದ ಆಡಳಿತಾತ್ಮಕ ಹಾಗೂ ಆರ್ಥಿಕ ದಿಕ್ಕು ನೀಡಿರುವುದು ಖಚಿತವಾಗಿ ನಿರಾಕರಿಸಲಾಗದ ಸಂಗತಿ. ಬರಪೀಡಿತ ಪ್ರದೇಶಗಳಿಗೆ ನೀರು ಒದಗಿಸುವ ಏತ ನೀರಾವರಿ ಯೋಜನೆಗಳು, ರೈತಕೇಂದ್ರಿತ ಕೃಷಿ ಯೋಜನೆಗಳು, ನಗರ ಮತ್ತು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಶಿಕ್ಷಣ–ಕೈಗಾರಿಕಾ ಹೂಡಿಕೆಗಳು, ಜಿಲ್ಲೆಯ ರೈತ ಸಮುದಾಯಕ್ಕೆ ನಿರೀಕ್ಷೆಯ ಬೆಳಕಾಗಿವೆ.

ಆದರೆ, ಈ ಸಾಧನೆಗಳ ನಡುವೆಯೂ ಜಿಲ್ಲಾ ವಿಭಜನೆ, ಹೊಸ ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆ, ಉದ್ಯೋಗ ಸೃಷ್ಟಿಗೆ ನೆರವಾಗುವ ಕೈಗಾರಿಕಾ ಕ್ಲಸ್ಟರ್‌ಗಳ ಸಂಪೂರ್ಣ ಜಾರಿಗೊಳಿಸುವಿಕೆ ಸೇರಿದಂತೆ ಹಲವು ಮಹತ್ವದ ಯೋಜನೆಗಳು ಇನ್ನೂ ಪೂರ್ಣತೆಯ ಹಂತ ತಲುಪಬೇಕಿದೆ ಎಂಬ ಅಭಿಪ್ರಾಯ ಜಿಲ್ಲೆಯ ಜನರಲ್ಲಿ ಇದೆ. ಈಗಾಗಲೇ ಹಾಕಿರುವ ಅಡಿಪಾಯದ ಮೇಲೆ ನಿಂತು, ಉಳಿದಿರುವ ಈ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಆಡಳಿತ ಅವಧಿಯಲ್ಲಿಯೇ ಪೂರ್ಣಗೊಳಿಸಿದರೆ, ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಕೇವಲ ಯೋಜನೆಗಳ ಪಟ್ಟಿಯಲ್ಲದೆ, ಸ್ಥಿರ ಹಾಗೂ ಸಮಗ್ರ ಪ್ರಾದೇಶಿಕ ಬೆಳವಣಿಗೆಯ ಮಾದರಿಯಾಗಿ ರೂಪುಗೊಳ್ಳಲಿದೆ ಎಂಬುದು ಜನರ ಆಶಯವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...