ಬೀದರ್‌ | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ : ಶಾಸಕ ಯತ್ನಾಳ್

Date:

ಸಚಿವ ಈಶ್ವರ ಖಂಡ್ರೆಯವರು ಬಿಜೆಪಿಯ ಕೆಲ ನಾಯಕರ ಜತೆಗೆ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಬಿಜೆಪಿಯ ನಿಷ್ಠಾವಂತರನ್ನು ತುಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಬಸವನಗೌಡ
ಪಾಟೀಲ್ ಯತ್ನಾಳ ಆರೋಪಿಸಿದರು.

ಭಾಲ್ಕಿ ಪಟ್ಟಣದ ಶಿವಾಜಿ ವೃತ್ತದಲ್ಲಿ ತಾಲೂಕು ಬಿಜೆಪಿ ವತಿಯಿಂದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಭಾನುವಾರ ಆಯೋಜಿಸಿದ್ದ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿ, “ಖಂಡ್ರೆ ಅವರು ಲಿಂಗಾಯತರ ಹೆಸರಿನಲ್ಲಿ ರಾಜಕೀಯ ಮಾಡಿದ್ದಾರೆ ಹೊರತು ಲಿಂಗಾಯತ ಸಮುದಾಯಕ್ಕೆ ಏನನ್ನೂ ಕೊಡುಗೆ ನೀಡಿಲ್ಲ” ಎಂದರು.

“ಡಾ.ಚನ್ನಬಸವ ಪಟ್ಟದ್ದೇವರು ಕಟ್ಟಿದ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿರುವ ಖಂಡ್ರೆ ಅವರಿಗೆ ಒಳ್ಳೆದಾಗುವುದಿಲ್ಲ. ದೇಶದ ಸುಭದ್ರತೆ ಮತ್ತು ರಕ್ಷಣೆಗೆ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಜಿಲ್ಲೆಯಲ್ಲಿ ಸಂಸದ ಖೂಬಾ ಅವರು ಅಭಿವೃದ್ಧಿಪರ ಕೆಲಸ ಮಾಡಿದ್ದು ಅವರನ್ನು ಹ್ಯಾಟ್ರಿಕ್ ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಮಾತನಾಡಿ, “ತಂದೆಯಂತೆ ಪುತ್ರ ಕೂಡ ಸುಳ್ಳು ಹೇಳುವುದರಲ್ಲಿ ನಿಸ್ಸಿಮರಾಗಿದ್ದಾರೆ. ಹತ್ತು ವರ್ಷಗಳ ಅವಧಿಯಲ್ಲಿ ಸಾಧನೆ ಶೂನ್ಯ ಎಂದು ಹೇಳುವ ಖಂಡ್ರೆ ಅವರಿಗೆ ಭಾಲ್ಕಿ-ಬೀದರ್ ರಸ್ತೆ, ವಿಮಾನ ನಿಲ್ದಾಣ, ಸೈನಿಕ್ ಶಾಲೆ, ಸಿಪೆಟ್, ಪಾಸ್‌ಪೋರ್ಟ್ ಕೇಂದ್ರ ಸೇರಿ ಹಲವು ಅಭಿವೃದ್ಧಿ ಕೆಲಸ ಕಾಣುತ್ತಿಲ್ಲವೇ” ಎಂದು ಪ್ರಶ್ನಿಸಿದರು.

ನಾರಂಜಾ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಮಾತನಾಡಿ, “ಈ ಬಾರಿಯ ಲೋಕಸಭಾ ಚುನಾವಣೆ ಖಂಡ್ರೆ-ಖೂಬಾ, ಬಿಜೆಪಿ-ಕಾಂಗ್ರೆಸ್ ಚುನಾವಣೆಯಲ್ಲಿ ಇದು ದೇಶದ ಭವಿಷ್ಯ ರೂಪಿಸುವ ಚುನಾವಣೆ ಮತದಾರರು ಯೋಚಿಸಿ ಮತ ಚಲಾಯಿಸಬೇಕು” ಎಂದರು.

ಮಾಜಿ ಶಾಸಕ ಪ್ರಕಾಶ ಖಂಡ್ರೆ , ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಶಿವರಾಜ ಗಂದಗೆ, ಪ್ರಮುಖರಾದ ಡಿಗಂಬರರಾವ ಮಾನಕಾರಿ, ಅನಂತ ಬಿರಾದಾರ, ಗುರುನಾಥ ಜ್ಯಾಂತಿಕರ್ ಸೇರಿ ಹಲವರು ಮಾತನಾಡಿದರು.

ರಾಜ್ಯ ಜೆಡಿಎಸ್‌ನ ಪ್ರಧಾನ ಕಾರ್ಯದರ್ಶಿ ಸಿದ್ರಾಮಪ್ಪ ವಂಕೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ್, ಜಿಪಂ ಮಾಜಿ ಅಧ್ಯಕ್ಷ ಬಾಬುರಾವ ಕಾರಬಾರಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಶಿವಾನಂದ ಮಂಠಾಳಕರ್, ತಾಲೂಕು ಬಿಜೆಪಿ ಅಧ್ಯಕ್ಷ ವೀರಣ್ಣ ಕಾರಬಾರಿ, ಮಾಜಿ ತಾಲೂಕು ಅಧ್ಯಕ್ಷರಾದ ಪಂಡಿತ ಶಿರೋಳೆ, ಗೋವಿಂದರಾವ ಬಿರಾದಾರ್,  ಜೆಡಿಎಸ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ನೇಳಗೆ, ಪ್ರಮುಖರಾದ ಚನ್ನಬಸವ ಬಳತೆ, ಸೇರಿದಂತೆ ಹಲವರು ಇದ್ದರು. ಸಂದೀಪ ತೇಲಗಾಂವಕರ್ ನಿರೂಪಿಸಿದರು.

ಲಿಂಗಾಯತರಿಗೆ ಖಂಡ್ರೆ ಕೊಡುಗೆ ಏನಿದೆ?

ಸಚಿವ ಈಶ್ವರ ಖಂಡ್ರೆ ಅವರು ಲಿಂಗಾಯತ ನಾಯಕ ಮಾಡಿದರು ಯಾರು? ಲಿಂಗಾಯತ ಸಮುದಾಯಕ್ಕೆ ಅವರ ಕೊಡುಗೆ ಏನಿದೆ? ಮೀಸಲಾತಿಗಾಗಿ ಎಂದಾದರೂ ಹೋರಾಟ ಮಾಡಿದ್ದಾರಾ? ಖಂಡ್ರೆ – ಶ್ಯಾಮನೂರು ಶಿವಶಂಕರೆಪ್ಪ ಅವರು ಅಖಿಲ ಭಾರತ ವೀರಶೈವ ಮಹಾಸಭಾ ಹಿಡಿದುಕೊಂಡು ಕುಂತಿದ್ದಾರೆ ಅಷ್ಟೇ, ಇವರಿಂದ ಯಾವ ಲಿಂಗಾಯತರಿಗೆ ಅನುಕೂಲ ಆಗಿದೆ ಎಂಬುದು ದಾಖಲೆ ತೋರಿಸಲಿ ಎಂದು ಶಾಸಕ ಯತ್ನಾಳ ಪ್ರಶ್ನಿಸಿದರು.

ಬೀದರ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಲಿಂಗಾಯತ ನಾಯಕರೆಂದು ಮಂತ್ರಿ ಆಗ್ತೀರಿ, ಮಜಾ ಮಾಡ್ತೀರಿ, ನಿಮ್ಮ ಮಕ್ಕಳು, ಮೊಮ್ಮಕ್ಕಳೇ ಶಾಸಕ, ಮಂತ್ರಿ ಆಗ್ಬೇಕು. ಲಿಂಗಾಯತ ನಾಯಕರೆಂದು ಹೇಳಿಕೊಳ್ಳಲು ಈಶ್ವರ ಖಂಡ್ರೆಯವರಿಗೆ ಯಾವುದೇ ನೈತಿಕ ಹಕ್ಕಿಲ್ಲ” ಎಂದರು.

ದೇಶದಲ್ಲಿ ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ ಎಂದು ಶಾಸಕ ಯತ್ನಾಳ ಹೇಳಿಕೆ ನೀಡಿದ್ದಾರೆ.

ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆ ಹೆಣ್ಣು ಮಕ್ಕಳನ್ನೂ ಹೊತ್ತುಕೊಂಡು ಹೋಗುತ್ತಾರೆ. ಕಲಬುರಗಿಯಲ್ಲಿ ಹಿಂದೂ ಹುಡುಗಿಯನ್ನು ಎತ್ತಿಕೊಂಡು ಹೋಗಿದ್ದಾರೆ. ಆ ಪ್ರಕರಣವನ್ನ ಸಚಿವ ಪ್ರಿಯಾಂಕ್‌ ಖರ್ಗೆ ಮುಚ್ಚಿ ಹಾಕೋಕೆ ನೋಡ್ತಿದ್ದಾರೆ. ಸಾಬರದ್ದೇ ಕಾಂಗ್ರೆಸ್, ರಾಜ್ಯದಲ್ಲಿ ಪಾಕಿಸ್ತಾನ ಸರ್ಕಾರ ಇದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ ಪೆನ್‌ಡ್ರೈವ್ ಪ್ರಕರಣ | ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ಜೆಡಿಎಸ್​ ಶಾಸಕ ಆಗ್ರಹ

“ಹಿಂದೂಗಳ ಸಾವು ಆದಾಗ ಕಾಂಗ್ರೆಸ್‌ನವರು ಅವರ ಮನೆಗೆ ತೆರಳಿ ಸಮಾಧಾನ ಹೇಳುವುದಿಲ್ಲ. ಅದೇ ಒಬ್ಬ ಮುಸ್ಲಿಂ ಸತ್ತರೇ ರಾಹುಲ್‌ ಗಾಂಧಿ ಮನೆಗೆ ಹೋಗುತ್ತಿದ್ದರು” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...