ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ: ವಿಜಯೇಂದ್ರ ಆಯ್ಕೆ ಬಗ್ಗೆ ಸಿ ಟಿ ರವಿ

Date:

ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿ ಬಿ ಎಸ್ ವೈ ಪುತ್ರ ವಿಜಯೇಂದ್ರ ಆಯ್ಕೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಸಿ ಟಿ ರವಿ, ಪಕ್ಷ ನೇಮಕ ಮಾಡಿದೆ, ‘ಇನ್ನೇನಿದ್ರೂ ಅವರು ಪಕ್ಷ ಕಟ್ಟಿ ಬೆಳೆಸುವ ಕೆಲಸ ಮಾಡಬೇಕಿದೆ. ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತದೆ’ ಎನ್ನುವ ಮೂಲಕ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿ ಪ್ರವಾಸ ಮುಗಿಸಿ ಶುಕ್ರವಾರ ತಡರಾತ್ರಿ ಸಿ ಟಿ ರವಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಿಕ್ಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ಬದಲಾಗದೆ ಇರೋದು ಕಾರ್ಯಕರ್ತ ಅನ್ನೋದು. ನಾನೊಬ್ಬ ಈಗ ಸಾಮಾನ್ಯ ಕಾರ್ಯಕರ್ತ ಅಷ್ಟೆ. 35 ವರ್ಷಗಳ ರಾಜಕೀಯದಲ್ಲಿ ಈಗಾಗಲೇ ಬಹಳ‌ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದ್ರು ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತದೆ. ಪಕ್ಷ ನೇಮಕ ಮಾಡಿದೆ.‌ ವೈಚಾರಿಕ ಸ್ಪಷ್ಟತೆಯ ಜೊತೆಗೆ ವಿಜಯೇಂದ್ರ ಪಕ್ಷ ಕಟ್ಟುವ ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ. ಯಶಸ್ವಿಯಾಗಲಿ. ಅಸಮಾಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ. ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೆ ಜವಾಬ್ದಾರಿ ನಿರ್ವಹಿಸಿದ್ದೇನೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಹೆಸರು ಕೊನೆಯವರೆಗೂ ಕೇಳಿ ಬಂದಿತ್ತು. ಆದರೆ ನೇಮಕವಾಗದ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳುತ್ತಿದ್ದಂತೆಯೇ, ‘ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು’ ಎಂದು ಉತ್ತರಿಸುವ ಮೂಲಕ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿ, ಸಿ ಟಿ ರವಿ ತೆರಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...