ಕೇಂದ್ರ ಅನುಮತಿ ನೀಡಿದರೆ ಏಳನೇ ಗ್ಯಾರಂಟಿ ರಾಜ್ಯಕ್ಕೆ ನೀಡುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್

Date:

ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು.

ಹಾವೇರಿಯಲ್ಲಿ ಶನಿವಾರ ನಡೆದ ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ನಾನು ಚುನಾವಣೆಗೆ ಬಂದಾಗ ಒಂದು ಮಾತು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಈ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಕಾರಣಕ್ಕೆ ಪಂಚ ಗ್ಯಾರಂಟಿ ನೀಡಿ, ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ ನೀಡುತ್ತಿದ್ದೇವೆ. ಭೂ ದಾಖಲೆ ಇಲ್ಲದ 1,11,111 ಜನರಿಗೆ ಪೋಡಿ ಮಾಡಿ, ಖಾತಾ ಮಾಡಿ ದಾಖಲೆ ನೀಡಲಾಗಿದೆ. ಆಮೂಲಕ ನಿಮ್ಮ ಮುಂದಿನ ಪೀಳಿಗೆಗೆ ಆಸ್ತಿ ದಾಖಲೆ ಕೊಟ್ಟ ಏಕೈಕ ಸರ್ಕಾರ ಈ ಕಾಂಗ್ರೆಸ್ ಸರ್ಕಾರ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

“ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ 35-40 ಲಕ್ಷ ಪರಿಹಾರ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಕಾವೇರಿ ನದಿಗೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ನಮ್ಮ ಮಾರ್ಗದರ್ಶನದಲ್ಲಿ ಕಾನೂನು ತಜ್ಞರ ತಂಡ ವಾದ ಮಂಡಿಸಿ ಸುಪ್ರೀಂ ಕೋರ್ಟ್ ನಲ್ಲಿ ಈ ಯೋಜನೆ ಪರವಾಗಿ ತೀರ್ಪು ಬಂದಿದೆ. ಆಮೂಲಕ ತಮಿಳುನಾಡು ಹಾಕಿದ್ದ ಆಕ್ಷೇಪಣಾ ಅರ್ಜಿ ವಜಾಗೊಳಿಸಲಾಗಿದೆ. ಈಗ ಈ ಯೋಜನೆಗೆ ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ಮಹದಾಯಿ ವಿಚಾರದಲ್ಲಿ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡಿಲ್ಲ. ಇನ್ನು ಕುಡಿಯುವ ನೀರು ಪೂರೈಕೆ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ 3 ತಿಂಗಳಲ್ಲಿ ಅನುಮತಿ ಕೊಟ್ಟರೆ ಸಾಕು. ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ಹರಿಸುವ ಕೆಲಸವನ್ನು ಈ ಸರ್ಕಾರ ಹಾಗೂ ಡಿ.ಕೆ. ಶಿವಕುಮಾರ್ ಮಾಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...