ದೇಶದ ಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿ ಉದ್ಘಾಟನೆ

Date:

ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಹೇಳಿದರು.

ದೊಡ್ಡಬಳ್ಳಾಪುರದ ಸಮೀಪ ಅಮೆರಿಕಾ ಮೂಲದ ಓಮಿಯಮ್ ಕಂಪನಿಯು ಸ್ಥಾಪಿಸಿರುವ ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

“ಓಮಿಯಂ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿ ಸದ್ಯಕ್ಕೆ ವರ್ಷಕ್ಕೆ 500 ಮೆಗಾವ್ಯಾಟ್ ಗ್ರೀನ್ ಹೈಡ್ರೋಜನ್ ಉತ್ಪಾದನೆ ಅಗಲಿದ್ದು, ಹಂತಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು. ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು ಎಂದು” ವಿವರಿಸಿದರು.

“ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ” ಎಂದರು.

“ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಪರಿಸರಸ್ನೇಹಿ ಹಾಗೂ ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆ ಭರದಿಂದ ನಡೆಯುತ್ತಿದೆ. ಇದನ್ನು ನಾವು ಪ್ರಮುಖ ವಲಯವಾಗಿ ಗುರುತಿಸಿದ್ದೇವೆ” ಎಂದು ತಿಳಿಸಿದರು.

“ರಚನಾತ್ಮಕ ಉಪಕ್ರಮಗಳ ಫಲವಾಗಿ ರಾಜ್ಯವು 2016ರಿಂದಲೂ ಹೂಡಿಕೆ ಆಕರ್ಷಣೆಯಲ್ಲಿ ಪ್ರಥಮ ಸ್ಥಾನದಲ್ಲಿದೆ” ಎಂದು ಸಚಿವ ಪಾಟೀಲ್‌ ಅವರು ವಿವರಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ, ” ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ ಭಾರತವು ಆದ್ಯತೆ ನೀಡಿದ್ದು, ಈ ಕ್ಷೇತ್ರದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿದೆ. ಟಾಟಾ ಸಮೂಹ ಮತ್ತು ಎನ್ಟಿಪಿಸಿ ಕೂಡ ಇದರ ಲಾಭವನ್ನು ಮನಗಂಡಿವೆ” ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಧೀರಜ್ ಮುನಿರಾಜು, ಶಾಸಕರೂ ಆದ ಕ್ರೆಡೆಲ್ ಅಧ್ಯಕ್ಷ ರಾಜೇಗೌಡ, ಕಂಪನಿಯ ಉನ್ನತ ಅಧಿಕಾರಿಗಳಾದ ಅಮಿ ಬಾಲಟೈನ್, ಅಶ್ವಿನ್ ವರ್ಮಾ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...