ವಿಧಾನಸಭೆ ಜಂಟಿ ಅಧಿವೇಶನ | ಆಯ್ದ ಭಾಗ ಮಾತ್ರ ಓದುತ್ತೇನೆಂದ ರಾಜ್ಯಪಾಲರು, ಒಂದಕ್ಷರವನ್ನೂ ಬದಲಿಸಲ್ಲ ಎಂದ ಸರ್ಕಾರ!

Date:

ವಿಬಿ-ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಚರ್ಚಿಸುವ ಉದ್ದೇಶದಿಂದ ನಾಳೆ (ಜನವರಿ 22) ನಡೆಯಲಿರುವ ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಜಂಟಿ ಅಧಿವೇಶನದಲ್ಲಿ ಆಯ್ದ ಭಾಗವನ್ನು ಮಾತ್ರ ಓದುತ್ತೇನೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ತಿಳಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಒಂದಕ್ಷರವನ್ನು ಬದಲಿಸಲ್ಲ ಎಂದು ಖಡಾಖಂಡಿತವಾಗಿ ಉತ್ತರ ನೀಡಿರುವುದಾಗಿ ಈದಿನ. ಕಾಮ್‌ಗೆ ಸರ್ಕಾರದ ಮೂಲಗಳು ತಿಳಿಸಿವೆ.

ತಮಿಳುನಾಡಿನಲ್ಲಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ.

ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ ಹಿನ್ನೆಲೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಇಂದು ಸಂಜೆ 5 :45ಕ್ಕೆ ಲೋಕಭವನಕ್ಕೆ ಭೇಟಿ ನೀಡಿ, ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರ ಕಳಿಸಿರುವ ಭಾಷಣದ ಪ್ರತಿಯಲ್ಲಿ ಕೆಲವು ಪ್ಯಾರಗಳನ್ನು ಕಡಿತಗೊಳಿಸಿ ಓದುವುದಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೆ ರಾಜ್ಯಪಾಲರ ಕಚೇರಿ ತಿಳಿಸಿದೆ ಎನ್ನಲಾಗಿದೆ. ಹಲವು ಭಾಗಗಳನ್ನು ಕೈಬಿಟ್ಟು, ರಾಜ್ಯಪಾಲರು ಕಳಿಸಿರುವ ಭಾಷಣದ ಪ್ರತಿಯನ್ನು ರಾಜ್ಯ ಸರ್ಕಾರ ಒಪ್ಪಿಲ್ಲ.

ನಾಳೆಯಿಂದ ಜ.31ರವರೆಗೆ ವಿಧಾನಸಭೆ ಜಂಟಿ ಅಧಿವೇಶನ ನಡೆಯಲಿದ್ದು ರಾಜ್ಯಪಾಲರ ನಡೆ ಬಹಳ ಕುತೂಹಲ ಮೂಡಿಸಿದೆ. ಕೇಂದ್ರವು MahatmaGandhi NREGA ಹೆಸರನ್ನು ‘ರದ್ದುಗೊಳಿಸುವುದು’ ಸೇರಿದಂತೆ ಹಲವಾರು ವಿಷಯಗಳ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ-ಜೆಡಿ (ಎಸ್) ಒಕ್ಕೂಟದ ನಡುವೆ ಘರ್ಷಣೆ ನಿರೀಕ್ಷಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪಲ್ಲ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಯನ್ನು ರದ್ದುಗೊಳಿಸಿದ್ದ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯಾಗಿ ಬದಲಾಯಿಸಿದ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಿರ್ಣಯ ಅಂಗೀಕರಿಸಿತ್ತು. ಎಂಜಿಎನ್‌ಆರ್‌ಇಜಿಎ ಬದಲಿಗೆ ಇತ್ತೀಚೆಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಅಂಗೀಕರಿಸದಿರಲು ಮತ್ತು ಅದರ ವಿರುದ್ಧ ಕಾನೂನು ಹೋರಾಟವನ್ನು ಕೈಗೊಳ್ಳಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಹೀಗಾಗಿ ಕೇಂದ್ರಕ್ಕೆ ಮುಜುಗರ ತರುವ ಅಂಶಗಳು ರಾಜ್ಯಪಾಲರ ಭಾಷಣದಲ್ಲಿರುವುದರಿಂದ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡದಿರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವೇಳೆ ಜಂಟಿ ಅಧಿವೇಶನಕ್ಕೆ ರಾಜ್ಯಪಾಲರು ಬರದಿದ್ದರೆ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಆರಂಭಿಸಬೇಕು ಎಂಬ ನಿಯಮವಿದೆ. ಮಂಗಳವಾರ ತಮಿಳುನಾಡಿನ ರಾಜ್ಯಪಾಲ ರವಿ ಅವರು ಅಲ್ಲಿನ ಡಿ.ಎಂ.ಕೆ. ಸರ್ಕಾರದ ಭಾಷಣವನ್ನು ಓದಲು ನಿರಾಕರಿಸಿ ಸತತ ಮೂರನೆಯ ವರ್ಷ ಸಭಾತ್ಯಾಗ ಮಾಡಿದರು. ಅವರು ಓದಬೇಕಿದ್ದ ಭಾಷಣವನ್ನು ತಮಿಳುನಾಡು ವಿಧಾನಸಭಾಧ್ಯಕ್ಷರು ಓದಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...