ಬೆಂಗಳೂರು-ವಿಜಯಪುರ ಮಾರ್ಗದಲ್ಲಿ ‘ಕಲ್ಯಾಣ ರಥ’ ಐಷಾರಾಮಿ ಸ್ಲೀಪರ್ ಬಸ್ ಸೇವೆ ಆರಂಭ

Date:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬೆಂಗಳೂರು ಮತ್ತು ವಿಜಯಪುರ ಮಾರ್ಗದಲ್ಲಿ ಮೊದಲ ಬಾರಿಗೆ ‘ಕಲ್ಯಾಣ ರಥ’ ಹೆಸರಿನ ಐಷಾರಾಮಿ ಸ್ಲೀಪರ್ ಬಸ್ ಸೇವೆ ಆರಂಭಿಸಿದೆ.

ಈ ಐಷಾರಾಮಿ ಬಸ್‌ ಸೇವೆಗೆ ಇತ್ತೀಚೆಗಷ್ಟೇ ಸಿಂಧನೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದ್ದರು. ಸಿಂಧನೂರು, ಗಂಗಾವತಿ, ಹೊಸಪೇಟೆ ಮೂಲಕ ಬೆಂಗಳೂರಿಗೆ ಆರಾಮದಾಯಕ ಪ್ರಯಾಣಕ್ಕೆ ₹1,250 ಪ್ರಯಾಣ ದರವನ್ನು ನಿಗದಿಪಡಿಸಲಾಗಿತ್ತು. ಇದೀಗ, ‘ಕಲ್ಯಾಣ ರಥ’ ಐಷರಾಮಿ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಬಸ್ ಸೇವೆಯನ್ನು ಕೆಕೆಆರ್‌ಟಿಸಿಯ ವಿಜಯಪುರ ವಿಭಾಗ ಆರಂಭಿಸಿದೆ. ಪ್ರಯಾಣಿಕರಿಂದ ಈ ಬಸ್‌ಗೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಸ್‌ ವೇಳಾಪಟ್ಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ-ಬೆಂಗಳೂರು ನಡುವಿನ ‘ಕಲ್ಯಾಣ ರಥ’ ಐಷರಾಮಿ ಬಸ್ ರಾತ್ರಿ 9.45ಕ್ಕೆ ವಿಜಯಪುರದಿಂದ ಹೊರಡಲಿದೆ. ಬೆಂಗಳೂರು ನಗರವನ್ನು ಬೆಳಗ್ಗೆ 6.45ಕ್ಕೆ ತಲುಪಲಿದೆ. ಬೆಂಗಳೂರು ನಗರದಿಂದ ರಾತ್ರಿ 10 ಗಂಟೆಗೆ ಹೊರಡಲಿದೆ. ವಿಜಯಪುರಕ್ಕೆ ಬೆಳಗ್ಗೆ 7 ಗಂಟೆಗೆ ತಲುಪಲಿದೆ. ಈ ಬಸ್‌ಗೆ ಪ್ರಯಾಣ ದರವನ್ನು ₹1,417 ನಿಗದಿ ಮಾಡಲಾಗಿದೆ. ಕೆಎಸ್ಆರ್‌ಟಿಸಿ ವೆಬ್ ಸೈಟ್ ಮೂಲಕ ಟಿಕೆಟ್ ಬುಕ್ ಮಾಡಬಹುದು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಳೆನೀರು ಮರುಬಳಕೆಗಾಗಿ ಇಂಗುಗುಂಡಿ ನಿರ್ಮಾಣಕ್ಕೆ ಮುಂದಾದ ಬಿಬಿಎಂಪಿ

ಬಸ್‌ನಲ್ಲಿ ಏನೇನಿದೆ?

ಕಲ್ಯಾಣ ರಥ ಬ್ಯಾಂಡ್‌ನ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಕ್ಲಾಸ್ ಬಸ್ 40 ಆಸನಗಳು, ಬಿಎಸ್-6 ಇಂಜಿನ್ ಹೊಂದಿದೆ. ಬಸ್ಸಿಗೆ ವಿಶಿಷ್ಟ ಸಸ್ಪೆನ್ಸನ್‍ಗಳನ್ನು ಅಳವಡಿಸಲಾಗಿದ್ದು, ಸ್ವಯಂ ಚಾಲಿತ ಬಾಗಿಲು ತೆರೆಯುವ ವ್ಯವಸ್ಥೆ, ಬೆಂಕಿ ನಂದಿಸುವ ಉಪಕರಣಗಳ ವ್ಯವಸ್ಥೆ, ವಾಹನದ ಟ್ರ್ಯಾಕಿಂಗ್ ಗುರುತು ವ್ಯವಸ್ಥೆ, ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಬೆಡ್ ಲೈಟ್, ಲ್ಯಾಪ್ ಟಾಪ್ ಬ್ಯಾಗ್ ಇಡುವ ವ್ಯವಸ್ಥೆ ಬಸ್‌ನಲ್ಲಿ ಇದೆ.

‘ಕಲ್ಯಾಣ ರಥ’ ವೋಲ್ವೋ ಬಸ್ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪರಿಚಯಿಸಿದ ಐಷಾರಾಮಿ ಬಸ್ ಸೇವೆಯಾಗಿದೆ. ಸಿಂಧನೂರು-ಬೆಂಗಳೂರು ಸೇರಿದಂತೆ ನಾನಾ ಮಾರ್ಗದಲ್ಲಿ ಈ ಮಾರ್ಗದ ಬಸ್‌ ಈಗಾಗಲೇ ಸಂಚಾರ ನಡೆಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...