ತಿರುಪತಿ ಲಡ್ಡು ಪ್ರಸಾದ ಬಳಸದಿರಲು ಕರ್ನಾಟಕದ ಅರ್ಚಕರ ಸಂಘ ನಿರ್ಧಾರ

Date:

ತಿರುಪತಿ ದೇಗುಲದ ಲಡ್ಡು ಪ್ರಸಾದ ಬಳಸದಂತೆ ಕರ್ನಾಟಕ ಅರ್ಚಕರು ನಿರ್ಧರಿಸಿದ್ದಾರೆ. ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಇಲ್ಲ ಎಂಬ ಸ್ಪಷ್ಟತೆ ಸಿಗಬೇಕು. ಅಲ್ಲಿಯವರೆಗೂ ಲಾಡು ಪ್ರಸಾದ ಬಳಸದಿರಲು ಅಖಿಲ ಕರ್ನಾಟಕ ಅರ್ಚಕರ ಸಂಘ ತೀರ್ಮಾನಿಸಿದೆ.

ರಾಜ್ಯದ ಎ ಹಾಗೂ ಬಿ ದೇಗುಲಗಳಲ್ಲಿ ನಡೆಯುವ ಕಲ್ಯಾಣೋತ್ಸವಗಳಲ್ಲಿ, ಮದುವೆ, ಗೃಹಪ್ರವೇಶ ಮತ್ತು ಉಪನಯನ ಕಾರ್ಯಕ್ರಮಗಳಲ್ಲಿ ತಿರುಪತಿ ಲಡ್ಡು ಪ್ರಸಾದ ಬಳಕೆ ಮಾಡಲಾಗುತ್ತಿತ್ತು. ಆದರೆ, ಇದೀಗ ಲಾಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಲಡ್ಡು ಪ್ರಸಾದವನ್ನು ಸಂಪೂರ್ಣವಾಗಿ ಬಳಸದಂತೆ ಅಖಿಲ ಕರ್ನಾಟಕ ಅರ್ಚಕರ ಸಂಘ ನಿರ್ಧರಿಸಿದೆ.

ರಾಜ್ಯದಲ್ಲಿ ಉತ್ಪಾದನೆ ಮತ್ತು ಮಾರಾಟ ಆಗುತ್ತಿರುವ ತುಪ್ಪವನ್ನು ತಪಾಸಣೆ ಮಾಡುವಂತೆ ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ಈಗಾಗಲೇ ತುಪ್ಪದ ಮಾದರಿ ಸಂಗ್ರಹ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ತನಿಖೆ ತೆವಳುತ್ತಿರುವುದೇಕೆ?

ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ತುಪ್ಪ ಆಮದು ಆಗುತ್ತದೆ. ಪ್ರಸಾದದ ಪರಿಶೀಲನೆ ನಾವು ಮಾಡುತ್ತಿಲ್ಲ. ಬೇರೆ ಪದಾರ್ಥಗಳಲ್ಲಿ ಕಲಬೆರಕೆ ಆಗುವ ಸಾಧ್ಯತೆ ಕಡಿಮೆ ಇದೆ. ಆದರೆ ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಂಶ ಇತ್ತು ಅಂತ ಹೇಳಿರುವುದು ಆತಂಕಕಾರಿಯಾದ ವಿಚಾರ. ಒಬ್ಬ ಮುಖ್ಯಮಂತ್ರಿ ಹೇಳಿದ ಮೇಲೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ದೇವರ ಬಗ್ಗೆ ಶ್ರದ್ಧೆ ಇರುವವರಿಗೆ ಈ ವಿಚಾರ ಬಹಳ ಆಘಾತಕಾರಿಯಾಗಿದೆ. ಹೀಗಾಗಿ ಪರಿಶೀಲನೆ ಮಾಡಿ ಅಂತ ಹೇಳಿದ್ದೇವೆ. ವರದಿಯಲ್ಲಿ ಏನು ಬರುತ್ತೆ ಎಂದು ತಿಳಿದುಕೊಳ್ಳೋಣ. ಯಾಕೆಂದರೆ ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾಗಿದೆ. ತಿರುಪತಿ ಲಡ್ಡು ಪ್ರಸಾದದಲ್ಲಿ ಈ ರೀತಿ ಇದೆ ಅಂತ ಆದಾಗ ಯಾರನ್ನು ನಂಬಬೇಕು ಎಂಬ ಪ್ರಶ್ನೆ ಎದುರಾಗಿದೆ. ಮುಂದಿನ ದಿನಗಳಲ್ಲಿ ಪ್ರಸಾದವನ್ನು ಸ್ವೀಕರಿಸದೆ ಇರುವಂತ ಪರಿಸ್ಥಿತಿ ಬರಬಾರದೆಂದು ಪರಿಶೀಲನೆ ಮಾಡಿಸುತ್ತಿದ್ದೇವೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...