ಸರಕಾರಿ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯ ತಿಂಡಿ ಬಳಸಲು ರಾಜ್ಯ ಸರ್ಕಾರ ಆದೇಶ

Date:

ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಆಧಾರಿತ ತಿಂಡಿ-ತಿನಿಸು ಮತ್ತು ಪಾನೀಯಗಳನ್ನು ಬಳಸುವಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಬಳಸಬಹುದಾದ ಪಟ್ಟಿಯನ್ನೂ ಸಲಹೆ ರೂಪದಲ್ಲಿ ನೀಡಿದೆ.

ಸಾವಯವ ಮತ್ತು ಸಿರಿಧಾನ್ಯಗಳಿಗೆ ದೇಶಿ ಮತ್ತು ಜಾಗತಿಕ ಬೇಡಿಕೆ ಸೃಷ್ಟಿಸಲು ಹಾಗೂ ಜನರಿಗೆ ಪೌಷ್ಟಿಕಾಂಶದ ಆಹಾರದ ಬಗ್ಗೆ ಅರಿವು ಮೂಡಿಸಲು ಸರ್ಕಾರದ ಎಲ್ಲ ಇಲಾಖೆಗಳೂ ತಮ್ಮ ಅಧೀನ ಕಚೇರಿಗಳು, ನಿಗಮ, ಮಂಡಳಿಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಆಧಾರಿತ ತಿಂಡಿ-ತಿನಿಸು, ಪಾನೀಯಗಳನ್ನು ಬಳಸುವಂತೆ ಆದೇಶಿಸಿದೆ.

ಈಗಾಗಲೇ ಸಾವಯವ ಕೃಷಿ ನೀತಿ ಅನುಷ್ಠಾನದಲ್ಲಿದ್ದು, ಸಾಂಪ್ರದಾಯಿಕ ಮತ್ತು ಸಾವಯವ ಸಿರಿಧಾನ್ಯಗಳನ್ನು ಪ್ರಜ್ಞಾವಂತರ ಆಹಾರವನ್ನಾಗಿ ರಾಜ್ಯ ಸರಕಾರ ಉತ್ತೇಜಿಸುತ್ತಿದೆ. ಇದರ ಭಾಗವಾಗಿ ರೈತ ಸಿರಿ ಯೋಜನೆಯಡಿ ಬೆಳೆ ಸಮೀಕ್ಷೆ ಆಧರಿಸಿ ಸಿರಿಧಾನ್ಯ ಬೆಳೆದ ರೈತರಿಗೆ ಪ್ರತೀ ಹೆಕ್ಟೇರ್‌ಗೆ 10 ಸಾವಿರ ರೂ. ಗಳಂತೆ ಗರಿಷ್ಠ 2 ಹೆಕ್ಟೇರ್‌ವರೆಗೆ ಪ್ರೋತ್ಸಾಹ ಧನವನ್ನೂ ನೀಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮುಂದಿನ ಮೂರು ವರ್ಷದಲ್ಲಾದರೂ ಸರ್ಕಾರ ಜನಪರವಾಗಿರಬಹುದೇ?

ಜತೆಗೆ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್, ಬ್ರ್ಯಾಂಡಿಂಗ್ ಯಂತ್ರೋಪಕರಣಗಳಿಗೂ ಸಹಾಯಧನ ನೀಡುತ್ತಿದೆ. ಬೆಂಗಳೂರಿನ ಹೆಬ್ಬಾಳದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್ ಕೂಡ ಸ್ಥಾಪಿಸುತ್ತಿದ್ದು, ಇದೀಗ ಸರ್ಕಾರಿ ಸಭೆ, ಸಮಾರಂಭಗಳಲ್ಲೂ ಸಾವಯವ, ಸಿರಿಧಾನ್ಯ ಆಧಾರಿತ ತಿಂಡಿ-ತಿನಿಸುಗಳನ್ನು ಬಳಸುವಂತೆ ನಿರ್ದೇಶಿಸಿದೆ.

ಮಸಾಲಾ ಕುರುಕಲು ತಿಂಡಿ, ಸಿರಿಧಾನ್ಯಗಳ ಕುಕೀಸ್, ಸಿರಿಧಾನ್ಯಗಳ ಕ್ರಂಚ್ ಬಾರ್, ಸಿರಿಧಾನ್ಯಗಳ ಸಿಹಿ ತಿನಿಸು, ರಾಗಿ-ಬೆಲ್ಲದ ಬಿಸ್ಕತ್ತು ಸಿರಿಧಾನ್ಯಗಳ ಪಫ್, ಕುರುಕಲು ಮಿಕ್ಷ್ಮ‌ರ್, ಸಿರಿಧಾನ್ಯಗಳ ಮೊಳಕೆ ಬಳಸಿದ ಬಿಸ್ಕತ್ತು, ಬೂಂದಿ, ಜೋಳದ ಪಾಪ್ಸ್, ಎನರ್ಜಿ ಬಾರ್, ರಿಬ್ಬನ್ ಪಕೋಡ, ಕೋಡುಬಳೆ ಹಾಗೂ ಮುರುಕು ಬಳಸಲು ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...