ಕಲಬುರಗಿ | ಕೆಇಎ ಪರೀಕ್ಷೆ ಅಕ್ರಮ ಪ್ರಕರಣ : ಹಾಸ್ಟೆಲ್‌ ವಾರ್ಡನ್‌ ಬಂಧನ

Date:

ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ನೇಮಕಾತಿ ಪರೀಕ್ಷೆ ಬರೆಯಲು ಸಹಕರಿಸಿದ ಪ್ರಕರಣ ಸಂಬಂಧ ಪರೀಕ್ಷಾ ಮೇಲ್ವಿಚಾರಕರಿಗೆ ಹಣ ನೀಡಿದ ಆರೋಪದಡಿ ಚಿಕ್ಕಬಳ್ಳಾಪುರದ ಸಮಾಜ ಕಲ್ಯಾಣ ಇಲಾಖೆಯ ಚಿಕ್ಕಬಳ್ಳಾಪುರದ ವೃತ್ತಿಪರ ಹಾಸ್ಟೆಲ್ ವಾರ್ಡನ್ ಬಸವರಾಜ್ ಯಾಳವಾರ ಎಂಬಾತನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಕೆಇಎ ಅಕ್ರಮ ಪರೀಕ್ಷೆಯ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್‌ ಆಪ್ತನಾಗಿದ್ದ ಬಸವರಾಜ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಪರೀಕ್ಷಾ ಕೇಂದ್ರದ ಮುಖ್ಯಸ್ಥ ಹಾಗೂ ಕಸ್ಟೋಡಿಯನ್‌ಗೆ 40 ಲಕ್ಷ ರೂ. ಹಣ ನೀಡಿದ್ದ ಎಂಬುದು ಸಿಐಡಿ ತನಿಖೆಯಿಂದ ತಿಳಿದು ಬಂದಿದೆ.

ಬಸವರಾಜನ ವಿರುದ್ಧ ಕಲಬುರಗಿಯ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಈತ ತಲೆ ಮರೆಸಿಕೊಂಡಿದ್ದ. ಇದೀಗ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ಆರೋಪಿ ಬಸವರಾಜ್ ಬಂಧನಕ್ಕೆ ಪೊಲೀಸರು ಹಲವು ಕಡೆ ಹುಡುಕಾಟ ನಡೆಸಿದ್ದರು. ಕೊನೆಗೆ ಚಿಕ್ಕಬಳ್ಳಾಪುರದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ವಾರ್ಡನ್ ಆಗಿದ್ದಾನೆ ಎಂಬ ಸುಳಿವಿನ ಮೇಲೆ ಬಂಧಿಸಲಾಗಿದೆ. ಪ್ರಕರಣದಲ್ಲಿ ಬಸವರಾಜ್ 15ನೇ ಆರೋಪಿಯಾಗಿದ್ದಾನೆ. ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಿಯುವ ನೀರಿನ ಅಭಾವ : ಸಮರೋಪಾದಿಯಲ್ಲಿ ತಯಾರಿ ನಡೆಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಬೇಸಿಗೆಯು ಕಠಿಣ ಪರಿಸ್ಥಿತಿಯನ್ನು ತಂದೊಡ್ಡುವ ಮುನ್ನವೇ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...