ಕೊಪ್ಪ | ಇಬ್ಬರು ಬಾಲಕಿಯರ ಅನುಮಾನಾಸ್ಪದ ಸಾವು; ನ್ಯಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಭಾರೀ ಪ್ರತಿಭಟನೆ

Date:

ಚಿಕ್ಕಮಗಳೂರಿನ ಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂದು ವರ್ಷದ ಅಂತರದಲ್ಲಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಶಾಲಾ ಆಡಳಿತ ಮತ್ತು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಸರಣಿ ಸಾವುಗಳಿಗೆ ಸಮಗ್ರ ತನಿಖೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ನಿನ್ನೆ (ಜುಲೈ 7) ಕೊಪ್ಪದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಹಾಗೂ ಇತರ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಈ ಪ್ರತಿಭಟನೆಗೆ ಕರ್ನಾಟಕ ಜನಶಕ್ತಿಯು ಬೆಂಬಲವನ್ನು ವ್ಯಕ್ತಪಡಿಸಿತ್ತು.

ಸರಣಿ ಸಾವಿನ ಸುತ್ತ ಅನುಮಾನದ ಹುತ್ತ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿದ್ದ ಬೊಮ್ಲಾಪುರ ಗ್ರಾಮದ ಶಮಿತಾ (14) ಜೂನ್ 29ರ ಭಾನುವಾರ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ ಆಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ, ಸಣ್ಣ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ವಾದ ಸಾರ್ವಜನಿಕರಲ್ಲಿ ಭಾರೀ ಅನುಮಾನ ಮೂಡಿಸಿತ್ತು. ಈ ಅನುಮಾನಕ್ಕೆ ಮತ್ತಷ್ಟು ಬಲ ಸಿಕ್ಕಿದ್ದು, ಇದೇ ಶಾಲೆಯಲ್ಲಿ 2023ರ ಜುಲೈ 27ರಂದು ಕೊಪ್ಪ ತಾಲೂಕಿನ ನಾರ್ವೆ ಗ್ರಾಮದ ಅಮೂಲ್ಯ ಎಂಬ 14 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಗಮನಾರ್ಹವೆಂದರೆ, ಇಬ್ಬರೂ ಬಾಲಕಿಯರ ಶವ ಒಂದೇ ಜಾಗದಲ್ಲಿ ಪತ್ತೆಯಾಗಿವೆ.

ಶಾಸಕ ಟಿ.ಡಿ. ರಾಜೇಗೌಡ ಅವರು ಈ ದುರಂತಗಳ ಬಗ್ಗೆ ಸಾರ್ವಜನಿಕರಲ್ಲಿರುವ ಅನುಮಾನವನ್ನು ಹಂಚಿಕೊಂಡು, “ಬಾಲಕಿಯ ಸಾವಿನ ಸಮಗ್ರ ತನಿಖೆಯಾಗಬೇಕು ಎನ್ನುವ ಉದ್ದೇಶದಿಂದಲೇ ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿಸಲಾಗಿದೆ. ವರದಿ ಬಂದ ಕೂಡಲೇ ಪ್ರಾಮಾಣಿಕ ತನಿಖೆ ಮಾಡಿಸಲಾಗುವುದು. ವಸತಿ ಶಾಲೆಯಲ್ಲಿ ಎಲ್ಲ ಅಧಿಕಾರಿ, ಪೋಷಕರನ್ನು ಕರೆಯಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿಸಲಾಗುವುದು” ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ

ಪ್ರತಿಭಟನಾ ಮೆರವಣಿಗೆಯು ಬೆಳಿಗ್ಗೆ 10 ಗಂಟೆಗೆ ಪ್ರಾರಂಭಿಸಲಾಗಿತ್ತು. ಕೊಪ್ಪ ಟೌನ್‌ಹಾಲ್‌ನಿಂದ ಬಸ್ ನಿಲ್ದಾಣದವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು. ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದಲ್ಲಿ ಪೋಷಕರು ಮತ್ತು ಸಾರ್ವಜನಿಕರು ಶಾಲಾ ಆಡಳಿತ ಮಂಡಳಿ, ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೃತ ಬಾಲಕಿಯರ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವ ಹೋರಾಟಕ್ಕೆ ಸಾರ್ವಜನಿಕರು ಕೈಜೋಡಿಸುವಂತೆ ಪ್ರಗತಿಪರ ಸಂಘಟನೆಗಳ ಸಂಘಟಕರು ಮನವಿ ಮಾಡಿದ್ದರು.

ಪ್ರಮುಖ ಬೇಡಿಕೆಗಳು ಮತ್ತು ಎಚ್ಚರಿಕೆ

ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಹಾಗೂ ಹೋರಾಟಗಾರ ಕೆ ಎಲ್ ಅಶೋಕ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, “ಈ ಸಾವುಗಳು ಇಲ್ಲಿಗೆ ನಿಲ್ಲಬೇಕು. ಮಕ್ಕಳ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರಿರುವ ಶಾಲೆಯ ಪ್ರಿನ್ಸಿಪಾಲ್ ಹಾಗೂ ಸಿಬ್ಬಂದಿಗಳನ್ನು ಈ ಕೂಡಲೇ ಅಮಾನತುಗೊಳಿಸಿ, ಅವರ ವಿರುದ್ಧ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.“ಇಲ್ಲವಾದಲ್ಲಿ, ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS), ಮಹಿಳಾ ಮುನ್ನಡೆ, ಕರ್ನಾಟಕ ಶ್ರಮಿಕ ಶಕ್ತಿ ಸೇರಿದಂತೆ ಹಲವು ಸಂಘಟನೆಗಳು ಸೇರಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತೇವೆ” ಎಂದು ಕಠಿಣ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಮಾತನಾಡಿದ ವಕೀಲರಾದ ಸುಧೀರ್ ಕುಮಾರ್ ಮೂರೋಳ್ಳಿ, “ಎಲ್ಲ ಸಂಘಟನೆಗಳು ಸೇರಿ ಮಾಡುತ್ತಿರುವ ಈ ಹೋರಾಟ ತುಂಬಾ ಸ್ವಾಗತಾರ್ಹವಾದುದು. ಈ ಸಾವುಗಳಿಗೆ ಖಂಡಿತ ನ್ಯಾಯ ಸಿಗುತ್ತದೆ” ಎಂಬ ಭರವಸೆಯ ಮಾತುಗಳನ್ನು ಅಡಿದರು.

ಶಮಿತಾಳ ಚಿಕ್ಕಮ್ಮ ರಾಜೀವಿ ಅವರು ದುಃಖಿತರಾಗಿ, “ಯಾವುದೇ ಕಾರಣಕ್ಕೂ ಇದನ್ನು ಆತ್ಮಹತ್ಯೆ ಎಂದು ಕರೆಯಬೇಡಿ” ಎಂದು ಆಗ್ರಹಿಸಿ, “ಇಷ್ಟು ವರ್ಷ ಆದರೂ ಶಾಲೆಯ ಅವ್ಯವಸ್ಥೆಗಳನ್ನು ಯಾಕೆ ಸರಿಪಡಿಸಲಿಲ್ಲ? ಇಲಾಖೆ ಏನು ಮಾಡುತ್ತಿದೆ?” ಎಂದು ಪ್ರಶ್ನಿಸಿದರು.

KVS ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಮುಖಂಡ ರಾಜಿತ್ ಮಾತನಾಡಿ, “ಈ ಸಾವಿನ ಬಗ್ಗೆ ನಮ್ಮ ಸಂಘಟನೆ ಗಂಭೀರವಾಗಿ ಪರಿಗಣಿಸಿದ್ದು, ಈ ಅನುಮಾನಾಸ್ಪದ ಸಾವಿಗೆ ನ್ಯಾಯ ಸಿಗುವವರೆಗೂ ಅವರ ಪೋಷಕರ ಜೊತೆಗೆ ನಿಲ್ಲುತ್ತದೆ” ಎಂದು ಪ್ರತಿಜ್ಞೆ ಮಾಡಿದರು.

ಈ ಸಭೆಯಲ್ಲಿ ಮಹಿಳಾ ಮುನ್ನಡೆಯ ರಾಧಾ ಹಾಗಲಗಂಚಿ, ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗಡಿಕಲ್, ದಲಿತ ಮುಖಂಡರಾದ ರಾಜಾ ಶಂಕರ್, ಕುಂಚೂರ್ ವಾಸು, ರವೀಂದ್ರ ಮೊದಲಾದವರು ಮಾತನಾಡಿ, ಬಾಲಕಿಯರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ಆನಂದ್ ಬೆಳಗೊಳ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಈ ಬೃಹತ್ ಪ್ರತಿಭಟನೆ, ಶಾಲಾ ವಸತಿ ನಿಲಯಗಳಲ್ಲಿನ ಸುರಕ್ಷತೆಯ ಬಗ್ಗೆ ಮತ್ತು ಶಿಕ್ಷಣ ಇಲಾಖೆಯ ಮೇಲ್ವಿಚಾರಣೆಯ ವೈಫಲ್ಯಗಳ ಬಗ್ಗೆ ಸಾರ್ವಜನಿಕರ ಆಳವಾದ ಕಳವಳವನ್ನು ಪ್ರತಿಬಿಂಬಿಸುತ್ತದೆ. ನ್ಯಾಯ ಸಿಗುವವರೆಗೂ ಈ ಹೋರಾಟ ಮುಂದುವರಿಯಲಿದೆ ಎಂಬುದರ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...