ಕೆಎಸ್‌ಆರ್‌ಟಿಸಿ | ಟಿಕೆಟ್ ರಹಿತ ಪ್ರಯಾಣ; ಒಂದೇ ತಿಂಗಳಲ್ಲಿ ₹6.54 ಲಕ್ಷ ದಂಡ ಸಂಗ್ರಹ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ರಾಜ್ಯಾದ್ಯಂತ ₹6.54 ಲಕ್ಷ ದಂಡವನ್ನು ಸಂಗ್ರಹಿಸಿದೆ.

ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿ ಸಂಚರಿಸುವ 42,680 ಬಸ್‌ಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ತಪಾಸಣೆ ವೇಳೆ 3,708 ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. 3,754 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ಸಿಬ್ಬಂದಿಗೆ ₹88,429 ದಂಡ ವಿಧಿಸಲಾಗಿದೆ ಎಂದು ಕೆಎಸ್​ಆರ್​ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ನಿಗಮವು ಆದಾಯ ಸೋರಿಕೆ ತಡೆಯುವ ನಿಟ್ಟಿನಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ್ದು, ಕಣ್ಗಾವಲನ್ನೂ ಹೆಚ್ಚಿಸಿದೆ. ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ವಿಭಾಗೀಯ ಮತ್ತು ಕೇಂದ್ರೀಯ ಅಧಿಕಾರಿಗಳ ಮೂಲಕ ಪ್ರತಿದಿನ ಟಿಕೆಟ್ ರಹಿತ ಪ್ರಯಾಣಿಕರ ಮೇಲೆ ನಿಗಾ ಇಡುವುದಾಗಿ ಕೆಎಸ್‌ಆರ್‌ಟಿಸಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ–ಯುಕೆಜಿ ತರಗತಿ ಪ್ರಾರಂಭಿಸಿ; ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಇದೀಗ ಟಿಕೆಟ್​ ರಹಿತ ಪ್ರಯಾಣಿಕರ ವಿರುದ್ಧದ ಕಾರ್ಯಾಚರಣೆ, ದಂಡ ಸಂಗ್ರಹದಿಂದ ಕೆಎಸ್​ಆರ್​ಟಿಸಿ ಖಜಾನೆಗೆ ಲಕ್ಷಾಂತರ ರೂ. ಸೇರ್ಪಡೆಯಾದಂತಾಗಿದೆ. ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ / ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮವು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...