ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕಾ ಕುಮಾರಸ್ವಾಮಿ: ಕಾಂಗ್ರೆಸ್‌ ಪ್ರಶ್ನೆ

Date:

  • ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!
  • ‘ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ’

”ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಎಚ್ ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!” ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಕುರಿತು ವಿಡಿಯೋ ಹಂಚಿಕೊಂಡು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ” ಎಂದು ವ್ಯಂಗ್ಯವಾಡಿದೆ.
“ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ! ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಖವಾಗಿ ಮಾತನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ʼಬರʼ ಎದುರಿಸುತ್ತಿದ್ದೀರಾ” ಎಂದು ಪ್ರಶ್ನಿಸಿದ್ದಾರೆ.
“ಅದೇನೋ ಪತ್ರಿಕಾಗೋಷ್ಠಿ ನಡೆಸಿ ʼಕರ್ನಾಟಕ ಕತ್ತಲಲ್ಲಿದೆʼ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?! ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ ʼದಿವಾಳಿʼಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು?” ಎಂದು ಕಾಂಗ್ರೆಸ್‌ ಕುಟುಕಿದೆ.
ಈ ವಿಚಾರವಾಗಿ  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, “ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಸೋಷಿಯಲ್ ಮೀಡಿಯಾ ತಂಡ ಅದರ ಡ್ಯೂಟಿ ಮಾಡಿದೆ. ಅಚಾತುರ್ಯವೋ, ಕಳ್ಳತನವೋ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಸ್ಕಾಂ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ತಾರೆ. ಇದಕ್ಕೆ ನಾವು ಮಧ್ಯಪ್ರವೇಶ ಮಾಡುವ ಅವಶ್ಯಕತೆ ಇಲ್ಲ.  ಕಾಂಪೌಂಡ್ ನಾನು ಹಾಕಿದ್ನಾ, ಅವರು ಹಾಕಿದರೋ ದೂರು ಕೊಡಲಿ. ಅಸೂಯೆಗೆ ಮದ್ದಿಲ್ಲ, ಪಾಪ ಕುಮಾರಸ್ವಾಮಿಗೆ ತಡೆದುಕೊಳ್ಳಲು ಆಗ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...