ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

Date:

ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣವನ್ನು ಬಹಿರಂಗವಾಗಿ ಖಂಡಿಸಿದ ಕೆಲವೇ ಕೆಲವರಲ್ಲಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರು ಕೂಡ ಒಬ್ಬರು. ಇವರು ಈ ಬಗ್ಗೆ ಪದೇ ಪದೆ ದನಿ ಎತ್ತುತ್ತಾ ಬರುತ್ತಿದ್ದಾರೆ. ಮತ್ತೊಮ್ಮೆ ಕುರಿತು ಪೋಸ್ಟ್ ಮಾಡಿದ್ದಾರೆ.

ದರ್ಶನ್ ಬಂಧನ ವಿಚಾರದಲ್ಲಿ ಪೊಲೀಸರು ಯಾವುದೇ ಪ್ರಭಾವ, ಆಮಿಷಕ್ಕೆ ಒಳಗಾಗದೆ ಸರಿಯಾಗಿ ಕೆಲಸ ಮಾಡಿ ಪ್ರಕರಣದಲ್ಲಿ ಅಮಾಯಕ, ಮುಗ್ಧರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮತ್ತೇ ಪೋಸ್ಟ್‌ ಮಾಡಿದ ಅವರು, “ಕಾನೂನು ಉಲ್ಲಂಘಿಸಿ ಶ್ರೀಮಂತರು ಹಾಗೂ ಶಕ್ತಿಶಾಲಿಗಳು ಸುದ್ದಿಯಲ್ಲಿದ್ದಾರೆ. ಇವರ ಹಿಂಸಾತ್ಮಕ ಕೃತ್ಯಗಳಿಂದ ಬಡವರು, ಮಹಿಳೆಯರು ಮತ್ತು ಮಕ್ಕಳು ಬದುಕು ನಾಶವಾಗಿದೆ. ಇಂಥ ಅಪರಾಧ ಕೃತ್ಯಗಳನ್ನು ಹೊರಗಡೆ ತಂದ ನಮ್ಮ ರಾಜ್ಯದ ಪೊಲೀಸರು ಹಾಗೂ ಮಾಧ್ಯಮಗಳಿಗೆ ಹ್ಯಾಟ್ಸ್ಆಫ್” ಎಂದಿದ್ದಾರೆ.

ಮುಂದುವರೆದು, “ಈ ವಿಚಾರಣೆಯನ್ನು ತೀವ್ರಗೊಳಿಸಿ, ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಾಗ ನ್ಯಾಯ ಖಂಡಿತ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ?” ಎಂದು ಪ್ರಜ್ವಲ್ ರೇವಣ್ಣ, ನಟ ದರ್ಶನ್, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸೂರಜ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿ ಹೇಳಿದ್ದಾರೆ.

ಟ್ವೀಟ್‌ನ ಕೊನೆಯಲ್ಲಿ ರಮ್ಯಾ ಅವರು ಪ್ರಜ್ವಲ್ರೇವಣ್ಣ, ದರ್ಶನ್‌, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹಾಗೂ ಸೂರಜ್ರೇವಣ್ಣ ಅವರ ಹೆಸರನ್ನು ಹ್ಯಾಷ್ಟ್ಯಾಗ್‌ನಲ್ಲಿ ಬಳಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ

ಸದ್ಯ ಇವರು ಮಾಡಿದ ಎಕ್ಸ್ ಪೋಸ್ಟ್​​ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರು ಕಮೆಂಟ್ಸ್ಮಾಡುತ್ತಿದ್ದಾರೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಪೊಲೀಸ್ಕಸ್ಟಡಿಯಲ್ಲಿದ್ದಾರೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ದಾಖಲಾಗಿದೆ. ಇದೀಗ, ಮಾಜಿ ಪ್ರಧಾನಿ ದೇವೇಗೌಡರ ಮತ್ತೊಬ್ಬ ಮೊಮ್ಮಗ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಪುತ್ರ ಸೂರಜ್ರೇವಣ್ಣ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...