ಒಕ್ಕಲಿಗ ಸಮುದಾಯದ ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಲಿ: ನಿರ್ಮಲಾನಂದನಾಥ ಸ್ವಾಮೀಜಿ

Date:

  • ಮುಖ್ಯಮಂತ್ರಿ ಪಟ್ಟಕ್ಕೆ ಸಂಬಂಧಿಸಿ ಮಠಾಧೀಶರ ಫರ್ಮಾನು
  • ಕಾಂಗ್ರೆಸ್ ಸಭೆಯ ನಡುವೆ ಸ್ವಾಮೀಜಿಗಳ ನಿರ್ಧಾರ ಪ್ರಕಟ

ಒಕ್ಕಲಿಗ ಸಮುದಾಯದ ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಲಾಭಿಗೆ ಮುಂದಾಗಿದ್ದಾರೆ.

ಕಾಂಗ್ರೆಸ್‌ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದು, ಮುಖ್ಯಮಂತ್ರಿ ಆಯ್ಕೆಗೆ ಶಾಂಗ್ರಿಲಾ ಹೋಟೆಲ್‌ನಲ್ಲಿ ಸಭೆ ಸೇರಿದ್ದಾರೆ. ಈ ನಡುವೆ ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.

“ಚುನಾವಣೆಗಳಲ್ಲಿ ಕಾಂಗ್ರೆಸ್ ಬಹುಮತ ಪಡೆದಾಗ ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗುವ ಸಂಪ್ರದಾಯವಿದೆ. ಅದನ್ನು ಈಗಲೂ ಪಾಲಿಸುವಂತೆ ಆಗಲಿ. ಆ ಸಂಪ್ರದಾಯ ಮುರಿಯಬಾರದು” ಎಂದು ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿ ಕೆ ಶಿವಕುಮಾರ್‌ ಅವರು ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದ್ದಾಗ ಹಗಲು- ರಾತ್ರಿ ಎನ್ನದೇ ಸಂಘಟಿಸಿ ಅಧಿಕಾರಕ್ಕೆ ತಂದಿದ್ದಾರೆ. ಅವರನ್ನೇ ಮುಖ್ಯಮಂತ್ರಿ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕೊಳ್ಳೇಗಾಲ | ಸ್ವಾಭಿಮಾನದ ಕ್ಷೇತ್ರದಲ್ಲಿ ಬಿಜೆಪಿಗೆ ಹೀನಾಯ ಸೋಲು

“ಶಿವಕುಮಾರ್ ಅವರು ಅತ್ಯಂತ ಬದ್ಧತೆ ಹಾಗೂ ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಅಧಿಕಾರ ಸಿಕ್ಕರೆ ಒಳ್ಳೆಯ ಆಡಳಿತ ನೀಡಲಿದ್ದಾರೆ. ಸಿದ್ದರಾಮಯ್ಯ ಅವರು ಈ ಹಿಂದೆ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು.ಈಗ ಶಿವಕುಮಾರ್‌ಗೆ ಅವಕಾಶ ಸಿಗಲಿ” ಎಂದು ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.

ಸ್ವಾಮೀಜಿ ಮತ್ತು ಒಕ್ಕಲಿಗ ಸಂಘದ ನಿರ್ಧಾರವನ್ನು ಕೆಲವು ಶಾಸಕರು ಹೊತ್ತು ತಂದಿದ್ದು, ಕಾಂಗ್ರೆಸ್‌ ಶಾಸಕರ ಸಭೆಯಲ್ಲಿ ಪ್ರಸ್ತಾಪಿಸಿ ಡಿ ಕೆ ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಪ್ರತಿಪಾದಿಸಲಿದ್ದಾರೆ. ಹೈಕಮಾಂಡ್‌ ಈ ನಿರ್ಧಾರಕ್ಕೆ ಹೇಗೆ ಸ್ಪಂದಿಸಲಿದ ಎಂಬುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...