ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಜವಾಬ್ದಾರಿ ನಿರ್ವಹಿಸಲಿ: ಬಿ ಕೆ ಹರಿಪ್ರಸಾದ್‌

Date:

ಚುನಾವಣಾ ಆಯೋಗವು ಕಾಂಗ್ರೆಸ್ ಪಕ್ಷವನ್ನು ಬೆದರಿಸುವುದು, ಕಿವಿ ಹಿಂಡುವುದನ್ನು, ಬುದ್ದಿ ಹೇಳುವುದನ್ನು ಬಿಟ್ಟು, ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ತನ್ನ ಜವಾಬ್ದಾರಿ ನಿರ್ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಖಾಯಂ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

ಗುರುವಾರ (ಮೆ 23) ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ದೇಶದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯೂ ಹಿಂದೆಂದೂ ನಡೆಯದ ದ್ವೇಷ, ಅರಾಜಕತೆ, ಪಕ್ಷಪಾತಿತನದಿಂದಲೇ ನಡೆಯುತ್ತಿರುವುದನ್ನ ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ಬಾರಿಯ ಚುನಾವಣೆ ಪ್ರಜಾಪ್ರಭುತ್ವ, ಸಂವಿಧಾನದ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಇಂತಹ ಅಪಾಯವನ್ನು ದೇಶದ ಜನರಿಂದ ಮುಚ್ಚಿಡಬೇಕೆಂದು ಚುನಾವಣಾ ಆಯೋಗ ತಾಕೀತು ಮಾಡಿರುವುದು ಆಶ್ಚರ್ಯ!” ಎಂದಿದ್ದಾರೆ.

“ಬಿಜೆಪಿ ಸಂಸದರು, ಹಿರಿಯ ನಾಯಕರುಗಳು ಈ ಬಾರಿ ಅಧಿಕಾರಕ್ಕೆ ಬಂದರೆ ನಾವು ಸಂವಿಧಾನ ಬದಲಾವಣೆ ಮಾಡಿಯೇ ಸಿದ್ಧ ಎಂದು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. “ದೇಶದ ಹಿತಕ್ಕಾಗಿ ಸಂವಿಧಾನ ಬದಲಾವಣೆ ಮಾಡುವುದು ಅನಿವಾರ್ಯ” ಎಂದು ಬಹಿರಂಗ ಚುನಾವಣಾ ಪ್ರಚಾರದಲ್ಲಿ ರಾಜಸ್ತಾನದ ನಾಗೌರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜ್ಯೋತಿ ಮಿರ್ಧಾ ಹೇಳಿಕೆ ನೀಡಿದ್ದಾರೆ. “ಮತ್ತೆ ಅಧಿಕಾರಕ್ಕೆ ಬಂದರೆ ದೇಶಕ್ಕೆ ಹೊಸ ಸಂವಿಧಾನ ನೀಡುತ್ತೇವೆ” ಎಂದು ಅಯೋಧ್ಯೆಯ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಲಲ್ಲೂ ಸಿಂಗ್ ಕೂಡಿ ಹೇಳಿಕೆ ನೀಡಿದ್ದಾರೆ. ಮುಂದುವರೆದು ಹಾಲಿ ಸಂಸದ, ಕೇಂದ್ರದ ಮಾಜಿ ಮಂತ್ರಿ ಅನಂತ ಕುಮಾರ ಹೆಗಡೆ “ಸಂವಿಧಾನ ಬದಲಾವಣೆ ಮಾಡಲು 400 ಸ್ಥಾನಗಳು ಬಿಜೆಪಿಗೆ ಅನಿವಾರ್ಯ” ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಅಪಾಯಕಾರಿ ಹೇಳಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿಯಾಗಲಿ, ಬಿಜೆಪಿ ಪಕ್ಷವಾಗಲಿ ಕನಿಷ್ಟ ಸ್ಪಷ್ಟನೆಯನ್ನೂ ನೀಡಿಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ಮೋದಿಯ ಸುತ್ತಾಮುತ್ತಾ ಸಂವಿಧಾನ ಬದಲಾಯಿಸುವವರನ್ನೇ ಆರ್ಥಿಕ ಸಲಹೆಗಾರರನ್ನಾಗಿ ಮಾಡಿಕೊಂಡಿದ್ದಾರೆ. ಪ್ರಧಾನಿಯ ಆರ್ಥಿಕ ಮುಖ್ಯ ಸಲಹೆಗಾರ “ಬಿಬೇಕ್ ದೇಬ್ರಾಯ” ಹೊಸ ಸಂವಿಧಾನದ ಅಗತ್ಯವಿದೆ ಎಂದು ಅಂಕಣವೇ ಬರೆದಿದ್ದು ಜಗಜ್ಜಾಹೀರಾಗಿದೆ. ಸಂವಿಧಾನ ಹಾಗೂ ಮೀಸಲಾತಿ ವಿರೋಧಿ ಮನಸ್ಥಿತಿ ಬಿಜೆಪಿಯ ಹುಟ್ಟಿನಿಂದಲೇ ಇರುವುದು ಗೌಪ್ಯ ವಿಷಯವಲ್ಲ. ಆದರೆ ಸಂವಿಧಾನದಡಿಯಲ್ಲಿ ಕಾರ್ಯನಿರ್ಹವಹಿಸಬೇಕಾದ ಚುನಾವಣಾ ಆಯೋಗದ ಮೌನದ ಹಿಂದಿನ ಉದ್ದೇಶವೇನು? ಈ ಕ್ಷಣದವರೆಗೂ ನೋಟಿಸ್ ನೀಡಲು ಕೂಡ ಯಾರ ಒಪ್ಪಿಗೆಗೆ ಕಾಯುತ್ತಿದ್ದೆ? ದೇಶದ ಅತಿದೊಡ್ಡ ವಿರೋಧ ಪಕ್ಷವನ್ನು ಬೆದರಿಸುತ್ತಿರುವುದು ಯಾರ ಅಣತಿಯಂತೆ” ಎಂದು ಪ್ರಶ್ನಿಸಿದ್ದಾರೆ.

“ದೇಶದ ಸಂವಿಧಾನವನ್ನು ರದ್ದುಪಡಿಸಬಹುದು ಎಂಬಂತಹ ತಪ್ಪು ಭಾವನೆ ಮೂಡಿಸುವ ಹೇಳಿಕೆಗಳನ್ನು ನೀಡಬಾರದು” ಎಂದು ಕಾಂಗ್ರೆಸ್ ಪಕ್ಷವನ್ನು ತಾಕೀತು ಮಾಡುತ್ತಿರುವುದನ್ನ ನೋಡಿದರೆ ಸಂವಿಧಾನ ಬದಲಾವಣೆ ಮಾಡುವ ಬಿಜೆಪಿಯ ಉದ್ದೇಶಕ್ಕೆ ಚುನಾವಣಾ ಆಯೋಗದ ಸಮ್ಮಿತಿ ಇದೆಯೇ? ಸಂವಿಧಾನ ಅಪಾಯದಲ್ಲಿರುವುದು ದೇಶದ ಜನರಿಗೆ ತಿಳಿಸುವುದು ತಪ್ಪೇ? ಧರ್ಮದ ಆಧಾರದಲ್ಲಿ ಪ್ರಧಾನಿಯಾದಿಯಾಗಿ ಬಿಜೆಪಿಯ ನಾಯಕರು ಬಹಿರಂಗವಾಗಿ ದ್ವೇಷ ಭಾಷಣವನ್ನು ಮಾಡುತ್ತಿದ್ದರೂ ಚುನಾವಣಾ ಆಯೋಗದ ಕಣ್ಣಿಗೆ ಕಾಣಿಸುತ್ತಿಲ್ಲವೇ?” ಎಂದು ಕೇಳಿದ್ದಾರೆ.

“ಭಾರತದ ಚುನಾವಣಾ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಚುನಾವಣಾ ಆಯೋಗದ ಪಕ್ಷಪಾತಿತನ ಹಾಗೂ ನಿಷ್ಕ್ರಿಯತೆಯನ್ನು ದೇಶ ನೋಡುತ್ತಿದೆ. ದೇಶದ ಮತದಾರರೂ ಚುನಾವಣಾ ಆಯೋಗದ ಮೇಲಿನ ಸಂಪೂರ್ಣ ಭರವಸೆ ಕಳೆದುಕೊಳ್ಳುವ ಮೊದಲು, ತನ್ನ ಘನತೆ,ಪರಂಪರೆಗೆ ಪೂರಕವಾಗಿ ಕಾರ್ಯನಿರ್ವಹಿಸಲಿ” ಎಂದು ಬಿ ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...