ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯ; ಉಲ್ಲಂಘಿಸಿದ ವಾಣಿಜ್ಯ ಮಳಿಗೆಗಳ ಪರವಾನಗಿ ಅಮಾನತು

Date:

ಫೆ.28 ರೊಳಗೆ 60% ಕನ್ನಡವುಳ್ಳ ನಾಮಫಲಕಗಳನ್ನು ಅಳವಡಿಸದ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್‌ಗಳು ಮುಂತಾದವುಗಳ ಪರವಾನಗಿಯನ್ನು ಅಮಾನತು ಗೊಳಿಸಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.

ಈ ಬಗ್ಗೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿರೋಶ್ ಪ್ರಕಟಣೆ ನೀಡಿದ್ದಾರೆ. “ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ಗಳು ಮುಂತಾದವುಗಳು ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಿದೆ” ಎಂದು ತಿಳಿಸಿದ್ದಾರೆ.

ಹಿಂದೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಫೆ.2 ಮತ್ತು ಫೆ.12ರಂದು ನಡೆದ ಸಭೆಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲ ವಾಣಿಜ್ಯ ಉದ್ದಿಮೆಗಳು ಫೆ.28 ರೊಳಗೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವಂತೆ ಎಲ್ಲ ವಾಣಿಜ್ಯದಾರರಿಗೆ ಸೂಚಿಸಿದ್ದರು” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

ಫೆ.29 ರಿಂದ ಅನ್ವಯವಾಗುವಂತೆ, ಪಾಲಿಕೆಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸದೇ ಇರುವ ವಾಣಿಜ್ಯ ಉದ್ದಿಮೆಗಳನ್ನು ಇಲಾಖಾ ವತಿಯಿಂದ ನೀಡಿರುವ ಉದ್ದಿಮೆ ಪರವಾನಿಗೆಗಳನ್ನು ಅಮಾನತುಗೊಳಿಸಲು ಜತೆಗೆ, ಅಂತಹ ವಾಣಿಜ್ಯ ಉದ್ದಿಮೆಗಳನ್ನು ಬೀಗಮುದ್ರೆ ಮಾಡಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...