ಸರ್ಕಾರಿ ಗೌರವಗಳೊಂದಿಗೆ ಲೀಲಾವತಿ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

Date:

ಲೀಲಾವತಿ ಅವರು ಪರಿಪೂರ್ಣ ಕಲಾವಿದೆ. 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಲೀಲಾವತಿ ಅವರು ಬಹುಭಾಷಾ ನಟಿಯಾಗಿದ್ದರು. ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬುವ ಶಕ್ತಿ ಲೀಲಾವತಿ ಅವರಿಗಿತ್ತು. ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಮಾತನಾಡಿದ ಅವರು, “ಎಷ್ಟೇ ಕಷ್ಟದ ನಡುವೆಯೂ ಲೀಲಾವತಿ ಅವರ ಕುಟುಂಬ ಸರ್ಕಾರದ ಸಹಾಯ ಕೇಳಿರಲಿಲ್ಲ” ಎಂದರು.

“ನಮ್ಮ ಕಾಲದಲ್ಲಿ ರಾಜ್‌ಕುಮಾರ್ – ಲೀಲಾವತಿ ಜೋಡಿ ಜನಪ್ರಿಯವಾಗಿತ್ತು. ವಿದ್ಯಾರ್ಥಿಯಾಗಿದ್ದಾಗ ಅವರ ಸಿನಿಮಾಗಳನ್ನು ನೋಡುತ್ತಿದ್ದೆ. ಲೀಲಾವತಿ ನಟಿಸಿದ್ದ ‘ಕುಲವಧು’ ಸಿನಿಮಾ ಇಷ್ಟವಾಗಿತ್ತು. ವಾರದ ಹಿಂದಷ್ಟೇ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೆ” ಎಂದು ಹೇಳೀದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸುಳ್ಳು ಆರೋಪ: ತಪ್ಪು ಯತ್ನಾಳರದ್ದೋ, ಕಾಂಗ್ರೆಸ್ಸಿನವರದ್ದೋ?

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, “ಲೀಲಾವತಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಸ್ಮಾರಕ ನಿರ್ಮಾಣ ವಿಚಾರದಲ್ಲಿ ನಾನೊಬ್ಬನೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುತ್ತೇವೆ” ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಹಿರಿಯ ನಟ ದ್ವಾರಕೀಶ್‌, ನಟ ಶಿವರಾಜ್‌ಕುಮಾರ್‌, ನಟಿಯರಾದ ಪೂಜಾಗಾಂಧಿ, ಸುಧಾರಾಣಿ, ಮಾಳವಿಕಾ ಅವಿನಾಶ್‌ ಸೇರಿದಂತೆ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಅಂತಿಮ ದರ್ಶನ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...