ರಾಜ್ಯದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಟ್ಯೂಷನ್ ಕೇಂದ್ರಗಳ ವಿರುದ್ಧ ಸಾಕ್ಷರತಾ ಇಲಾಖೆ ಕ್ರಮ

Date:

ಟ್ಯೂಷನ್‌ ಕೇಂದ್ರಗಳ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳು ಶಾಲೆಯ ಸಾಮಾನ್ಯ ತರತಿಗತಿಗಳನ್ನು ತಪ್ಪಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಕ್ರಮ ಟ್ಯೂಷನ್ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಸಜ್ಜಾಗಿದೆ.

ಉತ್ತರದ ಜಿಲ್ಲೆಗಳಲ್ಲಿ ಈ ಪದ್ಧತಿ ವ್ಯಾಪಕವಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಪ್ರಕಾರ, ಹೆಚ್ಚಿನ ಅನಧಿಕೃತ ಟ್ಯುಟೋರಿಯಲ್ ಕೇಂದ್ರಗಳು ರಾಜ್ಯದ ಜನಪ್ರಿಯ ಸರ್ಕಾರಿ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕಾಗಿ ಕೋಚಿಂಗ್ ತರಗತಿಗಳನ್ನು ನಡೆಸುತ್ತವೆ.

“ವಿದ್ಯಾರ್ಥಿಗಳು ನಿಯಮಿತವಾಗಿ ಕೋಚಿಂಗ್ ಕೇಂದ್ರಗಳಿಗೆ ಹಾಜರಾಗುತ್ತಿದ್ದು, ತಮ್ಮ ಪರೀಕ್ಷೆಗಳನ್ನು ಬರೆಯಲು ಮಾತ್ರ ತಮ್ಮ ಶಾಲೆಗಳಿಗೆ ಮರಳುತ್ತಿದ್ದಾರೆ. ಈ ಟ್ಯುಟೋರಿಯಲ್ ಕೇಂದ್ರಗಳಲ್ಲಿ ವಾರ್ಷಿಕ ಶುಲ್ಕ ₹40,000ದಿಂದ ₹50,000ದವರೆಗೆ ಇರುತ್ತದೆ” ಎಂದು ವಿಜಯಪುರದ ಖಾಸಗಿ ಶಾಲಾ ಮಾಲೀಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲಾಖೆಯ ಆಯುಕ್ತ ತ್ರಿಲೋಕ್ ಚಂದ್ರ ಬಿ ವಿ ಸುತ್ತೋಲೆ ಹೊರಡಿಸಿದ್ದು, ಎಲ್ಲ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕರು(ಡಿಡಿಪಿಐಗಳು) ನೋಂದಣಿಯಾಗದ ಟ್ಯುಟೋರಿಯಲ್‌ಗಳನ್ನು ಗುರುತಿಸಿ ಇಲಾಖೆಗೆ ವರದಿ ನೀಡುವಂತೆ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಗುಮ್ಮಲ ಡ್ಯಾಂನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ವಿಜಯನಗರ ಜಿಲ್ಲೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹಲವಾರು ವಿದ್ಯಾರ್ಥಿಗಳು ಅನಧಿಕೃತ ಕೋಚಿಂಗ್ ಕೇಂದ್ರಗಳಲ್ಲಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು. ಅನಧಿಕೃತ ಕೋಚಿಂಗ್ ಕೇಂದ್ರಗಳನ್ನು ನಿಗ್ರಹಿಸಲು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನವೆಂಬರ್ 26ರಂದು ಹೊರಡಿಸಿದ ನೋಟಿಸ್‌ನಲ್ಲಿ, “ಕೋಚಿಂಗ್ ಕೇಂದ್ರಗಳು ಅನಧಿಕೃತವಾಗಿ ನಡೆಯುತ್ತಿರುವುದು ಕಂಡುಬಂದರೆ, ಶಿಕ್ಷಣ ಕಾಯ್ದೆಗೆ ಅನುಗುಣವಾಗಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು” ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...