ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

Date:

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು ಪೊಲೀಸ್​ ಇಲಾಖೆ ಬರೋಬ್ಬರಿ 2,172 ಚುನಾವಣಾ ಅಕ್ರಮ ಪ್ರಕರಣಗಳನ್ನು ದಾಖಲು ಮಾಡಿದೆ.

ರಾಜ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಹಾಗೂ ಉಚಿತ ಉಡುಗೊರೆಗಳನ್ನು ಎಸ್​ಎಸ್​ಟಿ ಮತ್ತು ಪೊಲೀಸ್​ ಇಲಾಖೆ ಜಪ್ತಿ ಮಾಡಿದೆ. ಅಬಕಾರಿ ಇಲಾಖೆ 3,098 ಹೀನಸ್ ಪ್ರಕರಣಗಳನ್ನು ದಾಖಲಿಸಿದೆ. ಲೈಸೆನ್ಸ್ ಉಲ್ಲಂಘನೆ ಮಾಡಿದ್ದಕ್ಕೆ 4,789 ಪ್ರಕರಣ, ಎನ್​ಡಿಪಿಎಸ್​ ಕಾಯ್ದೆ ಅಡಿ 177, ಸೆಕ್ಷನ್ 15ರಡಿ 28,299 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಒಟ್ಟು 1,916 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಎಫ್​ಎಸ್​ಟಿ ತಂಡ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೋರಮಂಗಲದಲ್ಲಿ ₹18.82 ಲಕ್ಷ, ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೆಜಿಎಫ್​ನ ಬೇತಮಂಗಲದಲ್ಲಿ ₹47.56 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಮೈಸೂರಿನ ಕಾಳಿದಾಸನಹುಂಡಿ ಚೆಕ್​​ಪೋಸ್ಟ್​​ನಲ್ಲಿ ₹81.90 ಲಕ್ಷ, ಬೆಂಗಳೂರಿನ ರಾಯನ್ ಸರ್ಕಲ್ ಚೆಕ್​​​ಪೋಸ್ಟ್​ನಲ್ಲಿ ₹20 ಲಕ್ಷ, ಉಡುಪಿ ಜಿಲ್ಲೆ ಕುಂದಾಪುರದಲ್ಲಿ ₹43.34 ಲಕ್ಷ ಜಪ್ತಿ ಮಾಡಲಾಗಿದೆ. ಈ ನಡುವೆ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಯಲಹಂಕದ ಮಾದನಾಯಕನಹಳ್ಳಿ ಬಳಿ ₹4.80 ಕೋಟಿ ಹಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಮೊದಲ ಹಂತದ ಮತದಾನದಲ್ಲಿ ಶೇ.69 ರಷ್ಟು ಮತದಾನವಾಗಿದೆ. ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...