ಬಂಗಾಳ ಕೊಲ್ಲಿ– ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಮುಂದಿನ 7 ದಿನ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ

Date:

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಪ್ರಕಟಿಸಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 27ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 26ರಂದು ‘ಯೆಲ್ಲೋ ಅಲರ್ಟ್’ ಮತ್ತು 27ರಂದು ‘ಆರೆಂಜ್ ಅಲರ್ಟ್’ ಪ್ರಕಟಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಇಲಾಖೆಯು ಎಚ್ಚರಿಕೆ ನೀಡಿದೆ. 27ರಂದು ಅಲ್ಲಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ. ಇದೇ ವೇಳೆ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಆ ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದ ವಾತಾವರಣದಲ್ಲಿ ತೀವ್ರ ಬದಲಾವಣೆ ಉಂಟಾಗಿದೆ. ಇದರಿಂದ ಅಕ್ಟೋಬರ್ 27ರಂದು ಭಾರೀ ಮಳೆಯ ಸಾಧ್ಯತೆ ಖಚಿತವಾಗಿದೆ. ಅಕ್ಟೋಬರ್ 28ರಂದು ಕೃಷ್ಣಾ ಜಲಾನಯನ ಪ್ರದೇಶದಲ್ಲಿಯೂ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 24ರಿಂದ ನವೆಂಬರ್ 2ರವರೆಗೆ ಈ ಪ್ರದೇಶದಲ್ಲಿ ಕೆಲವೊಮ್ಮೆ ವ್ಯಾಪಕವಾಗಿ, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುರುಡು ದ್ವೇಷದ ಈ ಅಂಧಕಾರಕ್ಕೆ ಅಂತ್ಯವೆಂದು?

ರಾಜಧಾನಿ ಬೆಂಗಳೂರಿನಲ್ಲಿಯೂ ಮೋಡಕವಿದ ವಾತಾವರಣ ಮುಂದುವರಿದಿದ್ದು, ಹವಾಮಾನ ಇಲಾಖೆ ಅಕ್ಟೋಬರ್ 25 ಮತ್ತು 26ರಂದು ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕರ್ನಾಟಕದಲ್ಲಿ ಅಕ್ಟೋಬರ್ 25ರಿಂದ 29ರವರೆಗೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 26 ಮತ್ತು 27ರಂದು ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಅಕ್ಟೋಬರ್ ಅಂತ್ಯದವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು, ಮಂಡ್ಯ, ಕೋಲಾರ ಮುಂತಾದ ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಎಚ್ಚರಿಕೆ ಇದೆ.

ಸರ್ಕಾರಿ ಅಧಿಕಾರಿಗಳು ವಿಪತ್ತು ನಿರ್ವಹಣೆಗೆ ಸಿದ್ಧತೆ ಮಾಡಿಕೊಂಡಿದ್ದು, ಜನರು ಸುರಕ್ಷಿತ ಸ್ಥಳಗಳಲ್ಲಿ ಇರಬೇಕು ಎಂದು ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆಯನ್ನು ಗಮನಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ KSNDMC ಸಲಹೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...