ಮಾರ್ಚ್‌ 1ರಂದು ಟ್ಯಾಂಕರ್ ಮಾಲೀಕರೊಂದಿಗೆ ಸಭೆ: ತುಷಾರ್ ಗಿರಿನಾಥ್

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಕಾಲಕ್ಕೆ ಮಳೆಯಾಗದೇ, ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇನ್ನು ಕಾವೇರಿ ನೀರು ಬಿಡುವ ವೇಳಾಪಟ್ಟಿಯೂ ಬದಲಾಗಿದ್ದು, ಹಲವೆಡೆ ನೀರಿನ ಸಮಸ್ಯೆ ಎದುರಾಗಿದೆ. ಇದನ್ನೇ ಬಂಡವಾಳ ಮಾಡಿಕೊಡಿರುವ ಟ್ಯಾಂಕರ್‌ ಮಾಲೀಕರು ಒಂದು ಟ್ಯಾಂಕರ್‌ ನೀರಿಗೆ ₹3000ವರೆಗೂ ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾ.1 ರಂದು ಟ್ಯಾಂಕರ್‌ ಮಾಲೀಕರೊಂದಿಗೆ ಸಭೆ ನಡೆಸಿ ದರ ನಿಗದಿ ಮಾಡಲಿದ್ದಾರೆ.

ಬೆಂಗಳೂರಿನ ಕಾವೇರಿ ಭವನದಲ್ಲಿ ಫೆ.28 ರಂದು ಬಿಬಿಎಂಪಿ ಹಾಗೂ ಜಲಮಂಡಳಿ ವತಿಯಿಂದ ಜಂಟಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ತುಷಾರ್ ಗಿರಿನಾಥ್ ಅವರು, “ಸಾರಿಗೆ ಇಲಾಖೆ ಪ್ರಕಾರ 3,500 ಟ್ಯಾಂಕರ್​​ಗಳು ಇವೆ. ಟ್ರೇಡ್ ಲೈಸೆನ್ಸ್ ಇರುವ ಟ್ಯಾಂಕರ್ 54 ಇರಬಹುದು. ನಾವು ಅವರಿಗೆ ಒಂದು ವಾರ ಡೆಡ್​​ಲೈನ್ ಕೊಡುತ್ತೇವೆ. ಮಾ.1ರಿಂದ ಮಾರ್ಚ್ 7ರೊಳಗೆ ನೋಂದಣಿ ಕಡ್ಡಾಯ” ಎಂದಿದ್ದಾರೆ.

“ಟ್ರೇಡ್ ಲೈಸೆನ್ಸ್ ಪಡೆದೇ ನೀರು ಸರಬರಾಜು ಮಾಡಬೇಕು. ನೋಂದಣಿ ಮಾಡಿಕೊಳ್ಳದ ಟ್ಯಾಂಕರ್​ ವಶಕ್ಕೆ ಪಡೆಯುತ್ತೇವೆ. ವಾಟರ್ ಟ್ಯಾಂಕರ್​​ನವರ ಜೊತೆ ಮಾತಾಡಿ ದರ ನಿಗದಿ ಮಾಡುತ್ತೇವೆ. 110 ಹಳ್ಳಿಗಳಲ್ಲಿ ನೀರಿನ ಕೊರತೆ ಇದ್ದಾಗ ಬಿಡಬ್ಲ್ಯುಎಸ್​ಎಸ್​ಬಿಯವರೇ ಟ್ಯಾಂಕರ್ ಮೂಲಕ ನೀರು ಪೂರೈಸಿದ್ದಾರೆ. ನೋಂದಣಿಯಾಗದ ಟ್ಯಾಂಕರ್‌ಗಳನ್ನು ವಶಕ್ಕೆ ಪಡೆಯಲಾಗುತ್ತದೆ. ಟ್ರೇಡ್ ಅಸೋಸಿಯೇಷನ್ ಜೊತೆ ಮಾತನಾಡಿ ದರ ನಿಗದಿ ಮಾಡಲಾಗುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ₹12,369 ಕೋಟಿಯ ಬಜೆಟ್‌ ಮಂಡನೆ: 16 ಸಾವಿರ ಪೌರ ಕಾರ್ಮಿಕರ ನೇರ ನೇಮಕಾತಿ

”ನಗರದಲ್ಲಿ ನೀರಿನ ಬವಣೆ ನೀಗಿಸಲು ಜಿಲ್ಲಾಧಿಕಾರಿಗಳು 200 ಟ್ಯಾಂಕರ್‌ಗಳನ್ನು ಜಲಮಂಡಳಿಯ ಸುಪರ್ದಿಗೆ ನೀಡಿದ್ದಾರೆ. ಈ ಪೈಕಿ 110 ಹಳ್ಳಿಗಳು, ಪುರಸಭೆ, ನಗರಸಭೆ ವ್ಯಾಪ್ತಿಗೆ 100 ಟ್ಯಾಂಕರ್‌ ಮತ್ತು ನಗರದ ಕೇಂದ್ರ ಭಾಗದ ಪ್ರದೇಶಗಳಿಗೆ ನೀರು ಪೂರೈಸಲು 100 ಟ್ಯಾಂಕರ್‌ಗಳನ್ನು ಬಳಸಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾದ ಮನೋಹರ ಮಾತನಾಡಿ, “ಎಸ್​ಟಿಪಿ ನೀರನ್ನು ಮತ್ತೊಮ್ಮೆ ಶುದ್ಧೀಕರಣ ಮಾಡಿ ಅವಶ್ಯಕತೆ ಇರುವ ಕಡೆ ನೀರನ್ನು ಕೊಡುತ್ತೇವೆ. ಈ ನೀರನ್ನು ಜನರು ಕಾರ್ ವಾಷ್ ಹಾಗೂ ಗಾರ್ಡನ್​ಗೆ ಬಳಕೆ ಮಾಡಬಹುದಾಗಿದೆ” ಎಂದಿದ್ದಾರೆ.

“ಮೊದಲ ಹಂತದಲ್ಲಿ ಸುಮಾರು 7 ಕೆರೆಗಳಿಗೆ ಶುದ್ಧೀಕರಿಸಿದ ನೀರನ್ನು ತುಂಬುತ್ತವೆ. ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲಸ ಮಾಡುತ್ತೇವೆ. ಕಾವೇರಿ 5ನೇ ಹಂತ ಆದಷ್ಟು ಬೇಗ ಪೂರ್ಣ ಗೊಳಿಸುತ್ತೇವೆ. ಮೇ ಮೊದಲ ವಾರದಲ್ಲಿ ಆ ನೀರನ್ನು ಬೆಂಗಳೂರಿಗೆ ಸರಬರಾಜು ಮಾಡುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...