ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿಎಂ ಸಿದ್ದರಾಮಯ್ಯ

Date:

MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಸಂಗ್ರಾಮ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. MNREGA ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ MNREGA ರದ್ದು ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ ಅವರಿಗೆ ಅಲರ್ಜಿ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಯ್ದೆ-ಕಾನೂನುಗಳು ಬಡವರ ವಿರುದ್ಧವೇ ಅಥವಾ ಪ್ರಭಾವಿಗಳ ಪರವೇ?

ದೇಶದಲ್ಲಿ 12.16 ಕೋಟಿ ಕಾರ್ಮಿಕರಿಗೆ ಕೆಲಸ

ಮನಮೋಹನ್‌ ಸಿಂಗ್ ಅವರು ಪ್ರಧಾನಿಯಾಗಿದ್ದಾಗ MNREGA ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿಸಿದ್ದರು. ನಿರುದ್ಯೋಗ, ಆಹಾರ, ಮಾಹಿತಿ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು. 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ ಎಂದರು.

ವಿಬಿಜಿ ರಾಮ್ ಜಿ ಮೂಲಕ ಮತ್ತೊಮ್ಮೆ ಗಾಂಧೀಜಿ ಕೊಲೆ

ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ. ದಶರಥ ರಾಮ, ಸೀತಾ ರಾಮ ಅಥವಾ ಕೌಶಲ್ಯ ರಾಮನಲ್ಲ. ಮಹಾತ್ಮ ಗಾಂಧಿ ಕೊಂದ ನಾಥೂರಾಮ ಇದು. ಗಾಂಧಿಯವರನ್ನು ಮೊತ್ತೊಮ್ಮೆ ಕೊಲ್ಲುತ್ತಿದ್ದಾರೆ. ಕಾಯ್ದೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಯಾಲಯಕ್ಕೆ ಕೂಡ ಹೋಗಬಹುದಿತ್ತು ಎಂದರು.

ನರೇಗಾ ಬಚಾವ್ ಆಂದೋಲನ ಜನಾಂದೋಲನವಾಗಬೇಕು

ಈಗ ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಇಂಥ ಕಡೆ ಕೆಲಸ ಎಂದು ನಿಗದಿ ಮಾಡುತ್ತದೆ. ಅಲ್ಲಿ ಕೆಲಸ ಮಾಡಬೇಕು. ಈಗ ರಾಜ್ಯಗಳು ಶೇ 40 ವೆಚ್ಚವನ್ನು ಭರಿಸಬೇಕಿದೆ. 2500 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ನರೇಗಾ ಬಚಾವ್ ಆಂದೋಲನವನ್ನು ರೂಪಿಸಿದೆ. ಇದು ಜನಾಂದೋಲನವಾಗಿ ಪರಿವರ್ತನೆ ಆಗಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಸಿ.ಸುಧಾಕರ್, ಕೆ.ಹೆಚ್.ಮುನಿಯಪ್ಪ, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ‌, ಮಾಜಿ ಸಚಿವರುಗಳು, ಹಾಲಿ ಶಾಸಕರು ಮತ್ತು ಸಂಸದರು ಸೇರಿ AICC ಕಾರ್ಯದರ್ಶಿಗಳು, KPCC ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ ಹಲವು ಮುಖಂಡರುಗಳು‌ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...