ಬಾಕ್ಸಿಂಗ್‌ನಲ್ಲಿ ರಾಜ್ಯಕ್ಕೆ ಕೀರ್ತಿ ತಂದ ವಿವಾನ್‌ ಭವಿಷ್ಯ ಉಜ್ವಲವಾಗಲಿ: ಶಾಸಕ ಇಕ್ಬಾಲ್‌ ಹುಸೇನ್‌

Date:

ರಾಷ್ಟ್ರ ಮಟ್ಟದ ಬಾಕ್ಸಿಂಗ್‌ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿ ವಿವಾನ್‌ ಮಂಜುನಾಥ್‌ನ ಭವಿಷ್ಯ ಉಜ್ವಲವಾಗಲಿ ಎಂದು ರಾಮನಗರ ಶಾಸಕ ಎಚ್‌.ಎ.ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ.

ಬಾಕ್ಸಿಂಗ್‌ ಫೆಡರೇಶನ್‌ ಆಫ್‌ ಇಂಡಿಯಾ ಉತ್ತರ ಪ್ರದೇಶದ ನೋಯ್ಡಾದಲ್ಲಿ ಏಪ್ರಿಲ್‌ 21ರಿಂದ 27ರ ವರೆಗೆ ಆಯೋಜಿಸಿದ 7ನೇ ಯೂಥ್‌ ಮೆನ್‌ ಮತ್ತು ವುಮೆನ್ಸ್‌ ರಾಷ್ಟ್ರಮಟ್ಟದ ಬಾಕ್ಸಿಂಗ್‌ ಪಂದ್ಯಾವಳಿಯಲ್ಲಿ ಬೆಂಗಳೂರು ರಾಜರಾಜೇಶ್ವರಿ ನಗರದ ರಾಕ್‌ ಬುಲ್‌ ಅಕಾಡಮಿ ಆಫ್‌ ಆರ್ಟ್ಸ್‌ ಬಾಕ್ಸಿಂಗ್‌ ಕ್ಲಬ್‌ನ ಕ್ರೀಡಾಪಟು, ಬೆಂಗಳೂರು ಡೆಖನ್‌ ಇಂಟರ್ ನ್ಯಾಷನಲ್‌ ಶಾಲೆಯ 12ನೇ ತರಗತಿ ವಿದ್ಯಾರ್ಥಿ ವಿವಾನ್‌ ಮಂಜುನಾಥ್‌ ಅವರಿಗೆ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆಸಿದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯುವ ಶಕ್ತಿ ದೇಶದ ಶಕ್ತಿಯಾಗಿದೆ. ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಚಿಕ್ಕ ವಯಸ್ಸಿನಲ್ಲಿ ಕೀರ್ತಿ ತಂದ ವಿದ್ಯಾರ್ಥಿ ವಿವಾನ್‌ ಮಂಜುನಾಥ್‌ಗೆ ಅಭಿನಂದನೆಗಳು. ಶಾಲೆ ಕಾಲೇಜುಗಳು ಮತ್ತು ಕ್ರೀಡಾ ಅಮಾಡೆಮಿ ಮತ್ತು ಕ್ಲಬ್‌ಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಇರುವ ಉತ್ತಮ ವೇದಿಕೆಯಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಕರ್ನಾಟಕ ಅಮೆಚೂರ್‍‌ ಬಾಕ್ಸಿಂಗ್‌ ಅಸೋಸಿಯೇಶನ್‌ ಅಧ್ಯಕ್ಷ ಡಾ. ಮಂಜೇಗೌಡ, ಪ್ರಧಾನ ಕಾರ್ಯದರ್ಶಿ ಸಾಯಿ ಸತೀಶ್‌, ಬಾಕ್ಸಿಂಗ್‌ ಕೋಚ್‌ ಚಂದ್ರ ಕುಮಾರ್‍‌ ಅವರನ್ನು ಇದೇ ಶಾಸಕ ಇಕ್ಬಾಲ್‌ ಹುಸೇನ್‌ ಸನ್ಮಾನಿಸಿದರು.

ಪಯಸ್ವಿನಿ ಮತ್ತು ಕೆ.ಎಸ್‌.ಮಂಜುನಾಥ್‌ ದಂಪತಿಯ ಪುತ್ರನಾಗಿರುವ ವಿವಾನ್‌ ಮಂಜುನಾಥ್, ಉತ್ತರ ಪ್ರದೇಶದ ನೋಯ್ಡಾದಲ್ಲಿ ರಾಷ್ಟ್ರಮಟ್ಟದ ಬಾಕ್ಸಿಂಗ್‌ ಪಂದ್ಯಾವಳಿಯಲ್ಲಿ 80ರಿಂದ 85 ಕೆಜಿ ತೂಕದ ವಿಭಾಗದಲ್ಲಿ ಕರ್ನಾಟಕ ಅಮೆಚೂರ್‍‌ ಬಾಕ್ಸಿಂಗ್‌ ಅಸೋಸಿಯೇಷನ್‌ ನಿಂದ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆದಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...