ಸಚಿವ ಮಹಾದೇವಪ್ಪ ಜಾತಿವಾಗಿ, ಢೋಂಗಿ ರಾಜಕಾರಣಿ: ಅಸ್ಪೃಶ್ಯ ಅಲೆಮಾರಿ ಮಹಾಒಕ್ಕೂಟ ಆರೋಪ

Date:

“ಮಹಾದೇವಪ್ಪನವರೇ ನೀವೊಬ್ಬ ಅಪ್ಪಟ ಜಾತಿವಾಗಿ, ಸುಳ್ಳುಗಾರ ಢೋಂಗಿ ರಾಜಕಾರಣಿ. ಬಾಬಾ ಸಾಹೇಬರ ಹೆಸರು ನಿಮ್ಮಂಥವರ ಬಾಯಲ್ಲಿ ಬಾರಬಾರದು. ನಮ್ಮಂತಹ ವಂಚಿತ ಸಮುದಾಯಗಳಿಗೆ ಮತ್ತಷ್ಟು ವಂಚನೆ ಮಾಡಿದ್ದೀರಿ” ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದ ಮುಖ್ಯಸ್ಥರಾದ ಮಂಜುನಾಥ್‌ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಮೀಸಲಾತಿಯ ವಿಚಾರದಲ್ಲಿಯೂ ಅನ್ಯಾಯ ಮಾಡಲಾಗಿದೆ. ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪನವರು, ದೆಹಲಿಯಲ್ಲಿ ಧರಣಿ ನಿರತರಾಗಿರುವ ಎಲ್ಲಾ ಅಲೆಮಾರಿ ಸಮುದಾಯಗಳ ಮುಖಂಡರು ಬೆಂಗಳೂರಿಗೆ ಹಿಂದಿರುಗಿ ಬನ್ನಿ, ನಾವು ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡೋಣ. ಇದಲ್ಲದೆ, ಪ್ರತ್ಯೇಕ ಅಭಿವೃದ್ಧಿ ನಿಗಮ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜನ್ನು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಈಗ ಮಾತು ತಪ್ಪಿದ್ದಾರೆ. ಅಲೆಮಾರಿಗಳಿಗೆ ಅನ್ಯಾಯ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಚಿವ ಮಹದೇವಪ್ಪನವರು ಅಲೆಮಾರಿ ಸಮುದಾಯಗಳ ಪ್ರತಿನಿಧಿಗಳನ್ನು 2026-27ನೇ ಸಾಲಿನ ಆಯವ್ಯಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ನೀಡಬೇಕಿರುವ ಹಣಕಾಸಿನ ಕುರಿತು ಚರ್ಚಿಸಿದರು. ಆದರೆ, ಮಾತೆತ್ತಿದರೆ ಅಂಬೇಡ್ಕರ್‌ ಮತ್ತು ಸಂವಿಧಾನವನ್ನು ಮಾತನಾಡುವ ಹಾಗೂ ಸಾಮಾಜಿಕ ನ್ಯಾಯದ ಪಾಠವನ್ನು ಹರಿಬಿಡುವ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಅಲೆಮಾರಿಗಳನ್ನು ಕಡೆಗಣಿಸಿದ್ದಾರೆ” ಎಂದು ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಅನುಸಾರ 49 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ‘ಎ’ನಲ್ಲಿ ಇರಿಸಿ ಶೇ 14ರಷ್ಟು ಮೀಸಲಾತಿಯನ್ನು ನೀಡಬೇಕಿತ್ತು. ಆದರೆ ಕರ್ನಾಟಕ ಸರಕಾರ ಅಲೆಮಾರಿ ಸಮುದಾಯಗಳನ್ನು ಬಲಾಢ್ಯರ ಗುಂಪಿಗೆ ಸೇರಿಸಿ, ಮೀಸಲಾತಿಯನ್ನು ನೀಡದೆ ವಂಚಿಸಿತ್ತು. ಆ ಮೂಲಕ ಸರ್ವೋಚ್ಚ ನ್ಯಾಯಾಲಯವು ಒಳಮೀಸಲಾತಿಯನ್ನು ಕುರಿತು ನೀಡಿದ್ದ ಚಾರಿತ್ರಿಕ ತೀರ್ಪನ್ನೇ ಸರ್ಕಾರ ಮೂಲೆಗುಂಪು ಮಾಡಿತ್ತು. ಇದರ ವಿರುದ್ಧ ನಾವು ಕೋರ್ಟ್‌ಗೆ ಹೋಗುತ್ತೇವೆ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದ ಶೇಷಪ್ಪ ಅಂದೋಳು, ಬಸವರಾಜ ನಾರಾಯಣ್ಕರ್‌, ಡಿ. ಆರ್. ಚಿನ್ನ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನಿಂದ ಪ್ಲಾಟ್‌ಫಾರ್ಮ್‌ ದರ ಏರಿಕೆ: ಗ್ರಾಹಕರಿಗೆ ಸ್ವಿಗ್ಗಿ, ಜೊಮಾಟೊ ಶಾಕ್‌!

ಜೊಮಾಟೊ ತನ್ನ ಪ್ಲಾಟ್‌ಫಾರ್ಮ್‌ ಬೆಲೆಯನ್ನು 19% ಹಚ್ಚಿಸಿದೆ. ಈ ಮೂಲಕ ಪ್ರತಿ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...