ಯತ್ನಾಳ್ ಆರೋಪದ ಹಿಂದಿನ ಗುರಿ ಮೋದಿ ಎಂಬುದು ಬಯಲು: ಸಿಎಂ ಸಿದ್ದರಾಮಯ್ಯ

Date:

  • ಮೌಲ್ವಿ ಹಾಶ್ಮಿ ಅವರ ಜೊತೆಗೆ ಸಾಕ್ಷಾತ್ ನರೇಂದ್ರ ಮೋದಿ ಸಂಬಂಧ ಹೊಂದಿದ್ದಾರೆ
  • ನನ್ನ ವಿರುದ್ಧ ಆರೋಪಿಸಿದರೆ ಮೋದಿ ಸಂಬಂಧ ಹೊರಬರಲಿದೆ ಎಂಬುದು ಯತ್ನಾಳ್‌ಗೆ ಗೊತ್ತಿದೆ

ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ನನ್ನ ವಿರುದ್ದ ಆರೋಪ ಮಾಡಿದರೂ, ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, “ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳೇ ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ” ಎಂದು ಪ್ರಶ್ನಿಸಿದ್ದಾರೆ.

“ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಫೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ” ಎಂದು ತಿಳಿಸಿದ್ದಾರೆ.

“ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಈ ಎರಡನ್ನೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ವ್ಯವಹಾರದಲ್ಲಿ ಪಾಲುದಾರನಲ್ಲ, ಈ ಬಗ್ಗೆ ತನಿಖೆಯಾಗಲಿ: ಯತ್ನಾಳ್

“ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು” ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯಲ್ಲಿರುವ ಯಾವ ‘ಜೀ’ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ. ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...