ಮೋದಿ ಫೋಟೋ ಬಳಕೆ | ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

Date:

ಚುನಾವಣಾ ಪ್ರಚಾರದಲ್ಲಿ ‘ಪ್ರಧಾನಿ ಮೋದಿ’ ಫೋಟೋ ಬಳಕೆ ಮಾಡಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್​ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿದ್ದಾರೆ. ಆದರೆ, ಅವರ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಕೆ ಮಾಡುತ್ತಿದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾಗಿ, ಚುನಾವಣಾ ಪ್ರಚಾರದಲ್ಲಿ ಈಶ್ವರಪ್ಪ ಅವರು ನರೇಂದ್ರ ಮೋದಿ ಅವರ ಫೋಟೋ ಮತ್ತು ಹೆಸರು ಬಳಕೆ ಮಾಡದಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

“ಶಿವಮೊಗ್ಗದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇದ್ದಾರೆ. ಇದರ ಮಧ್ಯದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರವರು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಚುನಾವಣಾ ಪ್ರಚಾರದ ವೇಳೆ, ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಅವರು ಬಳಕೆ ಮಾಡುತ್ತಿದ್ದಾರೆ. ಈಶ್ವರಪ್ಪ ಪಕ್ಷದ ಅಭ್ಯರ್ಥಿ ಅಲ್ಲದ ಕಾರಣ ಪಕ್ಷದ ಹೆಸರು ಭಾವಚಿತ್ರ ಬಳಸುವ ಅಧಿಕಾರ ಅವರಿಗೆ ಇರುವುದಿಲ್ಲ. ಆ ರೀತಿಯಲ್ಲಿ ಮೋದಿ ಫೋಟೋ ಬಳಕೆ ಮಾಡಬಾರದು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ” ಎಂದು ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಪಕ್ಷದ ಹೆಸರನ್ನು ಮತ್ತೊಬ್ಬರು ಬಳಸಬಾರದು. ಆ ರೀತಿಯಲ್ಲಿ ಈಶ್ವರಪ್ಪ ಮಾಡುವುದು ಮುಂದುವರಿದರೆ, ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮವಾಗುತ್ತದೆ. ನಮ್ಮ ಪಕ್ಷದ ಅಭ್ಯರ್ಥಿ ಆಗಿಲ್ಲ ಅಂದರೆ ಅವರು ನಮ್ಮ ಪಕ್ಷದ ಹೆಸರು, ಭಾವಚಿತ್ರ ಬಳಸುವ ಅಧಿಕಾರ ಇರುವುದಿಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಎರಡು ಟ್ರಾಕ್ಟರ್, ಬೈಕ್

ಪುತ್ರ ಕಾಂತೇಶ್‌ಗೆ ಹಾವೇರಿಯಿಂದ ಬಿಜೆಪಿ ಟಿಕೆಟ್‌ ನೀಡದ ಕಾರಣ ಕೆ.ಎಸ್‌.ಈಶ್ವರಪ್ಪ ಅವರು ಬಂಡಾಯವೆದಿದ್ದಾರೆ. ಬಿ.ವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ. ಚುನಾವಣಾ ಪ್ರಚಾರದ ವೇಳೆ, ಈಶ್ವರಪ್ಪ ಅವರು ಬಿಜೆಪಿ ಚಿಹ್ನೆ ಕೈ ಬಿಟ್ಟು, ಮೋದಿ ಅವರ ಫೋಟೋ ಬಳಕೆ ಮಾಡುತ್ತಿದ್ದಾರೆ.

ಮೋದಿ ಫೋಟೊ ಬಳಕೆ ಮಾಡುವ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ಈಶ್ವರಪ್ಪ ವಿರುದ್ಧ ವ್ಯಂಗ್ಯವಾಡಿದ್ದರು.

ರಾಘವೇಂದ್ರ ಅವರಿಗೆ ತಿರುಗೇಟು ನೀಡಿದ್ದ ಈಶ್ವರಪ್ಪ, “ಮೋದಿ ಅವರಪ್ಪನ ಆಸ್ತಿನಾ, ಮೋದಿ ಭಾವಚಿತ್ರವನ್ನು ಯಾರಾದರೂ ಬಳಸಬಹುದು” ಎಂದು ಹೇಳಿದ್ದರು. ಈ ಘಟನೆ ಬೆನ್ನಲ್ಲೇ, ಮೋದಿ ಅವರ ಫೋಟೋ ಬಳಕೆಗಾಗಿ ಕೋರ್ಟ್​ಗೆ ಕೆವಿಯಟ್‌ ಅರ್ಜಿ ಸಲ್ಲಿಸಿದ್ದಾರೆ. ಈಶ್ವರಪ್ಪ ಅವರ ದೂರು ಹೊರತುಪಡಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ನಾಲ್ಕು ದೂರು ನೀಡಿದೆ.

  • ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಅಧಿಕಾರಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಊಟ ಬಡಿಸಿರುವ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
  • ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಿರ್ಮಾಪಕರಾಗಿರುವ ರಣಗಲ್ ಚಲನಚಿತ್ರದ ಜಾಹೀರಾತು ಮೊತ್ತವನ್ನು ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಸೇರಿಸಬೇಕು ಎಂದು ದೂರು ನೀಡಿದೆ.
  • ಕುಡಚಿಯಲ್ಲಿ ಬಿಜೆಪಿ ಎಲ್‌ಇಡಿ ವಾಹನದಲ್ಲಿದ್ದ ಪ್ರಣಾಳಿಕೆ ಸಲಹಾ ಪೆಟ್ಟಿಗೆಯನ್ನು ಸುಟ್ಟು ಹಾಕಿರುವ ಬಗ್ಗೆ ದೂರು.
  • ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಅಕ್ಕಿ ಹಂಚುತ್ತಿರುವ ಆರೋಪದ ಬಗ್ಗೆ ದೂರು.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...