ಬಿಜೆಪಿಯನ್ನು ತಿರಸ್ಕರಿಸಿ, ಹಿಂದೂಗಳೇ ನಮ್ಮನ್ನು ಆಯ್ಕೆ ಮಾಡಿದ್ದು, ನಾವು ಹೇಗೆ ಹಿಂದೂ ವಿರೋಧಿ: ಪರಮೇಶ್ವರ್ ಪ್ರಶ್ನೆ

Date:

ಬಿಜೆಪಿಯನ್ನು ತಿರಸ್ಕರಿಸಿ ನಮ್ಮ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಸುಮ್ಮನೇ ಬಿಜೆಪಿ ನಾಯಕರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿರುಗೇಟು ನೀಡಿದರು.

ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ”ಏನೇ ಆರೋಪ ಮಾಡುವುದಕ್ಕೂ ಒಂದು ಮಿತಿ ಇರಬೇಕು. ಇಂತಹ ವಿಷಯಗಳಲ್ಲಿ ನಾವು ನ್ಯಾಯವಾಗಿ ಹೋಗಲು ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

ದತ್ತಪೀಠ ಹೋರಾಟಗಾರರ ವಿರುದ್ಧದ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿ, “ನಾನು ಕೇಸ್ ರೀ ಓಪನ್ ಮಾಡಿಲ್ಲ. ಪೊಲೀಸ್ ಠಾಣೆಯಲ್ಲಿ ಇರುವ ಪ್ರಕರಣಗಳ ವಿರುದ್ಧ ಅಧಿಕಾರಿ ಕ್ರಮ ತೆಗೆದುಕೊಳ್ಳಲು ಹೋದರೆ ರೀ ಓಪನ್ ಮಾಡಿದ್ದೀರಾ ಅಂತ ಕೇಳಿದರೆ ಹೇಗೆ? ಕೋರ್ಟ್ ಸೂಚನೆ ಕೊಟ್ಟಿದ್ದರೆ ನಾವು ಕೇಳಬಾರದಾ? ಬಿಜೆಪಿಯವರು ಕೋರ್ಟ್, ಕಾನೂನಿಗೂ ಬೆಲೆ ಕೊಡುವುದಿಲ್ಲ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀಕಾಂತ್‌ ಪೂಜಾರಿ ಬಂಧನ ಬಗ್ಗೆ ಮಾತನಾಡಿ, “16 ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯ ವಿಷಯಕ್ಕೆ ಇಷ್ಟು ದೊಡ್ಡದು ಮಾಡಿ ಇಡೀ ದೇಶದಲ್ಲಿ ದೊಡ್ಡದು ಮಾಡಲು ಹೊರಟಿದ್ದಾರೆ ಬಿಜೆಪಿಯವರು. ಇದರ ಅರ್ಥ ಬಿಜೆಪಿಯವರು ಅಪರಾಧಿಗಳನ್ನು ಬೆಂಬಲಿಸುತ್ತಿದ್ದಾರೆ. ಒಂಬತ್ತು ಸಾರಾಯಿ ಕೇಸ್ ಸೇರಿದಂತೆ ಬೇರೆ ಬೇರೆ ಪ್ರಕರಣಗಳು ಆತನ ಮೇಲಿದೆ. ಆ ಲಿಸ್ಟ್​ನಲ್ಲಿ ಬೇರೆ ಹಿಂದೂಗಳು ಇದ್ದಾರೆ ಅಲ್ಲವಾ?” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಜಾತಿಭೂತ- ಸುಪ್ರೀಮ್ ಕೋರ್ಟ್ ಕಳವಳ

“ಚುನಾವಣೆ ಮೊದಲು ಚಿತ್ರದುರ್ಗದಲ್ಲಿ ಎಸ್​ಸಿ ಎಸ್​ಟಿ ಸಮಾವೇಶ ಮಾಡಿ 10 ನಿರ್ಣಯ ತೆಗೆದುಕೊಂಡಿದ್ದೆವು. ಸರ್ಕಾರ ಬಂದಾಗ ಅದನ್ನ ಮಾಡುತ್ತೇವೆ ಅಂತ ಘೋಷಣೆ ಮಾಡಿದ್ದೆವು. ಈಗ ಸರ್ಕಾರ ಬಂದಿದೆ. ಅದನ್ನ ಜಾರಿ ಮಾಡಬೇಕು. ಆ ಬಗ್ಗೆಯೂ ಚರ್ಚೆ ಮಾಡುತ್ತಿದ್ದೇವೆ” ಎಂದರು.

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ರಾಜಕೀಯ ಚರ್ಚೆ ವಿಚಾರವಾಗಿ ಮಾತನಾಡಿ, “ಡಿನ್ನರ್ ಮೀಟಿಂಗ್ ಇತ್ತು, ಊಟ ಮಾಡಿ ಬಂದೆ. ರಾಜಕೀಯ ಬಗ್ಗೆಯೂ ಚರ್ಚೆ ಆಗಿದೆ. ಅದನ್ನು ಬಹಿರಂಗಪಡಿಸಲು ಆಗುತ್ತಾ? ನಾವು ರಾಜಕಾರಣಿಗಳು, ರಾಜಕೀಯ ಬಗ್ಗೆ ಮಾತಾಡಿಯೇ ಇರುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...